• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಬಿಜೆಪಿ ಕಾರ್ಯಕಾರಿಣಿ: ಪಂಚಾಯತಿ ಚುನಾವಣೆ ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ನಾಯಕರಿಗೆ ಸೂಚನೆ

ಬಿಜೆಪಿ ಕಾರ್ಯಕಾರಿಣಿ: ಪಂಚಾಯತಿ ಚುನಾವಣೆ ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ನಾಯಕರಿಗೆ ಸೂಚನೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಗ್ರಾಮ ಸ್ವರಾಜ್ಯ ಸಮಾವೇಶ ಎಂಬ ವಿನೂತನ ಪರಿಕಲ್ಪನೆ ಮೂಲಕ ಕನಿಷ್ಠ ಶೇ.80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲ್ಲಿಸುವ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ

  • Share this:

ಬೆಳಗಾವಿ (ಡಿ. 5): ರಾಜ್ಯ ನೂತನ ಉಸ್ತುವಾರಿ ಅರುಣ್​ ಸಿಂಗ್​ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಲವ್​ ಜಿಹಾದ್​ ಹಾಗೂ ಗೋ ಹತ್ಯೆ ನಿಷೇಧ ಮಸೂದೆ ಮಂಡನೆಗೆ ನಿರ್ಣಯಿಸಲಾಗಿದೆ. ಇದರ ಜೊತೆಯಲ್ಲಿ ಮುಂದೆ ಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 'ಗ್ರಾಮ ಸ್ವರಾಜ್ಯ' ಸಮಾವೇಶ ಎಂಬ ವಿನೂತನ ಪರಿಕಲ್ಪನೆ ಮೂಲಕ ಕನಿಷ್ಠ ಶೇ.80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲ್ಲಿಸುವ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.  ಉದ್ದೇಶದಿಂದ ಇಡೀ ಕಾರ್ಯಕಾರಿಣಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಎದುರಿಸುವುದಕ್ಕೆ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ನಾಯಕರು ಒಟ್ಟಾಗಿ ಗ್ರಾಮ ಪಂಚಾಯತಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯನಿರ್ವಹಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಬಿಜೆಪಿ ವಕ್ತಾರ ಗಣೇಶ ಕಾರ್ಣಿಕ್ ತಿಳಿಸಿದ್ದಾರೆ. 


ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ನಿನ್ನೆ ನಡೆದ ಕೋರ್​ ಕಮಿಟಿ ಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರುವ ವಿಚಾರವನ್ನು ಕಾರ್ಯಕಾರಿಣಿ ಸಭೆಯಲ್ಲಿ ಮೊದಲ ನಿರ್ಣಯವಾಗಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇನ್ನು ಎರಡನೇ ನಿರ್ಣಯವಾಗಿ ಎಲ್ಲಾ ಚುನಾವಣೆಗಳಲ್ಲಿ ರಾಜ್ಯದ ಪ್ರಮುಖರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಳಮಟ್ಟದ ಕಾರ್ಯಕರ್ತರು ಸ್ಫರ್ಧೆ ಮಾಡುತ್ತಿರುವುದರಿಂದ ಗಂಭೀರವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಇನ್ನು ಕೊನೆಯ ನಿರ್ಣಯ ಸಂಘಟನಾತ್ಮಕ ನಿರ್ಣಯ ಕೈಗೊಳ್ಳಲಾಗಿದೆ. ಪಕ್ಷದಲ್ಲಿ ಶಿಸ್ತು ಸಮಿತಿ ಮತ್ತು ಚುನಾವಣಾ ಸಮಿತಿ ರಚನೆ ಮಾಡುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ನೀಡಲಾಗಿದೆ. ಪಕ್ಷದಲ್ಲಿ ಶಿಸ್ತು ಅತ್ಯಂತ ಮುಖ್ಯವಾಗಿರುವ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಇದನ್ನು ಓದಿ: ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗವಾಗಿ ಮಾತನಾಡಿದರೆ ಪಕ್ಷದಿಂದ ಶಿಸ್ತುಕ್ರಮ; ಕೋರ್​ ಕಮಿಟಿ ಸಭೆಯಲ್ಲಿ ನಿರ್ಧಾರ


ಸಭೆ ಬಳಿಕ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಲವು ಕನ್ನಡ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಕೆಲವು ಸಂಘಟನೆಗಳು ಬಂದ್ ಗೆ ಬೆಂಬಲ ಕೊಟ್ಟಿಲ್ಲ, ಮರಾಠಿ ಬೇರೆ, ಮರಾಠಾ ಬೇರೆ ಅನ್ನೋದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದರು.


ಗಾಂಧಿ ಭವನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾರ ಜಗದೀಶ್ ಶೆಟ್ಟರ್, ಆರ.ಅಶೋಕ, ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಕೊರೋನಾ ಹಿನ್ನೆಲೆ 140 ಜನರು ಮಾತ್ರ ಭಾಗಿಯಾಗಿದ್ದರು ಡಿಸಿಎಂ, ಸಚಿವರು, ಶಾಸಕರು, ಸಂಸದರು, ಪಕ್ಷದ ಪದಾಧಿಕಾರಿಗಳು ಭಾಗಿಯಾಗಿದ್ದು, ವರ್ಚುವಲ್ ಮೂಲಕ 300 ಕ್ಕೂ ಅಧಿಕ ಜನರು ಭಾಗಿಯಾದ್ದರು

Published by:Seema R
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು