• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Covid 19: ಕರ್ನಾಟಕದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ? 7 ರಾಜ್ಯಗಳಿಗೆ ಕೇಂದ್ರದಿಂದ ಎಚ್ಚರಿಕೆ!

Covid 19: ಕರ್ನಾಟಕದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ? 7 ರಾಜ್ಯಗಳಿಗೆ ಕೇಂದ್ರದಿಂದ ಎಚ್ಚರಿಕೆ!

ಕೋವಿಡ್‌ ವೈರಸ್ ಗ್ರಾಫಿಕ್ಸ್ ಚಿತ್ರ

ಕೋವಿಡ್‌ ವೈರಸ್ ಗ್ರಾಫಿಕ್ಸ್ ಚಿತ್ರ

ಕೋವಿಡ್ ಕೇಸ್‌ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಮಹಾರಾಷ್ಟ್ರ, ದೆಹಲಿ ಹಾಗೂ ತೆಲಂಗಾಣ ಸೇರಿದಂತೆ 7 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

  • Share this:

ಬೆಂಗಳೂರು: ದೇಶದಾದ್ಯಂತ ಕೋವಿಡ್ ಪ್ರಕರಣಗಳ (Covid Case) ಸಂಖ್ಯೆ ಒಂದೇ ಸಮನೆ ಏರುತ್ತಲೇ ಇದೆ. ಹಲವು ರಾಜ್ಯಗಳಲ್ಲಿ (States) ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್‌ಗಳು (Corona Case) ದೃಢಪಡುತ್ತಿವೆ. ಈ ಹಿನ್ನೆಲೆಯಲ್ಲಿ ಅಲರ್ಟ್ (Alert) ಆಗಿರುವ ಕೇಂದ್ರ ಸರ್ಕಾರ (Central Government), 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕರ್ನಾಟಕ (Karnataka), ಮಹಾರಾಷ್ಟ್ರ (Maharashtra), ತಮಿಳುನಾಡು (Tamil Nadu), ತೆಲಂಗಾಣ (Telangana), ದೆಹಲಿ (Delhi) ಹಾಗೂ ಒಡಿಶಾ (Odisha), ಕೇರಳ (Kerala) ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಸಾಕಷ್ಟು ಪ್ರಮಾಣದ ಪರೀಕ್ಷೆ (Test), ಕೋವಿಡ್ ನಿಯಂತ್ರಣ ಕ್ರಮಗಳ ಪ್ರಚಾರ ಮತ್ತು ಕೋವಿಡ್ ಏರಿಕೆಯನ್ನು ತಗ್ಗಿಸಲು ಲಸಿಕಾಕರಣ (Vaccination) ಅಭಿಯಾನವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದೆ.


7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ


ಕೋವಿಡ್ ಕೇಸ್‌ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಮಹಾರಾಷ್ಟ್ರ, ದೆಹಲಿ ಹಾಗೂ ತೆಲಂಗಾಣ ಸೇರಿದಂತೆ 7 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.


ಜನರ ಗುಂಪುಗೂಡುವಿಕೆಯಿಂದ ಆತಂಕ


7 ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಂಬರುವ ಹಬ್ಬದ ದಿನಗಳು ಮತ್ತು ಜನರ ಗುಂಪುಗೂಡುವಿಕೆಯು ದೇಶದ ಅನೇಕ ಭಾಗಗಳಲ್ಲಿ ಕೋವಿಡ್ 19 ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಹರಡುವಿಕೆಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: Monkeypox ನಿಮ್ಮನ್ನು ದೈಹಿಕವಾಗಷ್ಟೇ ಅಲ್ಲ, ಮಾನಸಿಕವಾಗಿಯೂ ಕಾಡುತ್ತದೆಯಂತೆ!


ಕರ್ನಾಟಕಕ್ಕೂ ಖಡಕ್ ಎಚ್ಚರಿಕೆ


ಇನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿಕೆ ಅನಿಲ್ ಕುಮಾರ್ ಅವರಿಗೂ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕಳೆದ ಒಂದು ತಿಂಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಪ್ರತಿ ದಿನ ಸರಾಸರಿ 1,355 ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್ 5ರಂದು ಅತ್ಯಧಿಕ, 1992 ಪ್ರಕರಣ ವರದಿಯಾಗಿವೆ ಎಂದು ತಿಳಿಸಿದ್ದಾರೆ.


ಕೋವಿಡ್ ಪ್ರಕರಣ ದಿಢೀರ್ ಏರಿಕೆ


ಇನ್ನು ರಾಜ್ಯದಲ್ಲಿ ಕೆಲವು ತಿಂಗಳಿಂದ ತಗ್ಗಿದ್ದ ಕೋವಿಡ್‌ ಸಾವಿನ ಸಂಖ್ಯೆ ದೀಢಿರ್‌ ಏರಿಕೆಯಾಗಿದೆ. ನಿನ್ನೆ 1,837 ಜನರಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿಇದುವರೆಗೆ 40.20 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದು, 40,118 ಜನರು ಮೃತರಾಗಿದ್ದಾರೆ. ಆಗಸ್ಟ್ 7ರಂದು 1,290 ಜನರು ಗುಣಮುಖರಾಗಿದ್ದು, ಇದುವರೆಗೂ ಗುಣಮುಖರಾದವರ ಸಂಖ್ಯೆ 39.68 ಲಕ್ಷಕ್ಕೆ ಏರಿಕೆಯಾಗಿದೆ.


ಯಾವ್ಯಾವ ಜಿಲ್ಲೆಗಳಲ್ಲಿ ಸೋಂಕು ಏರುತ್ತಿದೆ?


ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಸೋಂಕು ಏರಿಕೆಯಾಗಿದೆ. ಮೈಸೂರು, ಬೆಳಗಾವಿ, ಹಾಸನ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ತುಮಕೂರು, ಮಂಡ್ಯ, ಬಳ್ಳಾರಿ, ಕೊಡಗು, ಕೋಲಾರ, ರಾಯಚೂರು, ಬಾಗಲಕೋಟೆ, ಉತ್ತರ ಕನ್ನಡ, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ, ಬೀದರ್, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಗದಗ, ಚಿತ್ರದುರ್ಗ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ.


ಇದನ್ನೂ ಓದಿ: Tattoo ಹಾಕಿಸಿಕೊಳ್ಳೋರೇ ಎಚ್ಚರ, ಟ್ಯಾಟೂ ಹಾಕಿಸಿಕೊಂಡ ಇಬ್ಬರಿಗೆ ಎಚ್​ಐವಿ ಸೋಂಕು!


ದೇಶದಲ್ಲಿ ಹೆಚ್ಚಿದ ಕೊರೋನಾ ಅಬ್ಬರ


ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,738 ಹೊಸ ಕೊರೋನಾ ವೈರಸ್ ಸೋಂಕುಗಳು ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 4,41,45,732ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 40 ಸಾವುಗಳು ದಾಖಲಾಗಿ ಒಟ್ಟು ಸಾವಿನ ಸಂಖ್ಯೆ 5,26,689 ಕ್ಕೆ ಏರಿದೆ. ಇದರಲ್ಲಿ ಕೇರಳ ರಾಜ್ಯ ಒಂದರಲ್ಲೇ 8 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಕೊರೊನಾ ಚೇತರಿಕೆ ದರವು 98.50 ಪ್ರತಿಶತದಷ್ಟು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

First published: