Governor Thaawarchand Gehlot: ರಾಜ್ಯದ ‌19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

Karnataka Governor Thaawarchand Gehlot: ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನಾನು ಶ್ರದ್ಧಾಪೂರ್ವಕವಾಗಿ ಕರ್ನಾಟಕ ರಾಜ್ಯಪಾಲ ಹುದ್ದೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ ಹಾಗೂ ವಿಧಿಬದ್ಧ ನಿಯಮಗಳ ಪಾಲನೆ ಮೂಲಕ ಸಂವಿಧಾನದ ರಕ್ಷಣೆ ಮಾಡಲು ಬದ್ಧನಾಗಿರುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್​ಚಂದ್ ಗೆಹ್ಲೋಟ್ ಪ್ರಮಾಣವಚನ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್​ಚಂದ್ ಗೆಹ್ಲೋಟ್ ಪ್ರಮಾಣವಚನ

  • Share this:
ಬೆಂಗಳೂರು(ಜುಲೈ 11): ಇತ್ತೀಚಿಗಷ್ಟೇ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ತಾವರ್ ಚಂದ್ ಗೆಹ್ಲೋಟ್ ಅವರು, ಇಂದು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ನೂತನ ಗವರ್ನರ್ ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಪ್ರತಿಜ್ಞಾವಧಿ ಬೋಧಿಸಿದ್ರು. ನಂತರ ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನಾನು ಶ್ರದ್ಧಾಪೂರ್ವಕವಾಗಿ ಕರ್ನಾಟಕ ರಾಜ್ಯಪಾಲ ಹುದ್ದೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ ಹಾಗೂ ವಿಧಿಬದ್ಧ ನಿಯಮಗಳ ಪಾಲನೆ ಮೂಲಕ ಸಂವಿಧಾನದ ರಕ್ಷಣೆ ಮಾಡಲು ಬದ್ಧನಾಗಿರುತ್ತೇನೆ. ಕರ್ನಾಟಕ ರಾಜ್ಯದ ಜನರ ಸೇವೆ ಮತ್ತು ಕಲ್ಯಾಣ‌ ಕಾರ್ಯಗಳಲ್ಲಿ ನಿರತನಾಗಿರುತ್ತೇನೆ ಎಂದು ಪ್ರತಿಜ್ಞಾವಧಿ ಓದಿದ್ದರು.. ಬಳಿಕ ನೂತನ ರಾಜ್ಯಪಾಲರಾದ ಇವರನ್ನು ನಿರ್ಗಮಿತ ಗವರ್ನರ್ ವಜುಭಾಯಿ ವಾಲಾ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಶುಭ ಕೋರಿದ್ರು.

ಇದರ ಜೊತೆಗೆ ರಾಜ್ಯದ ಮುಖ್ಯಮಂತ್ರಿ ಗಳಾದ ಬಿ ಎಸ್ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ,  ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಸುಧಾಕರ್, ಆರ್ ಶಂಕರ್, ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ರಾಮ್ ದಾಸ್ ಅಠವಾಳೆ, ಸಂಸದೆ ಸುಮಲತಾ ಅಂಬರೀಶ್, ಸೇರಿದಂತೆ ಸಂಪುಟ ಸಚಿವರುಗಳು ನೂತನ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಗೆ ಶುಭಾಶಯ ಸಲ್ಲಿಸಿದ್ರು. ಇನ್ನೂ ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರ ಪದಗ್ರಹಣ ಸಮಾರಂಭ ಸರಳ ರೀತಿಯಲ್ಲಿ ನಡೆಯಿತು.

ಇದನ್ನೂ ಓದಿ: ಸಿ.ಪಿ. ಯೋಗೇಶ್ವರ್ ಒಬ್ಬ 420; ಆತನ ಸುದ್ದಿ ನನಗೇಕೆ?: ಸಂಸದ ಡಿ.ಕೆ. ಸುರೇಶ್

ಕೊವೀಡ್ ಇರುವ ಕಾರಣ ಸರಳ ಸಮಾರಂಭದಲ್ಲಿ ಆಯ್ದ ಗಣ್ಯರಿಗೆ ಮಾತ್ರ ಕಾರ್ಯಕ್ರಮದ ಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಕೊವೀಡ್ ಮಾರ್ಗಸೂಚಿ ಗಳಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಪ್ರಕಾರವೇ ಕೆಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಇನ್ನುಳಿದವರಿಗೆ ರಾಜಭವನದ ಒಳಗೆ ಪ್ರವೇಶ ನಿರ್ಬಂಧ ಮಾಡಲಾಗಿತ್ತು. ರಾಜ್ಯದ ನೂತನ ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಅವ್ರು ಇಂದಿನಿಂದ ಅಧಿಕೃತವಾಗಿ ರಾಜ್ಯದ ಜವಾಬ್ದಾರಿ ಹೊತ್ತಿದ್ದು, ಸಂವಿಧಾನದತ್ತ ಅಧಿಕಾರಿಗಳನ್ನು ನಿಭಾಯಿಸಲಿದ್ದಾರೆ.. ಒಟ್ಟಾರೆ ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮ ಕೋವಿಡ್ ನಿಂದ ಸರಳ ಸಮಾರಂಭ ವಾಗಿತ್ತು. ಇನ್ನೂ ರಾಜ್ಯದ ರಾಜ್ಯಪಾಲ ರಾಗಿ ನೂತನ ಥಾವರ್ ಚಂದ್ ಗೆಹ್ಲೋಟ್ ಕೂಡ ಸಂತೋಷದಿಂದ ಅಧಿಕಾರ ಸ್ವೀಕಾರ ಮಾಡೋದ್ರ ಮೂಲಕ ರಾಜ್ಯದ ಸಂವಿಧಾನದತ್ರ ಹುದ್ದೆ ರಾಜ್ಯಪಾಲರ ಹುದ್ದೆ ಯನ್ನು ಇಂದಿನಿಂದ ನಿಭಾಯಿಸಲಿದ್ದಾರೆ. ಜೊತೆಗೆ ಸರ್ಕಾರದ ಆಡಳಿತದ ಕೂಡ ಗಮನ ಕೊಡಲಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Soumya KN
First published: