ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶಿಕ್ಷಕಿ ಆತ್ಮಹತ್ಯೆ


Updated:August 29, 2018, 12:48 PM IST
ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶಿಕ್ಷಕಿ ಆತ್ಮಹತ್ಯೆ

Updated: August 29, 2018, 12:48 PM IST
ನ್ಯೂಸ್​ 18 ಕನ್ನಡ

ಬೆಂಗಳೂರು(ಆ.29): ಗಂಡನಿಗಿದ್ದ ಅನೈತಿಕ ಸಂಬಂಧ ಕಂಡು ಬೇಸತ್ತ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

32 ವರ್ಷದ ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯಾಗಿದ್ದು, ಬನಶಂಕರಿಯ ಖಾಸಗಿ ಶಾಲೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇವರ ಗಂಡ ಸುನಿಲ್(38)​ ಕೂಡಾ ಅದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಗಂಡ ಸುನಿಲ್​ ಈ ನಡುವೆ ಬೇರೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಈ ವಿಚಾರ ತಿಳಿದ ದೇವಿಕಾ ಗಂಡನನ್ನು ಪ್ರಶ್ನಿಸಿ ಜಗಳವಾಡಿದ್ದರು. ಅದರೆ ನಿನ್ನೆ ರಾತ್ರಿ ಗಂಡನ ಈ ಸಂಬಂಧದಿಂದ ಬೇಸತ್ತ ದೇವಿಕಾ ತಮ್ಮ ಜೆ ಪಿ ನಗರದ ಶಾಕಾಂಬರಿನಗರದಲ್ಲಿರುವ ತಮ್ಮ ಮನೆಯಲ್ಲಿ ನೆಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮೊದಲು ಶಿಕ್ಷಕಿ ದೇವಿಕಾ ತನ್ನ ಸಾವಿಗೆ ಗಂಡ ಸುನಿಲ್​ ಕಾರಣ ಎಂದು ಡೆತ್​ನೋಟ್​ ಬರೆದಿಟ್ಟಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ದೇವಿಕಾ ಮೃತದೇಹ ರವಾನೆ ಮಾಡಲಾಗಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
First published:August 29, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ