ಶಾಲಾ ಪಠ್ಯಗಳನ್ನು ಕೇಸರೀಕರಣಗೊಳಿಸಿ ಬಿಜೆಪಿ ಗುಪ್ತ ಅಜೆಂಡಾವನ್ನು ಅನುಷ್ಠಾನಗೊಳಿಸಿದೆ; ಸಿದ್ದರಾಮಯ್ಯ

ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
    ಬೆಂಗಳೂರು (ಜುಲೈ 29); 10ನೇ ತರಗತಿ‌‌ ಪಠ್ಯದಿಂದ ಕೆಲವು ಮಹಾಪುರುಷರಿಗೆ ಸಂಬಂಧಿಸಿದ ಪಾಠವನ್ನು ಕೈಬಿಟ್ಟು ರಾಜ್ಯ ಬಿಜೆಪಿ ಸರ್ಕಾರ ಶಾಲಾ ಪಠ್ಯವನ್ನೇ ಕೇಸರೀಕರಣಗೊಳಿಸುತ್ತಿದೆ. ಈ ಮೂಲಕ ತನ್ನ ಮೂಲ ಅಜೆಂಡಾವನ್ನು ಅನುಷ್ಠಾನಗೊಳಿಸುತ್ತಿದೆ, ಅನಧೀಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

    ಕೊರೋನಾ ಕಾರಣದಿಂದಾಗಿ ಈಗಾಗಲೇ ಈ ವರ್ಷದ ಶೈಕ್ಷಣಿಕ ವರ್ಷದ ಎರಡು ತಿಂಗಳು ಮುಗಿದಿದೆ. ಹೀಗಾಗಿ ಎಲ್ಲಾ ರಾಜ್ಯಗಳು ಶಾಲಾ ಪಠ್ಯದಲ್ಲಿ ಕೆಲವು ಅಧ್ಯಾಯಗಳನ್ನು ಪರಿಷ್ಕರಿಸಲು ಮುಂದಾಗಿವೆ. ಇದರ ಭಾಗವಾಗಿ ಉತ್ತರಪ್ರದೇಶ ಸರ್ಕಾರ ಶಾಲಾ ಪಠ್ಯದಿಂದ  ಜವಹರಲಾಲ್ ನೆಹರು ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕುರಿತ ಭಾಗಗಳನ್ನು ಕೈಬಿಟ್ಟಿದೆ.

    ಇದರ ಬೆನ್ನಿಗೆ ಕರ್ನಾಟಕ ಸರ್ಕಾರವೂ ಸಹ ಕೊರೋನಾ ಪರಿಸ್ಥಿತಿಯನ್ನು ಮುಂದಿಟ್ಟು 10ನೇ ತರಗತಿ ಪಠ್ಯದಿಂದ ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಭಾಗವನ್ನು ತೆಗೆದುಹಾಕಿದೆ. ಹೀಗಾಗಿ ಸರ್ಕಾರದ ಈ ನಡೆಯನ್ನು ವಿಪಕ್ಷ ನಾಯಕ ಟ್ವೀಟ್‌ ಮೂಲಕ ಕಟುವಾಗಿ ಟೀಕಿಸಿದ್ದಾರೆ.



    ಈ ಕುರಿತು ಕಿಡಿಕಾರಿರುವ ಸಿದ್ದರಾಮಯ್ಯ, "ಕೊರೊನಾ ನಿಯಂತ್ರಿಸಲಾಗದ ರಾಜ್ಯಸರ್ಕಾರ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ.‌‌ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ, ಹೋರಾಟ ಅನಿವಾರ್ಯವಾಗಬಹುದು.



    ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ.



    10ನೇ ತರಗತಿ‌‌ ಪಠ್ಯದಿಂದ ಕೆಲವು ಮಹಾಪುರುಷರಿಗೆ ಸಂಬಂಧಿಸಿದ ಪಾಠವನ್ನು ಕೈಬಿಟ್ಟದ್ದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸಚಿವ ರಮೇಶ್‌ ಕುಮಾರ್‌ ತಿಳಿಸಿದ್ದಾರೆ.  ಆದರೆ, ಕರ್ನಾಟಕ ಪಠ್ಯಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ? ಅದನ್ನು ತಕ್ಷಣ ವಾಪಸು ಪಡೆಯಿರಿ, ಇಲ್ಲದೆ ಇದ್ದರೆ ನಿಮ್ಮ ಪಾತ್ರ ಒಪ್ಪಿಕೊಳ್ಳಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    Published by:MAshok Kumar
    First published: