• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತಕರಾರು: ಅನುಮತಿ ನೀಡದಂತೆ PMಗೆ ಮನವಿ

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತಕರಾರು: ಅನುಮತಿ ನೀಡದಂತೆ PMಗೆ ಮನವಿ

ಸ್ಟಾಲಿನ್​​-ಮೋದಿ ಭೇಟಿ

ಸ್ಟಾಲಿನ್​​-ಮೋದಿ ಭೇಟಿ

ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಎಂ.ಕೆ. ಸ್ಟಾಲಿನ್, ಮೊದಲು ಪ್ರಸ್ತಾಪಿಸಿರುವುದು ಕರ್ನಾಟಕ ಆರಂಭಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಬಗ್ಗೆ.

  • Share this:

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸದಾ ವಿವಾದ ಸೃಷ್ಟಿಸುವ ತಮಿಳುನಾಡು ಹಳೆಯ‌ ಚಾಳಿಯನ್ನು ಮತ್ತೆ ಮುಂದುವರೆಸಿದೆ. ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ್ದ ತಮಿಳುನಾಡಿನ‌ ನೂತನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರ್ನಾಟಕ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಕರ್ನಾಟಕ ಸರ್ಕಾರ ವಿರೋಧಿಸುತ್ತಿರುವ ನೀರಾವರಿ ಯೋಜನೆಗಳನ್ನು ಆರಂಭಿಸಲು ಅನುಮತಿ ಕೇಳಿದ್ದಾರೆ.


ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಎಂ.ಕೆ. ಸ್ಟಾಲಿನ್, ಮೊದಲು ಪ್ರಸ್ತಾಪಿಸಿರುವುದು ಕರ್ನಾಟಕ ಆರಂಭಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಬಗ್ಗೆ. ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟಿನಲ್ಲೂ ದೂರು ದಾಖಲಿಸಿದೆ.‌ ಸುಪ್ರೀಂ ಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ ಕರ್ನಾಟಕ ಯೋಜನೆ ‌ಜಾರಿಗೆ ಇರುವ ಇತರೆ ಅಡೆ ತಡೆಗಳನ್ನು ನಿಯಂತ್ರಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೆರವು ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.


ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಎರಡೂ ರಾಜ್ಯಗಳ ನಡುವೆ ನದಿ ನೀರು ಹಂಚಿಕೆಯ ನಿರ್ವಹಣೆ ಮಾಡುತ್ತಿದೆ. ಇದಲ್ಲದೆ ಕಾವೇರಿ ಮೇಲುಸ್ತುವಾರಿ ಸಮಿತಿ ಕೂಡ ಇದ್ದು ಅದು ಪ್ರತಿ ತಿಂಗಳು ಮಳೆ ಮತ್ತು ನೀರಿನ ಒಳ ಹಾಗೂ ಹೊರ ಹರಿವಿನ‌ ಬಗ್ಗೆ ಎರಡೂ ರಾಜ್ಯಗಳ ನಡುವೆ ಪ್ರತಿ ತಿಂಗಳು ಸಭೆ ನಡೆಸುತ್ತಿದೆ.‌ ಪರಿಸ್ಥಿತಿ ಹೀಗಿದ್ದರೂ ಕಾವೇರಿ ನೀರು ಸಮರ್ಪಕ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸ್ಟಾಲಿನ್ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿ ತನ್ನ ತಪ್ಪುಗಳನ್ನು ಒಪ್ಪಿ, ದೇಶವನ್ನು ಪುನರ್​ ನಿರ್ಮಿಸಲು ತಜ್ಞರಿಗೆ ಸಹಕರಿಸಬೇಕು; ರಾಹುಲ್ ಗಾಂಧಿ


ಕಾವೇರಿ ನದಿ ಪಾತ್ರದಲ್ಲಿ ಕರ್ನಾಟಕ ಸರ್ಕಾರ ವಿರೋಧದ ನಡುವೆಯೂ ತಮಿಳುನಾಡು ಮುಳ್ಳೈ ಪೆರಿಯಾರ್ ಅಣೆಕಟ್ಟಿನ ಎತ್ತರವನ್ನು 152 ಅಡಿಗೆ ಹೆಚ್ಚಿಸಿಕೊಳ್ಳಲು ಯತ್ನಿಸುತ್ತಿದೆ. ಕಾವೇರಿ ಹಾಗೂ ಗೋಂಡಾರು ನದಿ ಜೋಡಣೆ ಯೋಜನೆ ಕೈಗೆತ್ತಿಕೊಂಡಿದೆ. ನದಿ ಜೋಡಣೆಗೆ ತಮಿಳುನಾಡು ಸರ್ಕಾರ ಈಗಾಗಲೇ ಬಜೆಟ್ ನಲ್ಲಿ ಹಣ ನಿಗದಿ ಮಾಡಿದೆ. ಎರಡೂ ಯೋಜನೆಗಳಿಗೆ ನೆರವು ನೀಡುವಂತೆ ಕೂಡ ಸ್ಟಾಲಿನ್ ಪ್ರಧಾನ ಮಂತ್ರಿ ಬಳಿ ಮನವಿ ಮಾಡಿಕೊಂಡಿದ್ದಾರೆ. ಹೀಗೆ ಕರ್ನಾಟಕ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ವಿರೋಧಿಸುತ್ತಿರುವ ನೀರಾವರಿ ಯೋಜನೆಗಳನ್ನು ಆರಂಭಿಸಲು ಅನುಮತಿ ಕೇಳಿದ್ದಾರೆ.


ಇದಲ್ಲದೆ ಮೇಕೆದಾಟು ಆಣೆ‌ಕಟ್ಟು ನಿರ್ಮಾಣದ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಹಸಿರು ನ್ಯಾಯಧಿಕರಣದ ನ್ಯಾಯಮೂರ್ತಿ ಕೆ. ರಾಮಕೃಷ್ಣನ್ ನೇತೃತ್ವದ ಚೆನ್ನೈ ಪೀಠವು ಪರಿಸರ ನಿಯಮಗಳ ಉಲ್ಲಂಘನೆ ಬಗ್ಗೆ ಅಧ್ಯಯನ ಮಾಡಿ ಜುಲೈ 5ರೊಳಗೆ ವರದಿ ಸಲ್ಲಿಸಲು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ,‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರಾವರಿ ನಿಗಮ ಹಾಗೂ ಕರ್ನಾಟಕ ಸರ್ಕಾರದ ಹೆಚ್ಚುವರಿ ಅರಣ್ಯ ಸಂರಕ್ಷಣಾ ಅಧಿಕಾರಿ ಒಳಗೊಂಡ ಜಂಟಿ ಸಮಿತಿ ರಚನೆ ಮಾಡಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಕೋವಿಡ್​​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

Published by:Kavya V
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು