ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಉಗ್ರರ ಸ್ಲೀಪರ್ ಸೆಲ್ ಪತ್ತೆ; ಬಾಂಗ್ಲಾ, ಕಾಶ್ಮೀರ ಗಡಿಯಿಂದ ನುಸುಳಿರುವ ಶಂಕೆ

ಬೆಂಗಳೂರಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಉಗ್ರರ ಅಡಗುದಾಣಗಳು ಪತ್ತೆಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಲು ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Sushma Chakre | news18-kannada
Updated:October 18, 2019, 1:45 PM IST
ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಉಗ್ರರ ಸ್ಲೀಪರ್ ಸೆಲ್ ಪತ್ತೆ; ಬಾಂಗ್ಲಾ, ಕಾಶ್ಮೀರ ಗಡಿಯಿಂದ ನುಸುಳಿರುವ ಶಂಕೆ
ಗೃಹ ಸಚಿವ ಬಸವರಾಜ ಬೊಮ್ಮಾಯಿ
  • Share this:
ಮೈಸೂರು (ಅ. 18): ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸುತ್ತಿದ್ದಂತೆ ರಾಜ್ಯದ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಮತ್ತು ಕರಾವಳಿಯಲ್ಲಿ ಉಗ್ರ ಸಂಘಟನೆಗಳು ಬೀಡುಬಿಟ್ಟಿರುವ ಮಾಹಿತಿಯನ್ನು ರಾಜ್ಯ ಸರ್ಕಾರ ಖಾತರಿ ಪಡಿಸಿದೆ.

ರಾಜ್ಯದೊಳಗೆ ಬಾಂಗ್ಲಾದೇಶದ ಜೆಎಂಬಿ ಉಗ್ರರು ನುಸುಳಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ ವರದಿ ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇನ್ನೊಂದು ಆಘಾತಕಾರಿ ಸುದ್ದಿಯನ್ನು ಹೊರಹಾಕಿದ್ದು, ರಾಜ್ಯದ ಕರಾವಳಿ, ಬೆಂಗಳೂರು, ಮೈಸೂರಿನಲ್ಲಿ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಬೀಡುಬಿಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

2 ದಿನಗಳ ಹಿಂದೆ ಬೆಂಗಳೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ರಚಿಸುವ ಭರವಸೆ ನೀಡಿದ್ದ ಸಚಿವ ಬಸವರಾಜ ಬೊಮ್ಮಾಯಿ, ಮುಂಬೈ, ಚೆನ್ನೈ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಭಯೋತ್ಪಾದಕ ನಿಗ್ರಹ ದಳ ಮತ್ತು ಠಾಣೆಯನ್ನು ತೆರೆಯಲಾಗುವುದು. ಮುಂದಿನ ತಿಂಗಳು ಇದು ಕಾರ್ಯವನ್ನು ಆರಂಭಿಸಲಿದೆ. ರಾಜ್ಯ ಪೊಲೀಸರು ಈಗಾಗಲೇ ರಾಷ್ಟ್ರೀಯ ತನಿಖಾ ದಳ, ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಬೆಂಗಳೂರನ್ನು ಉಗ್ರರ ದಾಳಿಯಿಂದ ರಕ್ಷಿಸುವ ಮೂಲಕ ಬೇರೆ ಜಿಲ್ಲೆಗಳಲ್ಲೂ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಮಾಹಿತಿ ನೀಡಿದ್ದರು.

ಚಾಕು ಇರಿದು ಬೆಂಗಳೂರಿನ ವೃದ್ಧ ದಂಪತಿಯ ಬರ್ಬರ ಕೊಲೆ; ಡಬಲ್ ಮರ್ಡರ್ ಹಿಂದಿದೆಯಾ ಪರಿಚಿತರ ಕೈವಾಡ?

ಇಂದು ಮೈಸೂರಿನಲ್ಲಿ ಮತ್ತೆ ಉಗ್ರರ ದಾಳಿ ಬಗ್ಗೆ ಪ್ರಸ್ತಾಪಿಸಿರುವ ಗೃಹ ಸಚಿವರು, ರಾಜ್ಯಕ್ಕೆ ಸ್ಲೀಪರ್ ಸೆಲ್ ನುಸುಳಿದ ಮಾಹಿತಿಯಿದೆ. ಕರಾವಳಿ, ಬೆಂಗಳೂರು, ಮೈಸೂರಲ್ಲಿ ಸ್ಲೀಪರ್ ಸೆಲ್ ಸಕ್ರಿಯವಾಗಿರುವ ಬಗ್ಗೆ ಮಾಹಿತಿಯಿದೆ. ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ರಾಜ್ಯದ ಹಲವೆಡೆ ಸಕ್ರಿಯರಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಹೆಚ್ಚು ಸಕ್ರಿಯರಾಗಿರುವ ಮಾಹಿತಿಯಿದೆ ಎಂದು ಹೇಳಿದ್ದಾರೆ.

ಉಗ್ರರನ್ನು ಸದೆಬಡಿಯಲು ಪೊಲೀಸರು ಸನ್ನದ್ಧರಾಗಿದ್ದಾರೆ. ಈಗಾಗಲೇ ಶಂಕಾಸ್ಪದರ ಮೇಲೆ ನಿಗಾ ಇಡಲಾಗಿದೆ. ಕರಾವಳಿ, ಬೆಂಗಳೂರು, ಮೈಸೂರಿನಲ್ಲಿ ಅವರ ಚಟುವಟಿಕೆಗಳು ಹೆಚ್ಚಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಾಂಗ್ಲಾ ಮೂಲದ ಉಗ್ರಗಾಮಿ ಸಂಘಟನೆ ಸದಸ್ಯರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಉಗ್ರರನ್ನು ಸದೆಬಡಿಯಲು ರಾಜ್ಯ ಪೊಲೀಸ್ ಕಾರ್ಯೋನ್ಮುಖವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಉಗ್ರರ ಪತ್ತೆ?:ಬೆಂಗಳೂರಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಉಗ್ರರ ಅಡಗುದಾಣಗಳು ಪತ್ತೆಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಲು ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ತಿಳಿಸಿದ್ದಾರೆ.

ಸಿಬ್ಬಂದಿಯನ್ನು ಬೂಟಿನಿಂದ ತುಳಿದಿದ್ದ ಕೇಸ್; ಬೆಂಗಳೂರು ಸೆಕ್ಯುರಿಟಿ ಏಜೆನ್ಸಿಗೆ ಬೀಗ ಜಡಿದ ಕಾರ್ಮಿಕ ಇಲಾಖೆ

ಜಮ್ಮು ಕಾಶ್ಮೀರ ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ದೇಶವನ್ನು ಪ್ರವೇಶಿಸಿದ್ದಾರೆ. ಬಾಂಗ್ಲಾದೇಶದವರು ಹೆಚ್ಚಾಗಿ ರಾಜ್ಯಕ್ಕೆ ಪ್ರವೇಶ ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಉಗ್ರರು ಸಕ್ರಿಯರಾಗಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ. ಬಾಂಗ್ಲಾ ಮೂಲದ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ನುಸುಳುವ ಕೆಲಸ ಮಾಡ್ತಿದ್ದಾರೆ. ಅತ್ಯಂತ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಅಂತಹ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಆ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಕೆಲವೊಮ್ಮೆ ಹರಡುವ ವದಂತಿಗಳಿಗೆ ರಾಜ್ಯದ ಜನತೆ ಕಿವಿಗೊಡುವ ಅಗತ್ಯವಿಲ್ಲ ಎಂದಿದ್ದಾರೆ.

(ವರದಿ: ಪುಟ್ಟಪ್ಪ)

 

First published:October 18, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ