ಮಂಡ್ಯ: ಇನ್ಮುಂದೆ ಸಹಾಯ ಕೇಳಿ ಯಾರು ನನ್ನ ಬಳಿ ಬರಬೇಡಿ. ನಾನು ಯಾವುದೇ ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಮಾಜಿ ಶಾಸಕ ಸುರೇಶ್ ಗೌಡ (Former MLA Suresh Gowda) ಹೇಳಿದ್ದಾರೆ. ಮದ್ದೂರು (Maddur) ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸುರೇಶ್ ಗೌಡ, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ. ಈ ಚುನಾವಣೆ (Karnataka Election 2023) ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಬೇಸರ ಹೊರ ಹಾಕಿದರು. ವೈಯಕ್ತಿಕ ಕಷ್ಟ ಹೇಳಿಕೊಂಡು ಯಾರು ಕೂಡ ನನ್ನ ಬಳಿ ಬರಬೇಡಿ. ಇನ್ಮುಂದೆ ಯಾವುದೇ ಮದುವೆ ಬಂದರು ಮುಯ್ಯಿ ಹಾಕಲ್ಲ. ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಿ ಎಂದು ಹೇಳುವ ಮೂಲಕ ಸೋಲಿನ ನೋವು ತೋಡಿಕೊಂಡರು.
ಸುರೇಶ್ ಗೌಡರು ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ (Nagamangala Assembly Constituency) ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ನ ಚಲುವರಾಯಸ್ವಾಮಿ (Chaluvarayaswamy) ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಮಾಜಿ ಸಂಸದ ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡರು (Sudha Shivaramegowda) ಸ್ಪರ್ಧಿಸಿದ್ದರು.
ಚಲುವರಾಯಸ್ವಾಮಿ ಅವರು 4,414 ಮತಗಳ ಅಂತರದಿಂದ ಸುರೇಶ್ ಗೌಡರ ವಿರುದ್ಧ ಗೆದ್ದಿದ್ದಾರೆ. ಸುಧಾ ಶಿವರಾಮೇಗೌಡರು 7,769 ಮತಗಳನ್ನು ಪಡೆದುಕೊಂಡಿದ್ದಾರೆ.
ಸಿಎಂ ಬಜೆಟ್ ಪೂರ್ವ ಸಿದ್ಧತಾ ಸಭೆ
ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಸಿಎಂ ಬಜೆಟ್ ಪೂರ್ವ ಸಿದ್ದತಾ ಸಭೆ ನಡೆಸಿದ್ದಾರೆ. ಶಕ್ತಿಭವನದಲ್ಲಿ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗ್ಯಾರಂಟಿ ಯೋಜನೆಗಳ ಜೊತೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: IAS Vs IPS: ಐಪಿಎಸ್ ಅಧಿಕಾರಿ ಡಿ ರೂಪಾಗೆ ರಿಲೀಫ್
ಬಳಿಕ ಶಕ್ತಿ ಭವನದಲ್ಲೇ ಸಿಎಂ ಪಠ್ಯ ಪರಿಷ್ಕರಣೆ ಸಂಬಂಧ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಭಾಗಿಯಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ