ಕೋಲಾರದಲ್ಲಿ ತಹಶೀಲ್ದಾರ್‌ ಕೊಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಯಡಿಯೂರಪ್ಪ ಆಶ್ವಾಸನೆ

ಸರ್ವೇ ನಡೆಸಲು ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಇಂದು ಕಳವಂಚಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬ ವ್ಯಕ್ತಿ ಚೂರಿಯಿಂದ ತಹಶೀಲ್ದಾರ್‌ಗೆ ಇರಿದಿದ್ದಾರೆ.

ಕೋಲಾರದಲ್ಲಿ ಹತ್ಯೆಗೀಡಾಗಿರುವ ತಹಶೀಲ್ದಾರ್‌.

ಕೋಲಾರದಲ್ಲಿ ಹತ್ಯೆಗೀಡಾಗಿರುವ ತಹಶೀಲ್ದಾರ್‌.

  • Share this:
ಬೆಂಗಳೂರು (ಜುಲೈ 09); ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋಲಾರದ ಬಂಗಾರಪೇಟೆಯಲ್ಲಿ ತಹಶೀಲ್ದಾರ್‌ಗೆ ಚಾಕು ಇರಿದು ಕೊಲೆ ಮಾಡಿರುವುದು ವಿಷಾಧನೀಯ. ಆರೋಪಿಗಳ ಮೇಲೆ ಕಾನೂನು ಅಡಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸರ್ವೇ ನಡೆಸಲು ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಇಂದು ಕಳವಂಚಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬ ವ್ಯಕ್ತಿ ಚೂರಿಯಿಂದ ತಹಶೀಲ್ದಾರ್‌ಗೆ ಇರಿದಿದ್ದಾರೆ.

ರಾಮಮೂರ್ತಿ ಹಾಗೂ ಆರೋಪಿ ವೆಂಕಟಪತಿ ಎಂಬುವರ ನಡುವೆ ಜಮೀನು ವ್ಯಾಜ್ಯವಿದ್ದು, ರಾಮಮೂರ್ತಿ ಬಂಗಾರಪೇಟೆ ತಹಶೀಲ್ದಾರ್‌ಗೆ ಇಬ್ಬರ ಜಮೀನನ್ನು ಹದ್ದುಬಸ್ತು ಮಾಡುವಂತೆ ದೂರು ನೀಡಿದ್ದರು.ದೂರನ್ನು ಆಧರಿಸಿ ಇಂದು ತಹಶೀಲ್ದಾರ್ ಚಂದ್ರಮೌಳೇಶ್ವರ್, ಕಾಮಸಮುದ್ರ ಪೊಲೀಸ್ ಠಾಣೆಯ ಪೇದೆ ಜೊತೆ ಗ್ರಾಮಕ್ಕೆ ಭೇಟಿ ನೀಡಿದ್ದರು. ನಂತರ ಸರ್ವೇ ನಡೆಸಿದ ಅವರು ವೆಂಕಟಪತಿ ಜಮೀನಿನಲ್ಲಿ ಕಲ್ಲು ಹೂಳಿಸಿದ್ದಾರೆ. ಇದಕ್ಕೆ ಕೋಪಗೊಂಡ ವೆಂಕಟಪತಿ ಏಕಾಏಕಿ ತಹಶೀಲ್ದಾರ್ ಎದೆ ಭಾಗಕ್ಕೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಚಾಕು ಇರಿತದಿಂದಾಗಿ ತೀವ್ರ ರಕ್ತಸ್ತಾವಕ್ಕೆ ಒಳಗಾಗಿದ್ದ ಅವರನ್ನು ಕೂಡಲೇ ಕೋಲಾರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ. "ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ, ತಹಶೀಲ್ದಾರರಾದ ಶ್ರೀ ಚಂದ್ರಮೌಳೇಶ್ವರ್ ಅವರು ಸರ್ವೇ ಕಾರ್ಯಕ್ಕೆ ಹೋದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅವರನ್ನು ಚಾಕುವಿನಿಂದ ಇರಿದು ಸಾಯಿಸಿರುವುದು ಅತ್ಯಂತ ವಿಷಾದನೀಯ.ದೇವರು, ಚಂದ್ರಮೌಳೇಶ್ವರ್ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಆದ ಹಾನಿ ಮತ್ತು ದುಃಖವನ್ನು ಭರಿಸುವ ಶಕ್ತಿಯನ್ನು ಕೊಡಲಿ. ಮೃತರ ಅಂತ್ಯ ಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಸೂಚಿಸಲಾಗಿದೆ. ಅಲ್ಲದೆ,  ಆರೋಪಿಗಳ ಮೇಲೆ ಕಾನೂನು ಅಡಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ.
Published by:MAshok Kumar
First published: