ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ (Narayanamurthy) ಮತ್ತು ಸುಧಾಮೂರ್ತಿ (Sudhamurthy) ಜಯನಗರ ಬಿಇಎಸ್ ಕಾಲೇಜಿನ ಮತಗಟ್ಟೆಗೆ ಬಂದು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮತದಾನದ ಬಳಿಕ ಮಾಧ್ಯಮ ಕ್ಯಾಮೆರಾಗಳ ಮುಂದೆ ಶಾಯಿ ಹಚ್ಚಿದ ಬೆರಳು ತೋರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಜನರು ಮತದಾನ ಮಾಡಬೇಕು ಎಂದು ಕರೆ ನೀಡಿದರು . ಮಾಧ್ಯಮಗಳ ಜೊತೆ ಮಾತನಾಡುತ್ತಿರುವ ವೇಳೆ ನಾರಾಯಣಮೂರ್ತಿ ಅವರು ಮಾಸ್ಕ್ (Mask) ಧರಿಸಿದ್ದರು. ಮಾಸ್ಕ್ ತೆಗೀರಿ. ನಾರಾಯಣಮೂರ್ತಿ ಅಲ್ವಾ ಅಂತ ಗೊತ್ತಾಗ್ಲಿ ಎಂದು ನಗೆ ಚಟಾಕಿ ಹಾರಿಸಿದರು. ಸುಧಾಮೂರ್ತಿ ಅವರು ಹೇಳುತ್ತಿದ್ದಂತೆ ನಗುತ್ತಲೇ ನಾರಾಯಣಮೂರ್ತಿ ಅವರು ಮಾಸ್ಕ್ ತೆಗೆದರು.
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಮತಗಟ್ಟೆ ಸಂಖ್ಯೆ 188ರಲ್ಲಿ ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ್ ಹೊರಟ್ಟಿ ಅವರು ಮತದಾನ ಮಾಡಿದರು. ಪತ್ನಿ ಮತ್ತು ಪುತ್ರನೊಂದಿಗೆ ಆಗಮಿಸಿ ಹಕ್ಕು ಚಲಾವಣೆ ಮಾಡಿದರು.
ಬಸವರಾಜ್ ಹೊರಟ್ಟಿ ಮತದಾನ
ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ್ ಹೊರಟ್ಟಿ, ಇವತ್ತಿನ ವಾತಾವರಣ ನೋಡಿದ್ರೆ ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು. ಮತದಾರರಿಗೆ ಆಮಿಷ ಒಡ್ಡಲಾಗುತ್ತದೆ ಎಂಬ ಮಾಹಿತಿ ನನ್ನ ಕಿವಿಗೆ ಬಿದ್ದಿದೆ. ಒಂದೊಂದು ಮತಕ್ಕೆ ಐದು ಸಾವಿರ ಕೊಟ್ಟಿದ್ದಾರೆಂಬ ಸುದ್ದಿ ಕೇಳಿ ಶಾಕ್ ಆಯ್ತು ಎಂದು ಹೇಳಿದರು.
ವ್ಯವಸ್ಥೆ ಬದಲಾಗಬೇಕೆಂದ ಹೊರಟ್ಟಿ
ಇವತ್ತಿನ ರಾಜಕಾರಣ ಕುಲಗೆಟ್ಟು ಹೋಗಿದೆ. ಅಭಿವೃದ್ಧಿ ಆಧಾರಿತ ಚರ್ಚೆಗಳಲಾಗಲಿಲ್ಲ. ಆರೋಪ ಪ್ರತ್ಯಾರೋಪಗಳಿಗೆ ಪ್ರಚಾರ ಸೀಮಿತ ಆಯಿತು. ಇಂತಹ ವ್ಯವಸ್ಥೆ ಬದಲಾಗಬೇಕಿದೆ ಎಂದು ಬಸವರಾಜ್ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ