ದೆಹಲಿ (ಸೆಪ್ಟೆಂಬರ್ 23); ಮಾರಣಾಂತಿಕ ಕೊರೋನಾ ಸೋಂಕಿಗೆ ತುತ್ತಾದ ಬೆಳಗಾವಿ ಸಂಸದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಸುರೇಶ್ ಅಂಗಡಿ ಅವರಿಗೆ ಒಂದು ವಾರದ ಹಿಂದೆಯೇ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಸಚಿವರು ಇಂದು ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ವರದಿ ಮಾಡಿವೆ. ಬಿಜೆಪಿ ರಾಜ್ಯ ಸಭಾ ಸದಸ್ಯ ಅಶೋಕ್ ಗಸ್ತಿ ಇದೇ ಕೊರೋನಾಕ್ಕೆ ಬಲಿಯಾಗಿ ಇನ್ನೂ ಒಂದು ವಾರವೂ ಕಳೆದಿಲ್ಲ ಅಷ್ಟರಲ್ಲಿ ರಾಜ್ಯದ ಮತ್ತೋರ್ವ ನಾಯಕ ಕೊರೋನಾಗೆ ಬಲಿಯಾಗಿರುವುದು ದುರಾದೃಷ್ಟಕರ ಎಂದು ಹಲವು ನಾಯಕರು ವಿಷಾಧ ವ್ಯಕ್ತಪಡಿಸಿದ್ದಾರೆ. ಇನ್ನೂ ಸಂಸದ ಸಚಿವ ಸುರೇಶ್ ಅಂಗಡಿ ಅವರ ನಿಧನ ರಾಷ್ಟ್ರ ನಾಯಕರೂ ಸಹ ತಮ್ಮ ಸಂತಾಪಗಳನ್ನು ಸೂಚಿಸಿದ್ದಾರೆ.
ಕೊರೋನಾಗೆ ಬಲಿಯಾದ ಸಚಿವ ಸುರೇಶ್ ಅಂಗಡಿ ನಡೆದುಬಂದ ಹಾದಿ:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ