HOME » NEWS » State » THE PARTY SHOULD BE EMPOWERED IN PANCHAYATS SAYS DCM ASHWATH NARAYAN HK

ಗ್ರಾಮ ಗ್ರಾಮದಲ್ಲೂ ಕಮಲ ಅರಳಬೇಕು; ಪಂಚಾಯತ್​ಗಳಲ್ಲಿ ಪಕ್ಷ ಅಧಿಕಾರ ಹಿಡಿಯಬೇಕು: ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ

news18-kannada
Updated:November 27, 2020, 3:40 PM IST
ಗ್ರಾಮ ಗ್ರಾಮದಲ್ಲೂ ಕಮಲ ಅರಳಬೇಕು; ಪಂಚಾಯತ್​ಗಳಲ್ಲಿ ಪಕ್ಷ ಅಧಿಕಾರ ಹಿಡಿಯಬೇಕು: ಡಿಸಿಎಂ ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ
  • Share this:
ಉಡುಪಿ(ನವೆಂಬರ್​. 27): ರಾಷ್ಟ್ರೀಯ ಮಟ್ಟದಲ್ಲಿ ಸರಿಸಾಟಿ ಇಲ್ಲದ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯು, ಇನ್ನೂ ಪಂಚಾಯತ್ ಮಟ್ಟದಲ್ಲೂ ಬಲಿಷ್ಠವಾಗಿ ಬೆಳೆಯಬೇಕು ಹಾಗೂ ಗ್ರಾಮ ಗ್ರಾಮದಲ್ಲೂ ಕಮಲ ಅರಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕೋಟೇಶ್ವರದಲ್ಲಿ ಬಿಜೆಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಮ್ಮ ಪಕ್ಷವೂ ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಗೂ ವಿಸ್ತರಿಸಬೇಕು. ಎಲ್ಲೆಲ್ಲೂ ಪಕ್ಷದ ಚುನಾಯಿತ ಪ್ರತಿನಿಧಿಗಳು ಇರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಹತ್ತು ಹಲವು ಸುಧಾರಣೆಗಳ ಮೂಲಕ ಜನರಿಗೆ ಅನುಕೂಲವಾದ ಕಾರ್ಯಗಳನ್ನು ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮೂಲಸೌಕರ್ಯಗಳಿಗೆ ಅಪಾರ ಅನುದಾನ ಒದಗಿಸಲಾಗಿದೆ ಎಂದು ಅವರು ನುಡಿದರು.

ಗ್ರಾಮ ಸ್ವರಾಜ್ಯ ಎಂದರೆ ಗ್ರಾಮ ಮಟ್ಟದಲ್ಲಿಯೇ ಅತ್ಯುತ್ತಮ ಆಡಳಿತ ವ್ಯವಸ್ಥೆಯನ್ನು ಕಲಿಸುವುದು ಎಂದರ್ಥ. ಈಗಲೂ ರಾಜ್ಯದಲ್ಲಿ ಬಯಲು ಬಹಿರ್ದೆಸೆ ಜೀವಂತವಾಗಿದೆ. ಅದನ್ನು ನಿವಾರಿಸಬೇಕಾಗಿದೆ. ಪ್ರತಿಯೊಬ್ಬರ ಮನೆಗಳಲ್ಲೂ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಪ್ರಧಾನಿಯವರ ಸ್ವಚ್ಛ ಭಾರತ ಪರಿಕಲ್ಪನೆಯನ್ನು ಇನ್ನಷ್ಟು ಜನಪರವಾಗಿಸಬೇಕು. ಹಳ್ಳಿಮಟ್ಟದ ಯಾವುದೇ ಅಭಿವೃದ್ಧಿ ಕೆಲಸಕ್ಕೂ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದತ್ತ ನೋಡುವಂಥ ಪರಿಸ್ಥಿತಿ ಇರಬಾರದು. ಆ ನಿಟ್ಟಿನಲ್ಲಿ ಕೆಲಸ ಮಾಡಲು ಬಿಜೆಪಿ ಸಿದ್ಧವಾಗಿದೆ. ಈ ಉದ್ದೇಶಗಳ ಸಾಕಾರಕ್ಕಾಗಿ ಪಕ್ಷವು ಎಲ್ಲ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ : ಗ್ರಾಮಸ್ಥರಿಂದ ದಿಟ್ಟ ಹೆಜ್ಜೆ: ಹಳ್ಳಿಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧ; ನಿಯಮ ಉಲ್ಲಂಘಿಸಿದರೆ ಭಾರೀ ದಂಡ

ಪಂಚಾಯತ್ ಚುನಾವಣೆಯಲ್ಲಿ ಪ್ರತಿಯೊಬ್ಬರು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಪಕ್ಷದ ಹಿತಿದೃಷ್ಟಿಯಿಂದ ವರ್ತಿಸಬೇಕು. ಹೆಚ್ಚುಹೆಚ್ಚಾಗಿ ಜನಸಂಪರ್ಕವನ್ನು ಬೆಳೆಸಿಕೊಳ್ಳಬೇಕು. ಗ್ರಾಮ ಮಟ್ಟದ ಘಟಕಗಳ ಬಲವರ್ಧನೆ ಮಾಡಬೇಕು ಎಂದು ಡಿಸಿಎಂ ಸಲಹೆ ಮಾಡಿದರು.

ವಿ.ಎಸ್. ಆಚಾರ್ಯರಿಗೆ ಗೌರವ:

ಸಭೆಗೂ ಮುನ್ನ ಪಕ್ಷದ ಹಿರಿಯ ಮುಖಂಡರು, ಮಾಜಿ ಸಚಿವರು ಆಗಿದ್ದ ಡಾ.ವಿ.ಎಸ್.‌ ಆಚಾರ್ಯ ಅವರ ಪ್ರತಿಮೆಗೆ ಡಾ.ಅಶ್ವತ್ಥನಾರಾಯಣ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌,ಸಂಸದರಾದ ಶೋಭಾ ಕರಂದ್ಲಾಜೆ, ಮುನಿಸ್ವಾಮಿ, ಶಾಸಕ ರಘುಪತಿ ಭಟ್‌ ಮುಂತಾದವರಿದ್ದರು.ಬಳಿಕ ಇವರೆಲ್ಲರ ಜತೆ ಕೃಷ್ಣಮಠಕ್ಕೆ ತೆರಳಿದ ಉಪ ಮುಖ್ಯಮಂತ್ರಿ, ಗೋಮಾತೆ ಪೂಜೆ ಸಲ್ಲಿಸಿ ಶ್ರೀಕೃಷ್ಣ ದರ್ಶನ ಪಡೆದರು.
Published by: G Hareeshkumar
First published: November 27, 2020, 3:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading