• Home
  • »
  • News
  • »
  • state
  • »
  • Assistant Professor Jobs: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಪ್ರವೇಶ ಪತ್ರ ಲಭ್ಯ, ಡ್ರೆಸ್ ಕೋಡ್ ಕಡ್ಡಾಯ!

Assistant Professor Jobs: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಪ್ರವೇಶ ಪತ್ರ ಲಭ್ಯ, ಡ್ರೆಸ್ ಕೋಡ್ ಕಡ್ಡಾಯ!

ಈ ಮೊದಲು ವಾಹನ ಚಾಲಕರಿಗೆ 696 ರೂ. ನೀಡಲಾಗುತ್ತಿತ್ತು. ಈ ಮೊತ್ತವನ್ನು 1,253 ರೂ.ಗಳಿಗೆ ಹೆಚ್ಚಿಸಲಾಗಿದೆ. (ಸಾಂದರ್ಭಿಕ ಚಿತ್ರ)

ಈ ಮೊದಲು ವಾಹನ ಚಾಲಕರಿಗೆ 696 ರೂ. ನೀಡಲಾಗುತ್ತಿತ್ತು. ಈ ಮೊತ್ತವನ್ನು 1,253 ರೂ.ಗಳಿಗೆ ಹೆಚ್ಚಿಸಲಾಗಿದೆ. (ಸಾಂದರ್ಭಿಕ ಚಿತ್ರ)

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಆನ್​ಲೈನ್​ನಲ್ಲಿ ಪ್ರವೇಶ ಪತ್ರ ಲಭ್ಯವಿದೆ. ಜೊತೆಗೆ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನ ಕಡ್ಡಾಯಗೊಳಿಸಲಾಗಿದೆ

  • Share this:

ಬೆಂಗಳೂರು, (ಫೆ.26): ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ (Assistant Professor Jobs) ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ (Competitive Exam) ಅಗತ್ಯವಿರುವ ಪ್ರವೇಶ ಪತ್ರವನ್ನು(Admission letter) ಫೆ.28ರಿಂದ ಅಧಿಕೃತ ಜಾಲತಾಣದ ಮೂಲಕ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ (Dress code) ನಿಗದಿಪಡಿಸಲಾಗಿದೆ. ಜೊತೆಗೆ ಪರೀಕ್ಷಾ ಕೊಠಡಿಗೆ ಕೆಲವು ವಸ್ತುಗಳನ್ನು ನಿಷೇಧಿಸಲಾಗಿದೆ. ಹೀಗಾಗಿ ನಿಷೇಧಿತ ವಸ್ತುಗಳ ಪಟ್ಟಿಯನ್ನೂ ಸಹ ಇಲಾಖೆ ತಿಳಿಸಿದೆ. ಈ ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ.


ಮಾರ್ಚ್ 12ರಿಂದ 16ರ ವರೆಗೆ ಪರೀಕ್ಷೆ


ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟವಾಗಿದ್ದು, ಈ ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ ಹಾಗೂ ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಷೇಧಿತ ವಸ್ತುಗಳ ಪಟ್ಟಿ


ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ತರುವಂತಿಲ್ಲ. ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರವನ್ನು ತರುವಂತಿಲ್ಲ. ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಬಾಕ್ಸ್, ಕ್ಯಾಲ್ಕುಲೇಟರ್, ಲಾಗ್ ಟೇಬಲ್ ವಸ್ತುಗಳು ನಿಷೇಧ ಮತ್ತು ವೈಯಕ್ತಿಕ ವಸ್ತುಗಳಾದ ವೈಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: BSNL Recruitment 2022: ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ


ಈ ಬಾರಿ ನಿಗದಿತ ವಸ್ತ್ರ ಸಂಹಿತೆ ಕಡ್ಡಾಯ


ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆಪಾರದರ್ಶಕ ಸರ್ಜಿಕಲ್ ಮಾಸ್ಕ್ (ಎನ್-95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.


ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ (ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.


ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ


ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ ಕಲ್ಪಿಸಿದೆ.


ಇದನ್ನೂ ಓದಿ: Indian Navy Recruitment: ನೌಕಾದಳದಲ್ಲಿ 155 SSC ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, B Tech ಆದವರು Apply ಮಾಡಿ


ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು-2022 ಅನ್ನು ಪ್ರಕಟಿಸಿದ್ದ ಕರಡು ಅಧಿಸೂಚನೆಗಳಿಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಗಣಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಎಸ್ ಶಿವಕುಮಾರ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.


ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಇತರೆ ಹಿಂದುಳಿದ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ 47 ವರ್ಷದವರಿಗೆ, ಹಿಂದುಳಿದ ವರ್ಗದ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 45 ವರ್ಷ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 42 ವರ್ಷದವರೆಗೂ ಅವಕಾಶ ನೀಡಿದೆ. ಪ್ರತಿ ಪ್ರವರ್ಗದಲ್ಲಿ ಶೇ.1ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಂದ ಭರ್ತಿಗೆ ಅವಕಾಶ ನೀಡಿದೆ.

Published by:Pavana HS
First published: