ಬೆಂಗಳೂರು(ಜೂ.11): ಹಸನಾಗಿದ್ದ ಬದುಕುಗಳು ಕೊರೋನಾ ಬಂದ ಬಳಿಕ ಕಮರಿ ಹೋಗಿವೆ. ಈ ಮಹಾಮಾರಿ ಕೊರೋನಾ ಹಲವರ ಬದುಕನ್ನೇ ಕಿತ್ತುಕೊಂಡಿದೆ. ಎಷ್ಟೋ ಜನರ ಉದ್ಯೋಗ ಕಿತ್ತುಕೊಂಡಿದೆ. ದಿನಗೂಲಿ ಮಾಡಿ ಜೀವನ ನಡೆಸುತ್ತಿದ್ದವರ ಬದುಕು ಮೂರಾಬಟ್ಟೆಯಾಗಿದೆ. ಕೊರೋನಾ ಲಾಕ್ಡೌನ್ನಿಂದಾಗಿ ಹಲವರು ಕೆಲಸ ಕಳೆದುಕೊಂಡು ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಅನುದಾನ ರಹಿತ ಶಾಲಾ ಶಿಕ್ಷಕರಿಗೂ ಸರ್ಕಾರದ ವತಿಯಿಂದ ಪರಿಹಾರ ನೀಡಲಾಗುತ್ತದೆ.
ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ತಲಾ 5 ಸಾವಿರ ರೂ. ಲಾಕ್ಡೌನ್ ಪ್ಯಾಕೇಜ್ ಸಿಗಲಿದೆ. ಸರ್ಕಾರದ ಈ ಪರಿಹಾರ ಹಣವನ್ನು ಪಡೆಯಬೇಕಾದರೆ ಅಗತ್ಯ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಬೇಕು. ಆಗ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬಂದು ಬೀಳಲಿದೆ. ಪ್ಯಾಕೇಜ್ ಪರಿಹಾರವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸುವಾಗ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಈ ದಾಖಲೆಗಳನ್ನು ಸಲ್ಲಿಸಬೇಕು.
1.ಸಂಬಂಧಿಸಿದ ಶಿಕ್ಷಣ ಸಂಸ್ಥೆ ವಿತರಣೆ ಮಾಡಿದ ಗುರುತಿನ ಚೀಟಿ ಹಾಗೂ ಸಂಸ್ಥೆಯ ನೇಮಕಾತಿ ಆದೇಶದ ಪ್ರತಿ
2. ಸಂಬಂಧಿಸಿದ ಶಾಲೆಯಿಂದ ಸೇವಾ ಪ್ರಮಾಣ ಪತ್ರ
3. ಒಂದು ಪಾಸ್ಪೋರ್ಟ್ ಸೈಜಿನ ಕಲರ್ ಫೋಟೋ
4. ರಾಷ್ಟ್ರೀಕೃತ ಬ್ಯಾಂಕ್ ಪಾಸ್ಬುಕ್ನ ಪ್ರತಿ
5. ಆಧಾರ್ ಕಾರ್ಡ್ ಪ್ರತಿ
6.ಎಸ್ಎಟಿಎಸ್ನಲ್ಲಿನ ಶಿಕ್ಷಕರ ಗುರುತಿನ ಸಂಖ್ಯೆ
7. ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ
ಈ ಎಲ್ಲಾ ದಾಖಲೆಗಳ ಜೊತೆಗೆ ತಮ್ಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮುಖ್ಯೋಪಾಧ್ಯಾಯರ ಮೂಲಕ ಲಿಖಿತ ಪ್ರಸ್ತಾವನೆ ಸಲ್ಲಿಸಬೇಕು.
ಇದನ್ನೂ ಓದಿ:BS Yediyurappa: ಮುಂದಿನ 2 ವರ್ಷ ನಾನೇ ಸಿಎಂ; ಎಲ್ಲಾ ವದಂತಿಗಳಿಗೆ ತೆರೆ ಎಳೆದ ಬಿ.ಎಸ್.ಯಡಿಯೂರಪ್ಪ
ಸರ್ಕಾರ ರೈತರಿಗೆ, ಕಾರ್ಮಿಕರಿಗೆ ಸೇರಿ ಹಲವು ವಲಯಗಳಿಗೆ 2 ಹಂತದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಮೊದಲ ಹಂತದಲ್ಲಿ ಹೂವು, ಹಣ್ಣು, ತರಕಾರಿ ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪಾರಸ್ಥರಿಗೆ, ಕಲಾವಿದರಿಗೆ 1250 ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. 2ನೇ ಹಂತದಲ್ಲಿ 500 ಕೋಟಿ ನೆರವನ್ನು ಸರ್ಕಾರ ಘೋಷಣೆ ಮಾಡಿದ್ದು, ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ಅನುದಾನ ನೀಡುವುದಾಗಿ ಸಿಎಂ ಬಿಎಸ್ವೈ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ