HOME » NEWS » State » TAKE ACTION IF TOBACCO SALES NEAR 100 YARD SURROUND OF SCHOOLS SAYS VIJAYAPURA DC MVSV LG

ಶಾಲೆಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡಿದರೆ ಕಠಿಣ ಕ್ರಮ; ವಿಜಯಪುರ ಡಿಸಿ ಎಚ್ಚರಿಕೆ

ಸೆಕ್ಷನ್ 5 ರನ್ವಯ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳ ನಿಷೇಧ ನಿಯಮದ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ಹಾಗೂ ರೂ. 1000 ದಂಡ ವಿಧಿಸಲಾಗುವುದು.  ಎರಡನೆ ಬಾರಿ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಹಾಗೂ ರೂ. 5000 ದಂಡ ವಿಧಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

news18-kannada
Updated:November 7, 2020, 1:30 PM IST
ಶಾಲೆಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡಿದರೆ ಕಠಿಣ ಕ್ರಮ; ವಿಜಯಪುರ ಡಿಸಿ ಎಚ್ಚರಿಕೆ
ವಿಜಯಪುರ ಡಿಸಿ
  • Share this:
ವಿಜಯಪುರ(ನ. 06) ಶಾಲಾ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಸೂಚನೆ ನೀಡಿದರು. ವಿಜಯಪುರ ಜಿಲ್ಲೆಯಲ್ಲಿ ಪ್ರತಿ ಶಾಲೆಯ ನೂರು ಗಜಗಳ(ಯಾರ್ಡ್) ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧವಿದೆ.  ಇಂಥ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮರಾಟಗಾರರ ಬಗ್ಗೆ ದೂರು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಂಬಾಕು ಉತ್ಪನ್ನ ಮಾರಾಟ ಮಾಡುವವರ ಬಗ್ಗೆ ಆಯಾ ಶಾಲಾ ಶಿಕ್ಷಕರಿಂದ ಛಾಯಾಚಿತ್ರ ಸಹಿತ ಪರಿಶೀಲನಾ ವರದಿ ಪಡೆದು ಈ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ ಅವರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋಟ್ಪಾ-2003ರ ಕಾಯಿದೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಮಾಡಬೇಕು.  ಈ ಕಾನೂನನಿನ ಅಡಿಯಲ್ಲಿ ತಂಬಾಕು ಉತ್ಪನ್ನ ಸೇವನೆಯಿಂದ ಆಗುವ ಹಾನಿಯ ಬಗ್ಗೆ ಸಾರ್ವಜನಿಕರಲ್ಲಿ ಮನವರಿಕೆ ಮಾಡಿಕೊಡಬೇಕು.  ಅಲ್ಲದೇ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಮಹಾನಗರ ಪಾಲಿಕೆ, ನಾನಾ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.  ಈ ಕುರಿತು ಆರೋಗ್ಯ, ತಂಬಾಕು ನಿಯಂತ್ರಣ ಘಟಕಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ವಿಜಯಪುರ ಜಿಲ್ಲೆಯ ನಾನಾ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು ಹಾಗೂ ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇದನ್ನು ಕಟ್ಟು ನಿಟ್ಟಾಗಿ ಜಾರಿ ಮಾಡಬೇಕು.  ಅಲ್ಲದೇ, ತಂಬಾಕು ಉತ್ಪನ್ನಗಳ ನಿಷೇಧ, ಜಪ್ತಿ ಮತ್ತು ಮಾರಾಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.  ಕೋಟ್ಪಾ ಕಾಯ್ದೆಯ ಸೆಕ್ಷನ್ 4 ರಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧವಿದೆ.  ಈ ನಿಯಮ ಪಾಲಿಸದ ವ್ಯಕ್ತಿಗೆ ರೂ. 200 ದಂಡ ಹಾಗೂ ಮಾಲೀಕರು, ವ್ಯವಸ್ಥಾಪಕರು ಅಥವಾ ಅಧಿಕೃತ ಅಧಿಕಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ನಡೆದ ನಿಯಮ ಉಲ್ಲಂಘನೆಗಳ ಸಂಖ್ಯೆಗೆ ಸರಿ ಸಮಾನವಾಗಿ ದಂಡ ವಿಧಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಯಲಹಂಕದ ಬಿಎಸ್​​ಎಫ್ ಕ್ಯಾಂಪ್​​ನಲ್ಲಿ ಸೈನಿಕರ ವಾರ್ಷಿಕ ಕ್ರೀಡಾಕೂಟ

ಅದರಂತೆ ಸೆಕ್ಷನ್ 5 ರನ್ವಯ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳ ನಿಷೇಧ ನಿಯಮದ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ಹಾಗೂ ರೂ. 1000 ದಂಡ ವಿಧಿಸಲಾಗುವುದು.  ಎರಡನೆ ಬಾರಿ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಹಾಗೂ ರೂ. 5000 ದಂಡ ವಿಧಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸೆಕ್ಷನ್ 6 ರನ್ವಯ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಾಲಾ ಕಾಲೇಜುಗಳ 100 ಗಜಗಳ(ಯಾರ್ಡ್) ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವುದರ ನಿಷೇಧವಾಗಿದ್ದು, ಕಾನೂನು ಉಲ್ಲಂಘಿಸಿದರೆ ರೂ. 200ರ ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದ ಪಿ. ಸುನಿಲ ಕುಮಾರ, ಸೆಕ್ಷನ್ 7, 8 ಮತ್ತು 9 ರನ್ವಯ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ನಿಷೇಧವಾಗಿದೆ.  ಇದರಂತೆ ಉತ್ಪಾದಕರಿಗೆ ಮೊದಲ ಉಲ್ಲಂಘನೆಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ರೂ. 5000 ದಂಡ ವಿಧಿಸಲಾಗುವುದು.  ಎರಡನೇ ಸಲ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಮತ್ತು ರೂ. 10000 ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ತಂಬಾಕು ಉತ್ಪನ್ನ ಮಾರಾಟ, ಚಿಲ್ಲರೆ ವ್ಯಾಪಾರಕ್ಕಾಗಿ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ರೂ. 1000 ದಂಡ ಹಾಗೂ ಎರಡನೇ ಬಾರಿ ಉಲ್ಲಂಘನೆಗಾಗಿ 5 ವರ್ಷ ಜೈಲು ಶಿಕ್ಷೆ ಹಾಗೂ ರೂ. 3000 ದಂಡ ವಿಧಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಎಚ್ಚರಿಕೆ ನೀಡಿದರು.
Published by: Latha CG
First published: November 7, 2020, 1:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories