HOME » NEWS » State » THE NIGHT CURFEW WAS DECIDED WITH GREAT DELIBERATION NOT A POLITICAL DECISION SAYS MINISTER K SUDHAKAR RHHSN

ಬಹಳ ವಿವೇಚನೆಯಿಂದಲೇ‌ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿತ್ತು, ಅದೇನೂ ರಾಜಕೀಯ ನಿರ್ಧಾರವಲ್ಲ: ಸಚಿವ ಕೆ.ಸುಧಾಕರ್

ಸಂಸದ ಡಿ.ಕೆ.ಸುರೇಶ್ ನೀಡುವ ಸರ್ಟಿಫಿಕೇಟ್ ಅಗತ್ಯವಿಲ್ಲ. ಜಾಮೀನಿನ ಮೇಲೆ ಹೊರಗೆ ಇರುವವರೇ ಆರೋಪ ಮಾಡುತ್ತಾರೆ. ಮೋಜು, ಮಸ್ತಿ, ಭ್ರಷ್ಟಾಚಾರದ ಆರೋಪ ಹೊತ್ತುಕೊಂಡು ಜಾಮೀನಿನ ಮೇಲೆ ಹೊರಗೆ ಇರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಸುಧಾಕರ್ ಕಟುವಾಗಿ ಪ್ರತಿಕ್ರಿಯಿಸಿದರು.

news18-kannada
Updated:December 25, 2020, 4:35 PM IST
ಬಹಳ ವಿವೇಚನೆಯಿಂದಲೇ‌ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿತ್ತು, ಅದೇನೂ ರಾಜಕೀಯ ನಿರ್ಧಾರವಲ್ಲ: ಸಚಿವ ಕೆ.ಸುಧಾಕರ್
ಸಚಿವ ಡಾ.ಕೆ.ಸುಧಾಕರ್
  • Share this:
ಬೆಂಗಳೂರು (ಡಿಸೆಂಬರ್ 25): ಕೊರೋನಾ ಸೋಂಕು ನಿಯಂತ್ರಣದ ಉದ್ದೇಶದಿಂದ ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ‌ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು,‌ ಮಾಧ್ಯಮಗಳಲ್ಲಿ ಎಡಬಿಡಂಗಿ ಸರ್ಕಾರ ಎನ್ನಲಾಗಿದೆ. ಆದರೆ ಇದೇ‌ ನಮ್ಮ ಸರ್ಕಾರ ಉತ್ತಮವಾದ ನಿರ್ಧಾರಗಳಿಂದ ಕೊರೋನಾ ನಿಯಂತ್ರಣಕ್ಕೆ ತಂದಿದೆ. ರಾಜ್ಯ ಸರ್ಕಾರದ ಕ್ರಮಗಳಿಂದಾಗಿ ಕೊರೋನಾ ಸೋಂಕಿಗೊಳಗಾದವರಲ್ಲಿ ಶೇ. 97.5 ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ. 1.22ಗೆ ಇಳಿಕೆಯಾಗಿದೆ. ಯು.ಕೆ.ಯಲ್ಲಿ ಲಾಕ್ ಡೌನ್ ಆಗಿದೆ ಹಾಗೂ ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಆಗಿದೆ. ಹಾಗೆಂದು ಅಲ್ಲಿ ಇರುವವರಿಗೆ ಬುದ್ಧಿ ಇಲ್ಲ ಎಂದರ್ಥವಲ್ಲ. ನಮ್ಮ ಸರ್ಕಾರ ಯಾವುದೇ ರಾಜಕೀಯ ತೀರ್ಮಾನ ಕೈಗೊಂಡಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದವರ ಜೊತೆ ಕೂಲಕಂಷವಾಗಿ ಚರ್ಚಿಸಿ ಪ್ರತಿಯೊಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಕುರಿತು ಕೂಡ ಹಲವಾರು ಬಾರಿ ಚರ್ಚಿಸಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಸ್ಪಷ್ಟಪಡಿಸಿದರು.

ಆರ್ಥಿಕ ಚಟುವಟಿಕೆ ಬಂದ್ ಮಾಡಿದರೆ ಸರ್ಕಾರಕ್ಕೆ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯಕ್ಕಾಗಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ. ಅನೇಕರು ಕೊರೋನಾ ಬಗ್ಗೆ ಮುನ್ನೆಚ್ಚರಿಕೆ ಮರೆತಿದ್ದಾರೆ. ಇಂತಹ ಸಮಯದಲ್ಲಿ ಜನರನ್ನು ಎಚ್ಚರಿಸುವುದು ನಮ್ಮ ಕರ್ತವ್ಯ ಎಂದರು.

ಯುನೈಟೆಡ್ ಕಿಂಗ್ ಡಮ್ ನಿಂದ ರಾಜ್ಯಕ್ಕೆ ಬಂದವರಲ್ಲಿ 10 ಜನರಿಗೆ ಕೊರೋನಾ ಪಾಟಿಸಿವ್ ಆಗಿದೆ ಎಂದು ತಿಳಿದುಬಂದಿದ್ದು. ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳುಹಿಸಲಾಗಿದೆ. ಜೆನೆಟಿಕ್ ಸ್ವೀಕೆನ್ಸ್ ಮಾಡಲು 2-3 ದಿನ ಬೇಕಾಗುತ್ತದೆ. ಒಂದು ವೇಳೆ ಅವರಲ್ಲಿ ಹೊಸ ಪ್ರಭೇದದ ವೈರಸ್ ಇರುವುದು ಖಚಿತವಾದರೆ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನು ಓದಿ: ಯತ್ನಾಳ್ ಯಾರು? ಅವರೇನು ರಾಷ್ಟ್ರೀಯ ನಾಯಕನಲ್ಲ, ಸಾಮಾನ್ಯ ಶಾಸಕನಷ್ಟೇ; ಸಚಿವ ಸದಾನಂದಗೌಡ ಕಿಡಿ

ದಸರಾ, ದೀಪಾವಳಿ, ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಆದರೆ ಹೊಸ ವರ್ಷದಂದು ಯುವಜನತೆ ಮೋಜು ಮಸ್ತಿ ಮಾಡಲೇಬೆಕೆನ್ನುವಂತೆ ಪ್ರತಿಪಕ್ಷಗಳವರು ವ್ಯಾಖ್ಯಾನ ಮಾಡಿದ್ದಾರೆ. ಜನರಿಗೆ ತೊಂದರೆಯಾದರೆ ಅವರೇ ಜವಾಬ್ದಾರಿ ಹೊರುತ್ತಾರೆಯೇ? ಎಂದು ಸಚಿವ ಸುಧಾಕರ್ ಪ್ರಶ್ನಿಸಿದರು.
ಸಂಸದ ಡಿ.ಕೆ.ಸುರೇಶ್ ನೀಡುವ ಸರ್ಟಿಫಿಕೇಟ್ ಅಗತ್ಯವಿಲ್ಲ. ಜಾಮೀನಿನ ಮೇಲೆ ಹೊರಗೆ ಇರುವವರೇ ಆರೋಪ ಮಾಡುತ್ತಾರೆ. ಮೋಜು, ಮಸ್ತಿ, ಭ್ರಷ್ಟಾಚಾರದ ಆರೋಪ ಹೊತ್ತುಕೊಂಡು ಜಾಮೀನಿನ ಮೇಲೆ ಹೊರಗೆ ಇರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಸುಧಾಕರ್ ಕಟುವಾಗಿ ಪ್ರತಿಕ್ರಿಯಿಸಿದರು.
Published by: HR Ramesh
First published: December 25, 2020, 4:35 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories