ಕಾಂಗ್ರೆಸ್ ಪಕ್ಷ ಯಾರನ್ನು ಯಾವತ್ತು ಏಕಾಂಗಿ ಮಾಡಲ್ಲ ಸಿಎಂ ಬಿಎಸ್​​ವೈಗೆ ಸಿದ್ದರಾಮಯ್ಯ ತಿರುಗೇಟು

ಇಂದಿನಿಂದ ನಾನು ಚುನಾವಣಾ ಪ್ರಚಾರ ಆರಂಭಿಸುತ್ತಿದ್ದೇನೆ. ನಾವು 15 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. 12 ಕ್ಷೇತ್ರ ನಮ್ಮ ಪಕ್ಷದವರೇ ಇದ್ದರು. ಅವರು ಪಕ್ಷಕ್ಕೆ ದ್ರೋಹ ಮಾಡಿ ಹೋದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ಪಾಠ ಕಲಿಸಿದ್ದಾರೆ.

G Hareeshkumar | news18-kannada
Updated:November 20, 2019, 11:05 AM IST
ಕಾಂಗ್ರೆಸ್ ಪಕ್ಷ ಯಾರನ್ನು ಯಾವತ್ತು ಏಕಾಂಗಿ ಮಾಡಲ್ಲ ಸಿಎಂ ಬಿಎಸ್​​ವೈಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
  • Share this:
ಮೈಸೂರು(ನ.20): ನಾನು ಕಾಂಗ್ರೆಸ್‌ನಲ್ಲಿ ಏಕಾಂಗಿಯಲ್ಲ. ಕಾಂಗ್ರೆಸ್ ಪಕ್ಷ ಯಾವತ್ತು ಯಾರನ್ನು ಏಕಾಂಗಿ ಮಾಡಲ್ಲ. ಯಡಿಯೂರಪ್ಪರಿಗೆ ನಾನು ಏಕಾಂಗಿ ಆಗಬೇಕು ಅನಿಸಿರಬಹುದು. ಆದರೆ ಅವರ ಆಸೆ ಈಡೇರುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಬಿಜೆಪಿಯವರಿಗೆ ಟಾರ್ಗೆಟ್ ನಾನೇ. ಜೆಡಿಎಸ್ ಅವರ ಟಾರ್ಗೆಟ್ ನಾನೇ. ಅನರ್ಹರ ಟಾರ್ಗೆಟ್ ಸಹಾ ನಾನೇ. ಇದನ್ನು ನೋಡಿದರೆ ಅವರಿಗೆಲ್ಲಾ ನನ್ನ ಮೇಲೆ ಭಯ ಇರಬೇಕು. ಅವರೆಲ್ಲಾ ಹತಾಶರಾಗಿದ್ದಾರೆ. ಅದಕ್ಕಾಗಿ ನನ್ನನ್ನ ಟಾರ್ಗೆಟ್ ಮಾಡ್ತಾರೆ. ಎಲ್ಲರಿಗೂ ಒಂದು ಸಂಸ್ಕೃತಿ ಇರಬೇಕು. ಬಿಜೆಪಿಯ ಯಾವ ನಾಯಕರಿಗೂ ಒಳ್ಳೆಯ ಸಂಸ್ಕೃತಿ ಇಲ್ಲ. ನೈಜ ಮಾತುಗಳನ್ನು ಆಡಲ್ಲ. ಸುಳ್ಳನ್ನೇ ಪ್ರಸಾರ ಮಾಡೋದು ಅವರ ಕೆಲಸ. ಸತ್ಯ ಸುಳ್ಳು ಮಾಡೋದು ಸುಳ್ಳನ್ನು ಸತ್ಯ ಮಾಡೋದು ಅವರು. ಇದು ಹಿಟ್ಲರ್ ಮನಸ್ಥಿತಿ ಎಂದು ಹೇಳಿದರು.

ಉಪಚುನಾವಣೆ ಗಲಾಟೆಯಲ್ಲಿ ರಾಜ್ಯ ಸರ್ಕಾರ ನೆರೆ ಸಂತ್ರಸ್ಥರನ್ನು ಮರೆತಿದ್ದಾರೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಯಾವ ಜಿಲ್ಲಾ ಮಂತ್ರಿಗಳು ಸ್ಪಂದಿಸುತ್ತಿಲ್ಲ. ಜನರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೂ ಜವಾಬ್ದಾರಿ ಇಲ್ಲ. ರಾಜ್ಯ ಸರ್ಕಾರಕ್ಕೂ ಜವಾಬ್ದಾರಿ ಇಲ್ಲ. ಸಿಎಂ  ಯಡಿಯೂರಪ್ಪ ಹಣ ತರಲು ವಿಫಲರಾಗಿದ್ದಾರೆ. ಪ್ರಧಾನಿ ಕರ್ನಾಟಕದ ಕಡೆ ತಿರುಗಿ ನೋಡಿಲ್ಲ ಎಂದರು.

ಇದನ್ನೂ ಓದಿ : ವಿಧಾಸಭಾ ಉಪಚುನಾವಣೆ : ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಹುಣಸೂರಿನಲ್ಲಿ ಸಿದ್ದರಾಮಯ್ಯ ಪ್ರಚಾರ

ಇಂದಿನಿಂದ ನಾನು ಚುನಾವಣಾ ಪ್ರಚಾರ ಆರಂಭಿಸುತ್ತಿದ್ದೇನೆ. ನಾವು 15 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. 12 ಕ್ಷೇತ್ರ ನಮ್ಮ ಪಕ್ಷದವರೇ ಇದ್ದರು. ಅವರು ಪಕ್ಷಕ್ಕೆ ದ್ರೋಹ ಮಾಡಿ ಹೋದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ಪಾಠ ಕಲಿಸಿದ್ದಾರೆ. ಇಲ್ಲೂ ಪಕ್ಷಾಂತರ ಸಹಿಸಲ್ಲ ಜನ ಅವರನ್ನು ಸೋಲಿಸುತ್ತಾರೆ. ಅವರೆಲ್ಲಾ ಅನರ್ಹ ಶಾಸಕ ಹಣೆಪಟ್ಟಿ ಹೊತ್ತಿದ್ದಾರೆ. ಅನರ್ಹರನ್ನು ರಾಜ್ಯದ ಜನ ಸೋಲಿಸುತ್ತಾರೆ. ಲೋಕಸಭೆ ಸೋತ ಕಾಂಗ್ರೆಸ್ ಅಭ್ಯರ್ಥಿಗಳು ಪಕ್ಷಾಂತರ ಮಾಡಿರಲಿಲ್ಲ ಎಂದು ತಿಳಿಸಿದರು.

ಉಪಚುನಾವಣೆಯಲ್ಲಿ ಸೋಲುವ ಕಡೆ ಕಾಂಗ್ರೆಸ್‌ಗೆ ಬೆಂಬಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಉದ್ದೇಶವು ಅನರ್ಹರು ಸೋಲಬೇಕು. ಇಬ್ಬರ ಉದ್ದೇಶ ಒಂದೆ. ಸಮ್ಮಿಶ್ರ ಸರ್ಕಾರ ಬೀಳಲು ಇವರೇ ಕಾರಣ. ಅದಕ್ಕಾಗಿ ಅವರು ಸೋಲಬೇಕು. ಈ ಮೂಲಕ ರಾಜ್ಯಾದ್ಯಂತ ಒಂದು ಸಂದೇಶ ರವಾನೆಯಾಗಬೇಕು. ಪಕ್ಷಾಂತರಿಗಳ ವಿರೋಧಿ ಸಂದೇಶ ರವಾನೆಯಾಗಬೇಕು.
ಈ ವಿಚಾರವಾಗಿ ಕಾಂಗ್ರೆಸ್ ಜೆಡಿಎಸ್ ಇಬ್ಬರ ಉದ್ದೇಶ ಒಂದೇ. ಆದರೆ ಅವರ ದಾರಿ ನಮ್ಮ ದಾರಿ ಒಂದಲ್ಲ ಎಂದರು.ಸಚಿವ  ಶ್ರೀರಾಮುಲು  ಒಳ್ಳೆಯ ಪಾಪ್ಯಲರ್ ಲೀಡರ್. ನಾನು ಅಷ್ಟು ಪಾಪ್ಯಲರ್ ಅಲ್ಲ. ಅವರು ಯಾರ ಮೇಲಾದರೂ ತೊಡೆ ತಟ್ಟುತ್ತಾರೆ ನಮಗೆ ಆ ರೀತಿ ತಟ್ಟಲು ಸಾಧ್ಯವಿಲ್ಲ. ಅಷ್ಟು ಪಾಪುಲರ್ ಲಿಡರ್ ಜೊತೆ ಸ್ಪರ್ಧೆ ಮಾಡಲು ಆಗೋಲ್ಲ ಎಂದು  ಶ್ರೀರಾಮುಲು ಹೇಳಿಕೆಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿಜೆಡಿಎಸ್ ಮತ್ತು ಬಿಜೆಪಿ ನಾಯಕರು ಹಣದ ಮೂಲಕ ಚುನಾವಣೆ ಮಾಡಲು ಹೊರಟಿದ್ದಾರೆ ; ಸಿದ್ಧರಾಮಯ್ಯ

ಕಳಸಾ ಬಂಡೂರಿ ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವತ್ತು ನಮ್ಮ ಜೊತೆ ಇಲ್ಲ. ಪ್ರಧಾನಿ  ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಯಾವತ್ತು ಕೇಂದ್ರ ನಮ್ಮ‌ ಜೊತೆ ಬಂದಿಲ್ಲ. ಕಳಸಾ ಬಂಡೂರಿ ವಿಚಾರದಲ್ಲಿ ನಾನು ನಿಯೋಗ ಕರೆದುಕೊಂಡು ಹೋಗಿದ್ದೆ. ನೀವು ಮಧ್ಯಪ್ರವೇಶ ಮಾಡಿ ಅಂತ ಮನವಿ ಮಾಡಿದ್ದೆ. ಒಂದೆ ಒಂದು ಮಾತು ಸಹ ಆಡಲಿಲ್ಲ. ಈಗಲೂ ಕೇಂದ್ರ ನಮ್ಮ ಪರ ಇಲ್ಲ ಎಂದರು.

(ವರದಿ :  ಪುಟ್ಟಪ್ಪ)

First published: November 20, 2019, 10:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading