ಗ್ರಾಮ ಪಂಚಾಯತಿ ಚುನಾವಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ; ಸಿಎಂ ಬಿಎಸ್ ಯಡಿಯೂರಪ್ಪ

ಮೆಕಾಲೆ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡಿ ನಮ್ಮದೇ ಆದ, ನಮ್ಮ ತನದಿಂದ ಕೂಡಿದ ಒಂದು ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮೊದಲ ಬಾರಿಗೆ ಅದನ್ನು ಜಾರಿಗೆ ತರುವುದು ಹೇಗೆ ಎನ್ನುವ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

  • Share this:
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಗೊಂದಲ ಮಂದುವರೆದಿದ್ದು, ಇನ್ನೆರಡು ದಿನ ಕಾದು ನೋಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆಗೂ ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ. ವೇಟ್ ಫಾರ್ ಅನದರ್ ಟು ಡೇಸ್ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣಾ ದಿನಾಂಕ ಪ್ರಕಟಗೊಂಡಿದ್ದು, ನೀತಿ ಸಂಹಿತೆ ಜಾರಿಗೊಂಡಿದೆ. ಇಂದಿನಿಂದ ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ಚುನಾವಣೆ ಸಿದ್ಧತೆಗೆ ಈಗಾಗಲೇ ನಮ್ಮ ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಐದಾರು ತಂಡ ಪ್ರವಾಸ ಮಾಡುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆ ನಮಗೆ ವಿಧಾನಸಭೆ, ಲೋಕಸಭೆಯಷ್ಟು ಮಹತ್ವವಾದದ್ದಾಗಿದೆ. ನಮ್ಮ ಸಂಘಟನೆಯನ್ನು ಭದ್ರ ಮಾಡಿಕೊಳ್ಳಲು ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಹಾಗಾಗಿ ಈ ಕಡೆ ಹೆಚ್ಚು ಗಮನ ಕೊಟ್ಟು ಅರ್ಹ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ. ಪಕ್ಷದ ಚಿನ್ಹೆ ಇರದೇ ಇದ್ದರೂ ಸಹ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಇರುತ್ತಾರೆ. ಹಾಗಾಗಿ ಹೆಚ್ಚಿನ ಆದ್ಯತೆ ನೀಡುತ್ತೇವೆ ಎಂದರು.

ಇದನ್ನು ಓದಿ: Grama Panchayat Elections: ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಡಿ. 22 ಮತ್ತು 27ಕ್ಕೆ ಮತದಾನ

ಹೊಸ ಶಿಕ್ಷಣ ನೀತಿ ಬಗ್ಗೆ ನಿವೃತ್ತ ಮುಖ್ಯ ಕಾರ್ಯದರ್ಶಿ ರಂಗನಾಥ್ ನೇತೃತ್ವದ ಸಮಿತಿ ವರದಿಯನ್ನು ಕೊಟ್ಟಿದೆ. ಅದನ್ನು ಅನುಷ್ಠಾನಗೊಳಿಸುವುದು ಹೇಗೆ?  ಅದರ ಸಾಧಕ- ಬಾದಕ ಏನು? ಎಂದು ಚರ್ಚೆ ಮಾಡಿದ್ದೇವೆ. ಇಡೀ ದೇಶದಲ್ಲಿ ಪ್ರಥಮವಾಗಿ ಈ ರೀತಿ ಕ್ರಾಂತಿಕಾರಕ ಹೆಜ್ಜೆಯನ್ನು ನಾವು ಇಡುತ್ತಿದ್ದೇವೆ ಎಂದು ಹೇಳಿದರು.

ಮೆಕಾಲೆ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡಿ ನಮ್ಮದೇ ಆದ, ನಮ್ಮ ತನದಿಂದ ಕೂಡಿದ ಒಂದು ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮೊದಲ ಬಾರಿಗೆ ಅದನ್ನು ಜಾರಿಗೆ ತರುವುದು ಹೇಗೆ ಎನ್ನುವ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಇದನ್ನು ಕಾರ್ಯರೂಪಕ್ಕೆ ತರುವ ತೀರ್ಮಾನ ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.
Published by:HR Ramesh
First published: