Teacher’s Day 2020: ಶಿಕ್ಷಕರ ದಿನಾಚರಣೆಯ ಹಿನ್ನೆಲೆ ಮತ್ತು ಮಹತ್ವ

Sarvepalli Radhakrishnan Birth Anniversary: ಪ್ರತಿವರ್ಷ ಶಿಕ್ಷಕರ ದಿನಾಚರಣೆಯನ್ನು ಶಾಲಾ-ಕಾಲೇಜುಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರಕ ಕೊರೋನಾ ವೈರಸ್​​ನಿಂದಾಗಿ ಶಾಲೆಗಳು ಮುಚ್ಚಿವೆ. ಹೀಗಾಗಿ ಆನ್​ಲೈನ್​ನಲ್ಲೇ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಆಚರಿಸಬಹುದು.

ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ

  • Share this:
    ಬೆಂಗಳೂರು(ಸೆಪ್ಟೆಂಬರ್ 04):  ನಾಳೆ ಶಿಕ್ಷಕರ ದಿನಾಚರಣೆಯ ಸಂಭ್ರಮ. ವಿದ್ಯೆ ಕಲಿಸಿದ ಗುರುವನ್ನು ನೆನೆಯುವ ಸುದಿನ.  ಪ್ರತಿವರ್ಷ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್​ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವೆ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಒಬ್ಬ ಶಿಕ್ಷಕ, ಭಾರತ ರತ್ನ, ತತ್ವಜ್ಞಾನಿ, ಲೇಖಕ ಹಾಗೂ ಸ್ವತಂತ್ರ ಭಾರತದ ಮೊದಲ ಉಪರಾಷ್ಟ್ರಪತಿ, ಜೊತೆಗೆ ಎರಡನೇ ರಾಷ್ಟ್ರಪತಿಯಾಗಿದ್ದವರು. ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವ ಹಿಂದೆ ಒಂದು ಉದ್ದೇಶವಿದೆ. ರಾಧಾಕೃಷ್ಣ ಅವರು ತಮ್ಮ ಇಡೀ ಜೀವನವನ್ನು ವಿದ್ಯಾರ್ಥಿಗಳಿಗಾಗಿಯೇ ಮುಡಿಪಾಗಿಟ್ಟಿದ್ದರು. ಹೀಗಾಗಿ ತನ್ನ ಹುಟ್ಟುಹಬ್ಬದ ದಿನವನ್ನು ಶಿಕ್ಷಕರಿಗೆ ಅರ್ಪಣೆ ಮಾಡುವ ಸಲುವಾಗಿ ಆ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಹೇಳಿದ್ದರು. ಹೀಗಾಗಿ 1962ರ ಸೆಪ್ಟೆಂಬರ್ 5ರಿಂದ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಪದ್ದತಿ ಬೆಳೆದು ಬಂದಿತು.

    Mylara Lingeshwara Temple: 5 ತಿಂಗಳ ನಂತರ ಭಕ್ತರಿಗೆ ಮೈಲಾರಲಿಂಗೇಶ್ವರನ ದರ್ಶನ ಭಾಗ್ಯ

    ಪ್ರತಿವರ್ಷ ಶಿಕ್ಷಕರ ದಿನಾಚರಣೆಯನ್ನು ಶಾಲಾ-ಕಾಲೇಜುಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರಕ ಕೊರೋನಾ ವೈರಸ್​​ನಿಂದಾಗಿ ಶಾಲೆಗಳು ಮುಚ್ಚಿವೆ. ಹೀಗಾಗಿ ಆನ್​ಲೈನ್​ನಲ್ಲೇ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಆಚರಿಸಬಹುದು. ಪ್ರತಿವರ್ಷ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಬಗ್ಗೆ ಒಂದಷ್ಟು ಮಾತುಗಳನ್ನಾಡಿ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದರು. ಆದರೆ ಈ ಬಾರಿ ವಿದ್ಯಾರ್ಥಿಗಳು ಮನೆಯಲ್ಲಿಯೇ ಶುಭಾಶಯ ಸಿದ್ದಪಡಿಸಿ ಆನ್​ಲೈನ್​ನಲ್ಲಿ ಶಿಕ್ಷಕರಿಗೆ ವಿಶ್ ಮಾಡಲಿದ್ದಾರೆ.

    ಶಿಕ್ಷಕರ ದಿನಾಚರಣೆಯಂದು ಪ್ರಮುಖವಾಗಿ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರವೇನು? ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಂತಹದ್ದು ಎಂಬುದರ ಬಗ್ಗೆ ಮನದಟ್ಟು ಮಾಡಿಕೊಡಲಾಗುತ್ತದೆ. ಅಷ್ಟೇ ಅಲ್ಲದೇ, ಸೆಪ್ಟೆಂಬರ್ 5ರಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್​ ಅವರ ಜೀವನ ಹಾಗೂ ಅವರ ಸಾಧನೆ ಬಗ್ಗೆ ತಿಳಿಸಿಕೊಡಲಾಗುತ್ತದೆ.

    ಒಬ್ಬ ವಿದ್ಯಾರ್ಥಿಯ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕನ ಪಾತ್ರ ಅಷ್ಟೇ ಪ್ರಮುಖವಾಗಿರುತ್ತದೆ. ವಿದ್ಯಾರ್ಥಿಯ ಜೀವನಕ್ಕೆ ಭದ್ರ ಅಡಿಪಾಯ ಹಾಕುವಲ್ಲಿ ಶಿಕ್ಷಕ ಹಾಕುವ ಪರಿಶ್ರಮವನ್ನು ನಾವು ಇಲ್ಲಿ ಸ್ಮರಿಸಲೇಬೇಕು. ಅಂತೆಯೇ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನೂ ನೆನೆಯಬೇಕು.
    Published by:Latha CG
    First published: