ಅ.10ರಿಂದ ಮೂರು ದಿನ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನ

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಜೆ ಸಿ ಮಾಧುಸ್ವಾಮಿ,  15 ಕ್ಷೇತ್ರಗಳಲ್ಲಿ ಉಪಚುನಾವಣೆ ಇರುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿದೆ. 15 ತಾಲ್ಲೂಕುಗಳಲ್ಲಿ ಅಭಿವೃದ್ಧಿ ಕಾರ್ಯ, ಹೊಸ ಯೋಜನೆ ಘೋಷಿಸುವಂತೆ ಇಲ್ಲ. ನೆರೆ, ಬರ ಸಂಬಂಧಿ ಕಾರ್ಯಕ್ರಮಗಳಿಗೆ ನೀತಿ ಸಂಹಿತೆ ಅಡ್ಡಿ ಬರಲ್ಲ ಎಂದು ತಿಳಿಸಿದರು.

HR Ramesh | news18-kannada
Updated:September 23, 2019, 8:41 PM IST
ಅ.10ರಿಂದ ಮೂರು ದಿನ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನ
ವಿಧಾನಸೌಧ
  • Share this:
ಬೆಂಗಳೂರು: ಮುಂದಿನ ತಿಂಗಳು 10, 11, 12ರಂದು ಮೂರು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು. 

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಜೆ ಸಿ ಮಾಧುಸ್ವಾಮಿ, ಅಕ್ಟೋಬರ್ 10 ರಿಂದ 12 ರವರೆಗೆ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ‌ಹತ್ತು ದಿನಗಳ ಬದಲಿಗೆ ಮೂರು ದಿನ ಅಧಿವೇಶನ ನಡೆಸಲಾಗುತ್ತಿದೆ. ಅಧಿವೇಶನದಲ್ಲಿ ಪೂರಕ ಬಜೆಟ್​ಗೆ ಮಾತ್ರ ಅನುಮೋದನೆ ನೀಡಲಾಗುವುದು. ಉಳಿದಂತೆ ಯಾವುದೇ ಘೋಷಣೆ ಇಲ್ಲ ಎಂದು ತಿಳಿಸಿದರು.

ಇದನ್ನು ಓದಿ: ಬಿಬಿಎಂಪಿ ಮೇಯರ್ ಚುನಾವಣೆ ಅ. 1ಕ್ಕೆ ಮುಂದೂಡಿಕೆ; ಅಧಿಕಾರ ಹಿಡಿಯುವ ಸಂಖ್ಯಾಬಲಕ್ಕೆ ಬಿಜೆಪಿ ಮಾಸ್ಟರ್​ಪ್ಲಾನ್

15 ಕ್ಷೇತ್ರಗಳಲ್ಲಿ ಉಪಚುನಾವಣೆ ಇರುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿದೆ. 15 ತಾಲ್ಲೂಕುಗಳಲ್ಲಿ ಅಭಿವೃದ್ಧಿ ಕಾರ್ಯ, ಹೊಸ ಯೋಜನೆ ಘೋಷಿಸುವಂತೆ ಇಲ್ಲ. ನೆರೆ, ಬರ ಸಂಬಂಧಿ ಕಾರ್ಯಕ್ರಮಗಳಿಗೆ ನೀತಿ ಸಂಹಿತೆ ಅಡ್ಡಿ ಬರಲ್ಲ. ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಅದಕ್ಕಾಗಿ ಒಟ್ಟು 50 ಕೋಟಿ ರೂ ನಿಗದಿ ಮಾಡಲಾಗಿದೆ. ಇಂದಿನ ಸಭೆಯಲ್ಲಿ 20 ಕೋಟಿ ರೂ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ ಹಾಗೆಯೇ ಮಂಗನ‌ ಕಾಯಿಲೆ ಪತ್ತೆಗೆ ಶಿವಮೊಗ್ಗದಲ್ಲಿ ಪ್ರತ್ಯೇಕ ಡಯಾಗ್ನೋಸ್ಟಿಕ್ ಕೇಂದ್ರ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

 

First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ