ವಿನಾಃಕಾರಣ ಕಾಂಗ್ರೆಸ್​ ಕೃಷಿ ಕಾಯ್ದೆಯನ್ನು ವಿರೋಧಿಸುತ್ತಿದೆ, ಸುಳ್ಳು ಹೇಳುತ್ತಿದೆ; ಕೈ ಜಾಥಾ ವಿರುದ್ಧ ರಾಮುಲು ಕಿಡಿ

ಕಾಂಗ್ರೆಸ್​ ಪಕ್ಷದ ರೈತ ಕಾಳಜಿಯನ್ನು ಪ್ರಶ್ನೆ ಮಾಡಿರುವ ಬಿ. ಶ್ರೀರಾಮುಲು, "ದಶಕಗಳವರೆಗೆ ದೇಶವನ್ನಾಳಿದ ಕಾಂಗ್ರೆಸ್ ಪ್ರತಿ ಚುನಾವಣೆ ಬಂದಾಗಲೂ ರೈತರ ಕಲ್ಯಾಣ ಎಂದು ಬೊಗಳೆ ಬಿಟ್ಟಿತೇ ಹೊರತು ಕಾರ್ಯರೂಪಕ್ಕೆ ತರಲಿಲ್ಲ ಎಂದು ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.

ಸಚಿವ ಶ್ರೀರಾಮುಲು.

ಸಚಿವ ಶ್ರೀರಾಮುಲು.

 • Share this:
  ಬೆಂಗಳೂರು (ಜನವರಿ 20); ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ನೀತಿಗಳು ಮತ್ತು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ನಗರದಲ್ಲಿ ಬೃಹತ್ ರ್ಯಾಲಿ ನಡೆಸಿದೆ. ಕಾಂಗ್ರೆಸ್ ಪಕ್ಷದ ರೈತ ಘಟಕದಿಂದ ಆಯೋಜಿಸಲಾಗಿರುವ ಈ ಜಾಥಾದಲ್ಲಿ 12 ಜಿಲ್ಲೆಗಳಿಂದ ರೈತರು ನಗರಕ್ಕೆ ಆಗಮಿಸಿ ಪಾಲ್ಗೊಂಡಿದ್ದಾರೆ. ಫ್ರೀಡಂ ಪಾರ್ಕ್​ವರೆಗೂ ಪ್ರತಿಭಟನಾ ಮೆರವಣಿಗೆ ಸಾಗಲಿದೆ. ಅಲ್ಲಿ ಬೃಹತ್ ಸಮಾವೇಶವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮೆಜೆಸ್ಟಿಕ್ ಬಳಿ ರ್ಯಾಲಿಗೆ ಚಾಲನೆ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕ ಮಾತ್ರವಲ್ಲದೆ ಎನ್​ಎಸ್​ಯುಐ, ಸೇವಾದಳ ಸೇರಿದಂತೆ ಕಾಂಗ್ರೆಸ್ ಪಕ್ಷದ ಇತರ ಘಟಕಗಳೂ ಈ ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ನಿನ್ನೆ ರಾತ್ರಿಯಿಂದಲೇ ವಿವಿಧ ಜಿಲ್ಲೆಗಳಿಂದ ರೈತರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬಸ್ಸು, ರೈಲು ಹೀಗೆ ವಿವಿಧ ವಾಹನಗಳಿಂದ ಬೆಂಗಳೂರಿಗೆ ಆಗಮಿಸಿ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಆದರೆ, ಕಾಂಗ್ರೆಸ್​ ನಾಯಕರ ಈ ಹೋರಾಟವನ್ನು ಸಚಿವ ಬಿ. ಶ್ರೀರಾಮುಲು ಟೀಕಿಸಿದ್ದಾರೆ.  ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಹಾಗೂ ಕಾಂಗ್ರೆಸ್​ ಪಕ್ಷದ ರೈತ ಕಾಳಜಿಯನ್ನು ಪ್ರಶ್ನೆ ಮಾಡಿರುವ ಬಿ. ಶ್ರೀರಾಮುಲು, "ದಶಕಗಳವರೆಗೆ ದೇಶವನ್ನಾಳಿದ ಕಾಂಗ್ರೆಸ್ ಪ್ರತಿ ಚುನಾವಣೆ ಬಂದಾಗಲೂ ರೈತರ ಕಲ್ಯಾಣ ಎಂದು ಬೊಗಳೆ ಬಿಟ್ಟಿತೇ ಹೊರತು ಕಾರ್ಯರೂಪಕ್ಕೆ ತರಲಿಲ್ಲ. ಆದರೆ, ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬೆಳೆಗಳಿಗೆ ಶೇ.43 ಬೆಂಬಲ ಬೆಲೆ ಹೆಚ್ಚಿಸಿದೆ, ನೀರಾವರಿ ವ್ಯವಸ್ಥೆ ಶೇ.45ರಷ್ಟು ಜಾಸ್ತಿ ಮಾಡಿದೆ" ಎಂದು ಕಿಡಿಕಾರಿದ್ದಾರೆ.  ಮತ್ತೊಂದು ಟ್ವೀಟ್​ನಲ್ಲಿ, "ವಿನಾಕಾರಣ ಕಾಂಗ್ರೆಸ್ ಕೃಷಿ ಕಾಯ್ದೆ ವಿರೋಧಿಸುತ್ತಿದೆ, ಸುಳ್ಳು ಹೇಳುತ್ತಿದೆ. ಎಪಿಎಂಸಿ ಸುಧಾರಣೆಯಿಂದ ಬ್ಯಾಡಗಿ ಮೆಣಸಿನಕಾಯಿಗೆ ಭಾರಿ ಬೆಲೆ ಬಂದಿದೆ, ರಾಯಚೂರಿನ ಸಾವಿರಾರು ರೈತರು ಬೆಂಬಲ ಬೆಲೆಗಿಂತ ಹೆಚ್ಚಿನ ದರಕ್ಕೆ ಭತ್ತ ಮಾರಿದ್ದಾರೆ. ಅನ್ನದಾತರಿಗೆ ಹೆಚ್ಚಿನ ಬೆಲೆ ಸಿಗುವುದು ಬೇಡವೇ?

  ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಜಾಥಾ

  ದಿಲ್ಲಿಯಿಂದ ಒಂದು ರೂ. ಬಿಡುಗಡೆಯಾದರೆ, ಅದು ಹಳ್ಳಿ ತಲುಪುವ ವೇಳೆ 15 ಪೈಸೆಯಾಗುತ್ತದೆ ಎಂದು ಇದೇ ಕಾಂಗ್ರೆಸ್ಸಿನ ರಾಜೀವ್ ಗಾಂಧಿಯವರು ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡಿದ್ದರು. ಆದರೆ, ಶ್ರೀ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ರೈತರ ಖಾತೆಗೆ 6 ಸಾವಿರ ರೂ. ನೇರವಾಗಿ ಜಮೆಯಾಗುತ್ತಿದೆ" ಎಂದು ತಿಳಿಸಿದ್ದಾರೆ.
  Published by:MAshok Kumar
  First published: