Suresh Angadi: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ; ಇಂದು ರಾಜ್ಯಾದ್ಯಂತ ಶೋಕಾಚರಣೆ
Suresh Angadi Death: ರಾಜ್ಯದಲ್ಲಿ ಇಂದು ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಷ್ಟ್ರಧ್ವಜವನ್ನು ಸರ್ಕಾರದ ಎಲ್ಲ ಕಟ್ಟಡಗಳಲ್ಲಿ ಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ. ಶೋಕಾಚರಣೆ ಮೂಲಕ ಸಚಿವ ಸುರೇಶ್ ಅಂಗಡಿ ಅವರಿಗೆ ಸರ್ಕಾರ ಗೌರವ ಸೂಚಿಸಲಿದೆ.
news18-kannada Updated:September 24, 2020, 8:34 AM IST

ಸುರೇಶ್ ಅಂಗಡಿ
- News18 Kannada
- Last Updated: September 24, 2020, 8:34 AM IST
ಬೆಂಗಳೂರು (ಸೆ. 24): ಕೊರೋನಾದಿಂದ ಬುಧವಾರ ಸಂಜೆ ಕೇಂದ್ರ ಸಚಿವ ಸುರೇಶ್ ಅಂಗಡಿ ಮೃತಪಟ್ಟಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ 4 ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೇಂದ್ರ ಸರ್ಕಾರದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಶೋಕಾಚರಣೆ ನಡೆಸಲು ನಿರ್ಧರಿಸಲಾಗಿದೆ. ಇಂದು ರಾಜ್ಯಾದ್ಯಂತ ಶೋಕಾಚರಣೆ ಆಚರಿಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಆದೇಶದಂತೆ ಈ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆ ಪ್ರಕಾರ, ರಾಜ್ಯದಲ್ಲಿ ಇಂದು ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಷ್ಟ್ರಧ್ವಜವನ್ನು ಸರ್ಕಾರದ ಎಲ್ಲ ಕಟ್ಟಡಗಳಲ್ಲಿ ಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ. ಶೋಕಾಚರಣೆ ಮೂಲಕ ಸಚಿವ ಸುರೇಶ್ ಅಂಗಡಿ ಅವರಿಗೆ ಸರ್ಕಾರ ಗೌರವ ಸೂಚಿಸಲಿದೆ.
ಕೊರೋನಾ ಮಹಾಮಾರಿಗೆ ಬಲಿಯಾದ ಮೊದಲ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: Suresh Angadi Passes Away: ಕೊರೋನಾಗೆ ತುತ್ತಾಗಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ!
65 ವರ್ಷದ ಸುರೇಶ್ ಅಂಗಡಿ ಅವರು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2 ವಾರಗಳ ಹಿಂದೆ ಟ್ವೀಟ್ ಮಾಡಿದ್ದ ಸುರೇಶ್ ಅಂಗಡಿ, ತಾವು ಕೊರೋನಾಗೆ ತುತ್ತಾಗಿದ್ದು, ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2004ರಿಂದ 2019ರವರೆಗೆ 4 ಬಾರಿ ಸುರೇಶ್ ಅಂಗಡಿ ಸಂಸದರಾಗಿ ಆಯ್ಕೆಯಾಗಿದ್ದರು.
ಕಾನೂನು ಪದವೀಧರರಾಗಿರುವ ಸುರೇಶ್ ಅಂಗಡಿ ರಾಜಕೀಯ ಪ್ರವೇಶಕ್ಕೂ ಮೊದಲು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ದೆಹಲಿಯಲ್ಲಿ ಮೃತಪಟ್ಟಿರುವ ಸುರೇಶ್ ಅಂಗಡಿ ಅವರ ಮೃತದೇಹವನ್ನು ಬೆಳಗಾವಿಗೆ ತರಲು ಪ್ರೋಟೋಕಾಲ್ ಅಡ್ಡಿಯಾಗಿತ್ತು. ಕೊರೋನಾದಿಂದ ಮೃತಪಟ್ಟಿರುವುದರಿಂದ ಅವರ ಮೃತದೇಹವನ್ನು ಬೆಳಗಾವಿಗೆ ಸಾಗಿಸಲು ಸರ್ಕಾರ ಅನುಮತಿ ನೀಡಿರಲಿಲ್ಲ. ಹೀಗಾಗಿ, ಇಂದು ದೆಹಲಿಯಲ್ಲೇ ಅಂತ್ಯಕ್ರಿಯೆ ಮಾಡಲು ನಿರ್ಧರಿಸಲಾಗಿದೆ. ಇಂದು ದೆಹಲಿಯ ಲೋದಿ ಎಸ್ಟೇಟ್ ಚಿತಾಗಾರ ಅಥವಾ ದ್ವಾರಕಾದಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಸುರೇಶ್ ಅಂಗಡಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ನಿನ್ನೆ ಸಂಜೆಯೇ ಸುರೇಶ್ ಅಂಗಡಿ ಅವರ ಪತ್ನಿ ದೆಹಲಿಗೆ ತೆರಳಿದ್ದಾರೆ. ಇಂದು ಅವರ ಪುತ್ರಿಯರು ದೆಹಲಿಗೆ ಆಗಮಿಸುತ್ತಿದ್ದಾರೆ.
ಕೊರೋನಾ ಮಹಾಮಾರಿಗೆ ಬಲಿಯಾದ ಮೊದಲ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.