Basavaraj Bommai: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಘಟನೆ ಬಗ್ಗೆ ಸೂಕ್ತ ತನಿಖೆ, ಸಿಎಂ ಬಸವರಾಜ ಬೊಮ್ಮಾಯಿ ಆದೇಶ

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ನಾಯಕರು ಪಕ್ಷಬೇಧ ಮರೆತು ಖಂಡಿಸುತ್ತಿದ್ದಾರೆ. ಇದನ್ನು ರಾಜ್ಯ ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿದೆ. ಇದೀಗ ಈ ಪ್ರಕರಣದ ಸೂಕ್ತ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ

  • Share this:
ಬೆಂಗಳೂರು: ಮಾಜಿ ಮುಖ್ಯಮಂತ್ರಿ (Former CM) ಹಾಗೂ ಹಾಲಿ ವಿಪಕ್ಷ ನಾಯಕ (Opposition Party Leader) ಸಿದ್ದರಾಮಯ್ಯ (Siddaramaiah) ಮೇಲೆ ಮೊಟ್ಟೆ (Egg) ಎಸೆದಿದ್ದ ಪ್ರಕರಣ ಬಿರುಸು ಪಡೆಯುತ್ತಿದೆ. ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ನಾಯಕರು (State Leaders) ಪಕ್ಷಬೇಧ ಮರೆತು ಖಂಡಿಸುತ್ತಿದ್ದಾರೆ. ಇದನ್ನು ರಾಜ್ಯ ಸರ್ಕಾರ (State Government) ಸಹ ಗಂಭೀರವಾಗಿ ಪರಿಗಣಿಸಿದೆ. ಇದೀಗ ಈ ಪ್ರಕರಣದ ಸೂಕ್ತ ತನಿಖೆಗೆ (Investigation) ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಆದೇಶಿಸಿದ್ದಾರೆ. ಇನ್ನು ನಿನ್ನೆ ಈ ಬಗ್ಗೆ ಟ್ವೀಟ್ (Tweet) ಮಾಡಿದ್ದ ಬಸವರಾಜ ಬೊಮ್ಮಾಯಿ, ಮಾನ್ಯ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದ್ದರು.

ನಿನ್ನೆ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ

ಕೊಡಗಿನಲ್ಲಿ ನೆರೆಹಾನಿ ವೀಕ್ಷಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ತೆರಳಿದ್ದರು. ಈ ವೇಳೆ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿತರು ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಿ, ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು.

ಸೂಕ್ತ ತನಿಖೆಗೆ ಸಿಎಂ ಆದೇಶ

ಇನ್ನು ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣ ಸಂಬಂಧ ಘಟನೆ ಕುರಿತು ಸಮಗ್ರವಾದ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಪ್ರತಿಪಕ್ಷ ನಾಯಕರಿಗೆ ಅಗತ್ಯ ಭದ್ರತೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಇದನ್ನೂ ಓದಿ: School for Sale: ರಾಜಧಾನಿಯಲ್ಲಿ ಸರ್ಕಾರಿ ಶಾಲೆ ಮಾರಾಟಕ್ಕಿದೆಯಾ? 77 ವರ್ಷ ಹಳೆಯ ಸ್ಕೂಲ್‌ಗೆ ಇದೆಂಥಾ ಸ್ಥಿತಿ?

“ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ”

ಆರ್ ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‌ಮೊಟ್ಟೆ ಪ್ರಕರಣ ಬಗ್ಗೆ ಸಿದ್ದರಾಮಯ್ಯನವರ ಜತೆ ಮಾತಾಡಿದೆ. ಅವರಿಗೆ ಜೀವ ಬೆದರಿಕೆ ಇದೆ ಅಂತ ಮಾಧ್ಯಮಗಳಲ್ಲಿ ಸುದ್ದಿ ಬಂತು. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ನಿಮಗೆ ಯಾರಿಂದಾದರೂ ಬೆದರಿಕೆ ಕರೆ ಬಂದಿದೆಯಾ ಅಂತ ವಿಚಾರಿಸಿದ್ದೇನೆ. ಪ್ರಕರಣದ ಕುರಿತು ಎಲ್ಲ ಮಾಹಿತಿ ಪಡೆದುಕೊಂಡಿದ್ದು, ವಿಪಕ್ಷ ನಾಯಕರಿಗೆ ಎಲ್ಲ ರೀತಿಯ ಭದ್ರತೆ ಕೊಡುವಂತೆ ಡಿಜಿಪಿಗೆ ಸೂಚನೆ ನೀಡಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆಯೂ ನಿರ್ದೇಶನ ನೀಡಿದ್ದೇನೆ ಅಂತ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಘಟನೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಇನ್ನು ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮೊಟ್ಟೆ ಪ್ರದರ್ಶನ ಮಾಡಿ ತಮ್ಮ ನಾಯಕನಿಗೆ ಎಸೆದಿರುವ ವಿರುದ್ಧ ಕೈ ನಾಯಕರು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. "ನೀವು ಸಿದ್ದರಾಮಯ್ಯಗೆ ಮೊಟ್ಟೆಯಿಂದ ಹೊಡೆದಿದ್ದೀರಿ‌. ಹೊಟ್ಟೆ ತುಂಬುವ ಅನ್ನಭಾಗ್ಯ ಕೊಟ್ಟದ್ದು ಸಿದ್ದರಾಮಯ್ಯ. ಅನ್ನಭಾಗ್ಯದಿಂದ ಮೊಟ್ಟೆ ಹೊಡೆಯುವಷ್ಟು ಶಕ್ತಿ ಬಂದಿದ್ದು ಸಂತೋಷ" ಎಂದು ಪೋಸ್ಟರ್ ಪ್ರದರ್ಶನ ಮಾಡಿದರು.

ಇದನ್ನೂ ಓದಿ: Madhuswamy: ಕಾಂಗ್ರೆಸ್ ಸೇರ್ತಾರಾ ಸಚಿವ ಮಾಧುಸ್ವಾಮಿ? ಆಡಿಯೋ ಲೀಕ್ ಬೆನ್ನಲ್ಲೇ ಗುಸುಗುಸು!

“ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ?”

ಇನ್ನು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ದೇಶದ ಪಿತಾಮಹ ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಅಂತ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ನಾನು ಸತ್ಯ ಹೇಳುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರಬಂದವರು. ವಿ ಡಿ ಸಾವರ್ಕರ್ ಆಗಿದ್ದ ಅವರ ಫೋಟೋ ಹಿಡಿದುಕೊಂಡು ಇಂದು ವೀರ ಸಾವರ್ಕರ್ ಎಂದು ಪೂಜಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
Published by:Annappa Achari
First published: