NEP 2020| ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ; ಬಸವರಾಜ ಬೊಮ್ಮಾಯಿ

ಸಮಗ್ರ ಚರ್ಚೆ ನಡೆಸದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿಚಾರ್ಜ್‌ ನಡೆಸಿದ್ದರು.

ಬಸವರಾಜ ಬೊಮ್ಮಾಯಿ.

ಬಸವರಾಜ ಬೊಮ್ಮಾಯಿ.

 • Share this:
  ಬೆಂಗಳೂರು (ಸೆಪ್ಟೆಂಬರ್ 15): ರಾಷ್ಟ್ರೀಯ ಶಿಕ್ಷಣ ನೀತಿ 2020 (National Education Policy 2020) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಇಂದು ಬಿ.ಬಿ.ಎಂ.ಪಿ (BBMP) ಆಯೋಜಿಸಿದ್ದ ಭಾರತದ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ ಸಿಎಂ ಬಸವರಾಜ ಬೊಮ್ಮಾಯಿ, "ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಮತ್ತು ಪ್ರೌಢಶಿಕ್ಷಣದ ಬಗ್ಗೆ ಸಮಿತಿ ರಚಿಸಿ ಅನುಷ್ಠಾನದ ಬಗ್ಗೆ ತೀರ್ಮಾನಿಸಲಾಗುವುದು. ಯಾರೂ ಕೂಡ ಆತಂಕ ಪಡುವ ಅಗತ್ಯ ಇಲ್ಲ" ಎಂದು ಅವರು ಹೇಳಿದರು.

  ಸಮಗ್ರ ಚರ್ಚೆ ನಡೆಸದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿಚಾರ್ಜ್‌ ನಡೆಸಿದ್ದರು.

  ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಇಪಿ ಜಾರಿ ನಿಲ್ಲಬೇಕು ಎಂದು ಆಗ್ರಹಿಸಿ ಸೆ.14ರಂದು ವಿಧಾನಸೌಧ ಚಲೋ ಹೋರಾಟ ನಡೆಸುತ್ತಿದ್ದರು. ಈ ವೇಳೆ ಮನಬಂದಂತೆ ಲಾಠಿಚಾರ್ಜ್ ನಡೆಸಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಇನ್ನೂ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಸರ್ಕಾರ ಎಸಗಿದ ದೌರ್ಜನ್ಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

  ಇದನ್ನೂ ಓದಿ: Accident Case| ಬೆಂಗಳೂರಿನಲ್ಲಿ ಡೆಡ್ಲಿ ಆಕ್ಸಿಡೆಂಟ್; ಕಾರು ಡಿಕ್ಕಿ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದು ಮೂವರ ಸಾವು !

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: