ಮುಂದಿನ ಎರಡು ದಿನ ಕರಾವಳಿ-ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ಭರ್ತಿಯಾಗಿವೆ. ಮಲೆನಾಡಿನ ಜೀವ ನದಿಗಳಾದ ತುಂಗಾ ಮತ್ತು ಭದ್ರಾ ತುಂಬಿ ಹರಿಯುತ್ತಿದ್ದು, ಹರಿಹರ, ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.

ತುಂಗಭದ್ರಾ ನದಿ

ತುಂಗಭದ್ರಾ ನದಿ

 • Share this:
  ಬೆಂಗಳೂರು (ಆಗಸ್ಟ್‌ 11); ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಪರವೀಕ್ಷಣಾ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

  ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ಭರ್ತಿಯಾಗಿವೆ. ಮಲೆನಾಡಿನ ಜೀವ ನದಿಗಳಾದ ತುಂಗಾ ಮತ್ತು ಭದ್ರಾ ತುಂಬಿ ಹರಿಯುತ್ತಿದ್ದು, ಹರಿಹರ, ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.

  ಇನ್ನೂ ಚಿಕ್ಕಮಗಳೂರಿನಲ್ಲಿ ಅನೇಕ ಕಡೆಗಳಲ್ಲಿ ವಿಪರೀತ ಮಳೆಗೆ ಸೇತುವೆಗಳೇ ಕೊಚ್ಚಿ ಹೋಗಿದ್ದು, ಜನ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ. ನೂರಾರು ಮನೆಗಳು ಹಾನಿಗೊಳಗಾಗಿವೆ. ಈ ನಡುವೆ ಆಗಸ್ಟ್‌ 11 ರಿಂದ 13ರ ವರೆಗೆ ಈ ಭಾಗದಲ್ಲಿ ಮತ್ತಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಪರಿವೀಕ್ಷಣಾ ಕೇಂದ್ರ ಎಚ್ಚರಿಕೆ ನೀಡಿದೆ.  ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಪರಿವೀಕ್ಷಣಾ ಕೇಂದ್ರ, "ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಧ್ಯಮ ಪ್ರಮಾಣದಿಂದ ವ್ಯಾಪಕ ಪ್ರಮಾಣದ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮಳೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ ಕಂಡುಬರಲಿದೆ" ಎಂದು ತಿಳಿಸಿದೆ.
  Published by:MAshok Kumar
  First published: