ನವದೆಹಲಿ (ಮೇ 20) : ಕರ್ನಾಟಕದ (Karnataka) ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಅನುಮತಿ ನೀಡಿದೆ. ಅದಿರು ರಫ್ತಿಗೆ ಅವಕಾಶ ಕೋರಿ ಗಣಿ ಮಾಲೀಕರು (Mine Owners) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ (N.V Ramana) ನೇತೃತ್ವದ ಪೀಠವು, ಅದಿರು ರಫ್ತಿಗೆ 11 ವರ್ಷಗಳ ನಂತರ ಹಸಿರು ನಿಶಾನೆ ನೀಡಿದೆ. ಅಲ್ಲದೆ, ಇ-ಹರಾಜಿನ ಮೂಲಕ ರಾಜ್ಯದಲ್ಲಿ ಅದಿರು ಮಾರಾಟಕ್ಕೆ ಇದ್ದ ಕೆಲವು ಕಠಿಣ ನಿಯಮಗಳನ್ನು ಸಡಿಲಗೊಳಿಸಿ ನ್ಯಾಯ ಪೀಠ ಆದೇಶ ಹೊರಡಿಸಿದೆ.
ಅದಿರು ರಪ್ತಿನ ವಿರುದ್ಧ ಸರ್ಕಾರದ ನಿಲುವು
ಇದರಿಂದಾಗಿ ಉಕ್ಕು (Iron) ಉತ್ಪಾದನಾ ಘಟಕಗಳು ಸ್ಥಳೀಯವಾಗಿ ಅದಿರು ಖರೀದಿಸಲು ನಿಯಮಗಳಲ್ಲಿ ರಿಯಾಯಿತಿ ದೊರೆತಂತಾಗಿದೆ. ರಾಜ್ಯದ ಗಣಿಗಳಿಂದ ಹೊರ ತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಸೂಚಿಸಿತ್ತು.ಇದಕ್ಕೆ ಕಳೆದ ತಿಂಗಳು ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಸರ್ಕಾರ, ಅದಿರು ರಫ್ತಿನ ವಿರುದ್ಧ ತನ್ನ ನಿಲುವು ಸ್ಪಷ್ಟಪಡಿಸಿತ್ತು.
3 ಜಿಲ್ಲೆಗಳಿಗೆ ಅದಿರು ರಪ್ತು ಮಾಡಲು ಅವಕಾಶ
ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ಜಿಲ್ಲೆಗಳಲ್ಲಿನ ಗಣಿಗಳಿಂದ ಅದಿರು ರಫ್ರು ಮಾಡುವುದಕ್ಕೆ ಸುಪ್ರೀಂ ಕೋರ್ಟ್ 2011ರಿಂದ ನಿಷೇಧ ಹೇರಿತ್ತು. ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅದಿರು ರಫ್ತು ನಿಷೇಧಿಸಬೇಕು, ಅದಿರು ಮಾರಾಟದ ಮೇಲೂ ಕಠಿಣ ಕ್ರಮ ಜರುಗಿಸಿ ನಿಯಮಾವಳಿ ರೂಪಿಸಬೇಕು ಎಂದು ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಇದನ್ನೂ ಓದಿ: CM Visit: ಮಳೆ ಹಾನಿ ಪ್ರದೇಶಗಳಿಗೆ ಬಸವರಾಜ ಬೊಮ್ಮಾಯಿ ವಿಸಿಟ್; ಅತ್ತ ಎಚ್‌ಡಿಕೆ ಪ್ರತ್ಯೇಕ ಭೇಟಿ
ಪರಿಸರಕ್ಕೆ ಹಾನಿ ತಡೆಗಟ್ಟಲು ನಿಷೇಧ
ಮಿತಿ ಮೀರಿ ಗಣಿಗಾರಿಕೆ ಮಾಡಿದ್ದರಿಂದ ಕರ್ನಾಟಕದಿಂದ ಕಬ್ಬಿಣದ ಅದಿರು ರಫ್ತು ಮಾಡುವುದನ್ನು ಸುಪ್ರೀಂಕೋರ್ಟ್ ನಿಷೇಧಿಸಿತ್ತು. ಪರಿಸರಕ್ಕೆ ಹಾನಿ ತಡೆಗಟ್ಟುವ ಮತ್ತು ರಾಜ್ಯದ ಖನಿಜ ಸಂಪನ್ಮೂಲಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ನಿರ್ಬಂಧ ಹೇರಿತ್ತು. ಆದರೆ, ಅದಿರು ಮಾರಾಟ ಮತ್ತು ರಫ್ತಿನ ಮೇಲಿನ ನಿರ್ಬಂಧವನ್ನು ತೆಗೆದುಹಾಕುವಂತೆ ಗಣಿಗಾರಿಕೆ ಕಂಪನಿಗಳು ಮನವಿ ಮಾಡಿದ್ದವು. ಅಂತೆಯೇ, ನ್ಯಾಯಪೀಠವು ಕೇಂದ್ರ ಸರ್ಕಾರದ ನಿಲುವು ಮತ್ತು ಅಧಿಕಾರಿಗಳು ವಿಧಿಸಿರುವ ಷರತ್ತುಗಳ ಆಧಾರದ ಮೇಲೆ ಗಣಿ ಸಂಸ್ಥೆಗಳು ಅದಿರು ಸಾಗಿಸಬಹುದು ಎಂದು ಹೇಳಿದೆ.
ಈಗಾಗಲೇ ಅಗೆದ ಕಬ್ಬಿಣ ಅದಿರಿನ ದಾಸ್ತಾನು ಸಾಗಿಸಲು ಅನುಮತಿ ನೀಡಲಾಗುತ್ತಿದೆ. ಕರ್ನಾಟಕದ ಮೂರು ಜಿಲ್ಲೆಗಳಿಂದ ಇ-ಹರಾಜು ಪ್ರಕ್ರಿಯೆ ಇಲ್ಲದೇ ನೇರವಾಗಿ ಕಬ್ಬಿಣದ ಅದಿರು ವಿದೇಶಕ್ಕೆ ಸಾಗಿಸಲು ಅವಕಾಶ ಕೊಡಲಾಗುತ್ತಿದೆ. ಆದರೆ, ಭಾರತ ಸರ್ಕಾರದ ನೀತಿಗಳನ್ನು ಗಣಿ ಕಂಪನಿಗಳು ಪಾಲಿಸಬೇಕೆಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ದೆಹಲಿಗೆ ದೌಡಾಯಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು (ಮೇ 20) : ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳುತ್ತಿದ್ದು, ಇದಕ್ಕೂ ಮೊದಲೇ ಬಿಎಸ್‌ವೈ ಪುತ್ರ ಬಿ ವೈ ವಿಜಯೇಂದ್ರ ದೆಹಲಿಗೆ ಭೇಟಿ ನೀಡಿ ವಾಪಾಸ್ಸಾಗಿರುವುದು ಕುತೂಹಲ ಮೂಡಿಸಿದೆ. ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ