ಜಿಎಸ್​ಟಿ ಜಾರಿಯಾಗಿ 4 ವರ್ಷ; ರಾಜ್ಯಗಳ ನೋವಿನ ಮೇಲೆ ಕೇಂದ್ರದ ಸಂಭ್ರಮ; ಎಚ್​ಡಿಕೆ ಅಸಮಾಧಾನ

ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು GSTಯ ಉದ್ದೇಶ.

ಎಚ್​.ಡಿ ಕುಮಾರಸ್ವಾಮಿ.

ಎಚ್​.ಡಿ ಕುಮಾರಸ್ವಾಮಿ.

  • Share this:
    ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜಿಎಸ್​ಟಿ ಜಾರಿಗೆ ತಂದು ನಾಲ್ಕು ವರ್ಷಗಳು ಕಳೆದವು. ಇದರ ಅಂಗವಾಗಿ ಕೇಂದ್ರ ಸರ್ಕಾರ ಸಂಭ್ರಮ ಪಡುತ್ತಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಸಂಭ್ರಮ ಪಡುತ್ತಿದೆ. ರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.

    GSTಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ 9 ಸಾವಿರ ಕೋಟಿ ರೂಪಾಯಿಯಷ್ಟು GST ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಎಚ್​ಡಿಕೆ ಹರಿಹಾಯ್ದಿದ್ದಾರೆ.



    ಇದನ್ನು ಓದಿ: ರಾಜ್ಯ ಅಭಿವೃದ್ದಿ ಪರಿಷತ್ ಸಭೆ; ಎಸ್ಸಿ, ಎಸ್​ಟಿ ಅಭಿವೃದ್ಧಿಗೆ 26 ಸಾವಿರ ಕೋಟಿ ರೂ. ಅನುದಾನ

    ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು GSTಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂಅನ್ನು GSTಗೆ ಸೇರಿಸದಂತೆ ಹೋರಾಡುವಂತಾಗಿದೆ. ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪಾರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ? ಎಂದು ಹೇಳಿದ್ದಾರೆ.

    ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ.
    Published by:HR Ramesh
    First published: