ಬೆಂಗಳೂರು: ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿಯವರ (Former PM Rajiv Gandhi) 34ನೇ ಪುಣ್ಯತಿಥಿ ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ಭಾಗವಹಿಸಿದ್ದರು. ವೇದಿಕೆ ಮೇಲೆ ಪಕ್ಕದಲ್ಲಿ ಕುಳಿತಿದ್ದ ಸಚಿವ ಎಂಬಿ ಪಾಟೀಲ್ (Minister MB Patil) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರಿಗೆ ಸಿದ್ದರಾಮಯ್ಯ ವಾಚ್ ತೋರಿಸಿದರು. ಎರಡನೇ ಬಾರಿ ಸಿಎಂ ಆದ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಪತ್ನಿ RADO ವಾಚ್ ಕೊಡಿಸಿದ್ದಾರೆ.
ಕಾಂಗ್ರೆಸ್ ನಾಯಕರು ರಾಜೀವ್ ಗಾಂಧಿ ಫೋಟೋಗೆ ನಮಿಸಿ, ಸ್ಮರಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಮೊದಲು ಮೀಸಲಾತಿ ಇರಲಿಲ್ಲ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೂ ಮೀಸಲಾತಿ ಇರಲಿಲ್ಲ, ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. ಪಾರ್ಲಿಮೆಂಟಿನಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಡಲಿ ಅಂತ ಹೇಳಿದರು.
ಸಿಎಂ ನಿವಾಸಕ್ಕೆ ಆಕಾಂಕ್ಷಿಗಳ ದಂಡು!
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ನಿವಾಸದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಯಲಬುರ್ಗಾ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ್ ರಾಯರೆಡ್ಡಿ, ಸಿದ್ದರಾಮಯ್ಯರನ್ನು ಭೇಟಿ ಮಾಡಿದರು.
ಈ ವೇಳೆ ಮಾತನಾಡಿದ ರಾಯರೆಡ್ಡಿ, ಈ ವಾರದಲ್ಲಿ ಮಂತ್ರಿಮಂಡಲ ರಚನೆಯಾಗೋ ಸಾಧ್ಯತೆಯಿದೆ ಅಂತ ಹೇಳಿದ್ರು.
ಇದನ್ನೂ ಓದಿ: Mangaluru News: ನಿರುಪಯುಕ್ತ ವಸ್ತುಗಳನ್ನು ಪಾಲಿಕೆಗೆ ಕೊಡಿ, ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಸೂಚನೆ
ಇನ್ನು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳ ದಂಡೇ ಬಂದು ವಿಶ್ ಮಾಡಿದೆ. ಇನ್ನು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸಹ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಕೆಲಹೊತ್ತು ಸಿಎಂ ಬಳಿ ಮಾತುಕತೆ ನಡೆಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ