ಬೆಂಗಳೂರು (ನ.24): ಇಂದು ವಿವಿಧ ನಿಗಮ ಮಂಡಳಿಗಳ ನೇಮಕಾತಿ ಮಾಡಿ ಸರ್ಕಾರ ಆದೇಶ ನೀಡಿದೆ.ತಾರಾ ಅನುರಾಧ ಸೇರಿದಂತೆ ಹಲವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೂಲಕ ಸಚಿವ ಸ್ಥಾನಕ್ಕೆ ಒತ್ತಡ ಹಾಕುತ್ತಿದ್ದ ಶಾಸಕರ ಸಮಾಧಾನ ಪಡಿಸುವ ತಂತ್ರ ನಡೆಸಿದ್ದಾರೆ. ವಲಸಿಗ ಬಿಜೆಪಿ ನಾಯಕರಿಗೆ ಸಿಎಂ ಸಚಿವ ಸ್ಥಾನ ನೀಡಲು ಹವಣಿಸುತ್ತಿರುವ ಸಮಯದಲ್ಲಿ ಮೂಲ ಬಿಜೆಪಿ ಶಾಸಕರು ಕೂಡ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದರು. ಈ ಹಿನ್ನಲೆ ಅವರು ಸಿಎಂ ಖಾಲಿಯಿರುವ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ನಿನ್ನೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿಎಂ ಬಿಎಸ್ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ ಬೆನ್ನಲ್ಲೇ ಇಂದು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದ ಪಟ್ಟಿ ಹೊರಬಿದ್ದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ