ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ; ಶಿಕ್ಷಕನ ವಿರುದ್ದ ದೂರು ದಾಖಲು

ಶಾಲೆಯಲ್ಲಿ ಪಾಠ ಪ್ರವಚನ ಮಾಡಬೇಕಿದ್ದ ಶಿಕ್ಷಕ ವಿದ್ಯಾರ್ಥಿಯರ ಜೊತೆ ಅಸಹ್ಯವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಇದೀಗ ಈತನ ವಿರುದ್ದ ಕೇಳಿ ಬಂದಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ಚಿತ್ರದುರ್ಗ (ಫೆ.05) :  ಅಕ್ಷರ ಕಲಿಸುವ ಶಿಕ್ಷಕರು ಅಂದ್ರೆ ದೈವ ಸ್ವರೂಪಿ ಅಂತಾರೆ. ಅವರು ವಿದ್ಯಾರ್ಥಿಗಳ ಜೀವನ ರೂಪಿಸುವ ಮಾರ್ಗದರ್ಶಕರೂ ಕೂಡಾ. ಆದರೆ, ಇಲ್ಲೊಬ್ಬ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಅಲ್ಲದೆ ತರಗತಿ ಕೊಠಡಿಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಗಂಭೀರ ಆರೋಪ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಇದೀಗ ವಿದ್ಯಾರ್ಥಿನಿಯರ ಪೋಷಕರು ಶಿಕ್ಷಕನ ವಿರುದ್ದ ದೂರು ದಾಖಲಿಸಿದ್ದಾರೆ.

ಈತನ ಹೆಸರು ತಿಪ್ಪೇಸ್ವಾಮಿ ಚಿತ್ರದುರ್ಗ ನಗರದ ಗೋಪಾಲಪುರ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ. ಶಾಲೆಯಲ್ಲಿ ಪಾಠ ಪ್ರವಚನ ಮಾಡಬೇಕಿದ್ದ ಶಿಕ್ಷಕ ವಿದ್ಯಾರ್ಥಿಯರ ಜೊತೆ ಅಸಹ್ಯವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಇದೀಗ ಈತನ ವಿರುದ್ದ ಕೇಳಿ ಬಂದಿದೆ. ಅಲ್ಲದೆ 6 ನೇ ತರಗತಿ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದು ಅಲ್ಲದೆ, ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಶಾಲೆಯಲ್ಲಿ ಮೊಬೈಲ್ ಮೂಲಕ ಆಶ್ಲೀಲ ವೀಡಿಯೋಗಳನ್ನ ಹಾಕಿ ವಿದ್ಯಾರ್ಥಿನಿಯರಿಗೆ ತೋರಿಸುತ್ತಿದ್ದನಂತೆ. ಇವನ ಕಾಮ ಚೇಷ್ಠೆಗೆ ಬೇಸತ್ತಿದ್ದ ವಿದ್ಯಾರ್ಥಿನಿಯರು ಅನುಭವಿಸುತ್ತಿರುವ ಕಷ್ಠವನ್ನೆಲ್ಲ ಪೋಷಕರ ಬಳಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಶಾಲೆ 7 ಜನ ವಿಧ್ಯಾರ್ಥಿನಿಯರ ಹೇಳಿಕೆ ಆಧರಿಸಿ ಪೋಷಕರು ಮಹಿಳಾ ಠಾಣೆಯಲ್ಲಿ ಕಾಮಿ ಶಿಕ್ಷಕ ತಿಪ್ಪೇಸ್ವಾಮಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕೂಡಲೇ ಪಾಪಿ ಶಿಕ್ಷಕನನ್ನ ಬಂಧಿಸಿ ಅಸಿಡ್, ಹಾಕಿ ವಿಷಕೊಟ್ಟು ಸಾಯಿಸಬೇಕು, ನಮಗೆ ನ್ಯಾಯ ಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ. ಇನ್ನೂ ಅಪ್ರಾಪ್ತ ಬಾಲಕಿಯರು ಹಾಗೂ ಪೊಷಕರು ಮಹಿಳಾ ಠಾಣೆಗೆ ಆಗಮಿಸುತ್ತಿದ್ದಂತೆ, ನೇರವಾಗಿ ಠಾಣೆಗೆ ಆಗಮಿಸಿದ ಎಸ್ಪಿ .ಜಿ ರಾಧಿಕ ಅಪ್ರಾಪ್ತ ಬಾಲಕಿಯರ ಮಾತುಕತೆ ನಡೆಸಿದರು.

ಶಾಲೆಯಲ್ಲಿ ಮಕ್ಕಳಗೆ ಆದ ದೌರ್ಜನ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಆರೋಪಿ ಶಿಕ್ಷಕನ ವಿರುದ್ದ ಪೊಕ್ಸೋ ಪ್ರಕರಣ ದಾಖಲಿಸಿದ್ದು, ಆರೋಪಿಯ ಹುಡುಕಾಟ ಆರಂಭಿಸಿದ್ದಾರೆ. ಇನ್ನೂ ಪ್ರಕರಣದ ವಿಷಯ ತಿಳಿಯುತ್ತಿದ್ದಂತೆ ಕಾಮಿ ಶಿಕ್ಷಕರ ತಿಪ್ಪೇಸ್ವಾಮಿ ತಲೆ ಮರೆಸಿಕೊಂಡಿದ್ದು, ತಿಪ್ಪೇಸ್ವಾಮಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮೈಸೂರಿನಲ್ಲಿ ನಕಲಿ ವೈದ್ಯರ ಹಾವಳಿ; 8ನೇ ತರಗತಿ ಓದಿದ್ರೆ ಸಾಕು ಇಲ್ಲಿ ಡಾಕ್ಟರ್​ ಆಗಬಹುದು

ಇನ್ನೂ ಈ ಸಂಬಂಧ ಮಾಧ್ಯಮಗಳ ಜೊತೆ ಮಾತ್ನಾಡಿದ ಚಿತ್ರದುರ್ಗ ಎಸ್ಪಿ.ಜಿ ರಾಧಿಕಾ ಕೂಡಲೇ ಆರೋಪಿ ಬಂಧಿಸಿ ಹೆಚ್ಚಿನ ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ. ಒಟ್ಟಾರೆ ಶಾಲಾ ಮಕ್ಕಳಿಗೆ ಪಾಠ ಮಾಡ್ಬೇಕಿದ್ದ ಶಿಕ್ಷಕ, ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಶಿಕ್ಷಕನಿಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

(ವರದಿ : ವಿನಾಯಕ ತೋಡರನಾಳ್)
First published: