• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಮುಂದಿನ ನಾಲ್ಕು ತಿಂಗಳಲ್ಲಿ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ದರು ; ಸೋದರ ಮಾವ ಲಿಂಗರಾಜ್ ಪಾಟೀಲ್ ಹೇಳಿಕೆ

ಮುಂದಿನ ನಾಲ್ಕು ತಿಂಗಳಲ್ಲಿ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ದರು ; ಸೋದರ ಮಾವ ಲಿಂಗರಾಜ್ ಪಾಟೀಲ್ ಹೇಳಿಕೆ

ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮುಂದಿನ ನಾಲ್ಕು ತಿಂಗಳಲ್ಲಿ ಸುರೇಶ್ ಅಂಗಡಿ ರಾಜ್ಯದ ಮುಖ್ಯಮಂತ್ರಿ ಆಗುತ್ತಿದ್ದರು. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಆಯ್ಕೆಯನ್ನು ಮಾಡಿದ್ದರು. ಆದರೆ, ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ

  • Share this:

ಬೆಳಗಾವಿ(ಸೆಪ್ಟೆಂಬರ್. 29): ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಇನ್ನೂ ಸೂತಕದ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿಯೇ ಬೆಳಗಾವಿ ಬಿಜೆಪಿಯ ಅನೇಕ ನಾಯಕರು ಮುಂದಿನ ಲೋಕಸಭಾ ಉಪಚುನಾವಣೆಯ ಟಿಕೆಟ್ ಪಡೆಯಲು ಲಾಭಿಯನ್ನು ಆರಂಭಿಸಿದ್ದಾರೆ. ಇದನ್ನು ಗಮನಿಸಿದ ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್, ಚುನಾವಣೆಯ ಟಿಕೆಟ್ ಅಂಗಡಿ ಕುಟುಂಬಸ್ಥರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಬಳಿ ಮನವಿಯನ್ನು ಮಾಡಿಕೊಂಡಿದ್ದಾರೆ. ಬೆಳಗಾವಿಗೆ ಆಗಮಿಸಿದ್ದ ನಳಿನ್ ಕುಮಾರ್ ಕಟೀಲ್ ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಬಿಜೆಪಿ ನಾಯಕರ ಅನೌಪಚಾರಿಕ ಸಭೆಯನ್ನು ನಡೆಸಿದರು. ನಂತರ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಸ್ವಾಂತನ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ವಿಧಾನ ಪರೀಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ್ ಹಾಗೂ ಮಹಾಂತೇಶ ದೊಡ್ಡಗೌಡರ ಭಾಗವಹಿಸಿದ್ದರು.


ಸುರೇಶ್ ಅಂಗಡಿ ನಿವಾಸದಲ್ಲಿ ಹೆಂಡತಿ ಹಾಗೂ ಕುಟುಂಬದ ಸದಸ್ಯರ ಜತೆಗೆ ನಳಿನ್ ಕುಮಾರ್ ಕಟೀಲ್ ಮಾತುಕತೆ ನಡೆಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬುವ ಯತ್ನವನ್ನು ಮಾಡಿದರು. ಈ ಸಂದರ್ಭದಲ್ಲಿ ಸುರೇಶ್ ಅಂಗಡಿ ಸೋದರ ಮಾವ ಲಿಂಗಾರಾಜ್ ಪಾಟೀಲ್ ಮುಂಬರುವ ಉಪಚುನಾವಣೆಯ ಟಿಕೆಟ್ ಕುಟುಂಬಸ್ಥರಿಗೆ ನೀಡಬೇಕು ಎನ್ನುವ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಸಕಾರಾತ್ಮಕವಾಗಿ ಕಟೀಲ್ ಸ್ಪಂದನೆ ನೀಡಿದ್ದಾರೆ ಎಂದು ಲಿಂಗರಾಜ್ ಪಾಟೀಲ್ ಹೇಳಿಕೆ ನೀಡಿದ್ದಾರೆ.


ನಂತರ ನ್ಯೂಸ್ 18 ಕನ್ನಡ ಜತೆಗೆ ಮಾತನಾಡಿದ ಲಿಂಗರಾಜ್ ಪಾಟೀಲ್, ಮುಂದಿನ ನಾಲ್ಕು ತಿಂಗಳಲ್ಲಿ ಸುರೇಶ್ ಅಂಗಡಿ ರಾಜ್ಯದ ಮುಖ್ಯಮಂತ್ರಿ ಆಗುತ್ತಿದ್ದರು. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಆಯ್ಕೆಯನ್ನು ಮಾಡಿದ್ದರು. ಆದರೆ, ದುರ್ದೈವ ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರಮಾಣಿಕ ಮತ್ತು ಹಾರ್ಡ್ ವರ್ಕರ್ ಆಗಿದ್ದರು. ಕುಟುಂಬಸ್ಥರಿಗೆ ಟಿಕೆಟ್ ನೀಡಿದ್ರೆ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಲ್ಲು ಸಾಧ್ಯ. ಇದೇ ನಿರೀಕ್ಷೆಯನ್ನು ಕ್ಷೇತ್ರ ಜನರು ಇದ್ದಾರೆ ಎಂದು ಲಿಂಗರಾಜ್ ಪಾಟೀಲ್ ಹೇಳಿದ್ದರು.


ಇದನ್ನೂ ಓದಿ : ಆರ್.ಆರ್.ನಗರ, ಶಿರಾ ಉಪಚುನಾವಣೆ; 4 ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟ


ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್ ಕಟೀಲ್, ಸುರೇಶ್ ಅಂಗಡಿ ರೈಲ್ವೆ ಸಚಿವರಾಗಿ ರಾಜ್ಯಕ್ಕೆ ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂಬೈ ಕರ್ನಾಟಕದಲ್ಲಿ ಪಕ್ಷ ಸಂಘಟನೆಯಲ್ಲಿ ಸುರೇಶ್ ಅಂಗಡಿ ಅನೇಕ ಕೊಡುಗೆ ನೀಡಿದ್ದರು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮುಂದಿಟ್ಟುಕೊಂಡು ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.




ಮಾರಣಾಂತಿಕ ಕೊರೋನಾ ಸೋಂಕಿಗೆ ತುತ್ತಾದ ಬೆಳಗಾವಿ ಸಂಸದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಿಕಿತ್ಸೆ
ಫಲಕಾರಿಯಾಗದೆ ಸಪ್ಟೆಂಬರ್​ 23 ರಂದು ಮೃತಪಟ್ಟಿದ್ದರು. ಸಚಿವ ಸುರೇಶ್ ಅಂಗಡಿ ಅವರಿಗೆ ಒಂದು ವಾರದ ಹಿಂದೆಯೇ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಸಚಿವರು ನಿಧನ ಹೊಂದಿದ್ದರು.

First published: