ಹಾಸನ: ಚುನಾವಣೆ ಬಂತೆಂದರೆ ಸಾಕು, ರಾಜಕಾರಣಿಗಳಿಂದ ಭರಪೂರ ಭರವಸೆಗಳು ಹೇಗೆ ಬರುತ್ತವೆಯೋ, ತಮ್ಮ ಕೆಲಸ ಕಾರ್ಯಗಳು ಆಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮತದಾರರಿಂದ (Karnataka Assembly Election 2023) ಚುನಾವಣಾ ಬಹಿಷ್ಕಾರದ (Election Boycott) ಕರೆಗಳೂ ಅಲ್ಲಲ್ಲಿ ಮೊಳಗುತ್ತವೆ. ಇದೀಗ ಇಂತಹದೇ ಚುನಾವಣಾ ಬಹಿಷ್ಕಾರದ ಕರೆಯೊಂದು ಹಾಸನ (Hassan) ಜಿಲ್ಲೆಯ ಅಲ್ಲಲ್ಲಿ ಕಾಣಿಸಿಕೊಂಡಿದೆ.
ಹೌದು.. ಹಾಸನ ಜಿಲ್ಲೆಯ ವಿವಿಧ ಗ್ರಾಮಗಳ ಗ್ರಾಮಸ್ಥರು ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ದೋನಹಳ್ಳಿ ಹಾಗೂ ಬಾಚನಹಳ್ಳಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದು, ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಗಳಿಲ್ಲ ಸರಿಯಾದ ರಸ್ತೆ ಹಾಗೂ ಸೇತುವೆ ಸಂಪರ್ಕ ಇಲ್ಲದ ಕಾರಣ ರಾಜಕಾರಣಿಗಳಿಗೆ ಪಾಠ ಕಲಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: Karnataka Assembly Election: ಈ ಬಾರಿ ಮನೆಯಿಂದಲೇ ಮತದಾನಕ್ಕೆ ಅವಕಾಶ! ಜೊತೆಗೆ ಚುನಾವಣೆಯಲ್ಲಿ ಇರಲಿದೆ ಹತ್ತಾರು ವಿಶೇಷ
ಈ ಹಿಂದೆಯೇ ಗ್ರಾಮಸ್ಥರು ಹತ್ತಾರು ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಗ್ರಾಮಸ್ಥರು ಮೂಲಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದ್ದರು. ಸುಮಾರು 500ಕ್ಕೂ ಹೆಚ್ಚು ಜನರು ವಾಸಿಸುತ್ತಿರುವ ಈ ಗ್ರಾಮದಲ್ಲಿ ಮಳೆಗಾಲ ಬಂದರೆ ಜನರು ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆ, ಸೇತುವೆ ಇಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಪರದಾಟ ಮಾಡುತ್ತಿದ್ದಾರೆ. ಆದರೂ ಗ್ರಾಮಸ್ಥರ ಬೇಡಿಕೆಗೆ ಜನಪ್ರತಿನಿಧಿಗಳು ಅತ್ತ ತಿರುಗಿಯೂ ನೋಡದ ಕಾರಣ ಈ ಬಾರಿಯ ಚುನಾವಣೆಯಲ್ಲಿ ತಿರಗಿ ಬೀಳಲು ನಿರ್ಧರಿಸಿದ್ದಾರೆ.
ವೃದ್ಧರಿಗೆ, ವಿಕಲ ಚೇತನರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆದರೆ, ಮೇ 13ರಂದು ಚುನಾವಣಾ ಫಲಿತಾಂಶ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದ್ದು, 80 ವರ್ಷ ಮೇಲ್ಪಟ್ಟ ಮತದಾರರು ಮತ್ತು ವಿಕಲ ಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಕೇಂದ್ರ ಚುನಾವಣಾ ಆಯೋಗ ಕಲ್ಪಿಸಿಕೊಟ್ಟಿದೆ.
ಮನೆಯಿಂದಲೇ ಮತದಾನ ಮಾಡಿದರೂ ಕೂಡ ಅದು ಗೌಪ್ಯ ಮತ್ತು ಸುರಕ್ಷಿತವಾಗಿರಲಿದೆ ಎಂದು ಚುನಾವಣಾ ಆಯುಕ್ತರು ಹೇಳಿದ್ದು, ಮನೆಯಿಂದ ಮತದಾನ ಮಾಡುವ ಮತದಾರರ ಬಳಿ ಹೋದಾಗ ಪೊಲೀಸ್ ಸಿಬ್ಬಂದಿ ಮತ್ತು ಚುನಾವಣಾ ಸಿಬ್ಬಂದಿಯೂ ಹೋಗಲಿದ್ದಾರೆ. ಹೀಗಾಗಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಮನೆಯಿಂದ ಮಾಡುವ ಮತದಾನವನ್ನು ಸುರಕ್ಷಿತವಾಗಿ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗ ಆಗಿರುವುದಿಂದ ಸಾಕಷ್ಟು ಸಿಬ್ಬಂದಿಯನ್ನು ಕೂಡ ಇದಕ್ಕೆ ನಿಯೋಜಿಸಲಿದ್ದಾರೆ.
ಇದನ್ನೂ ಓದಿ: Karnataka Assembly Election Date 2023: ಮೇ 10ರಂದು ಮತದಾನ, ಫಲಿತಾಂಶ ಮೇ 13 ; ಕರ್ನಾಟಕ ಚುನಾವಣೆಗೆ ಡೇಟ್ ಫಿಕ್ಸ್
ಇನ್ನು ಈ ಬಾರಿ ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 58282 ಮತಗಟ್ಟೆಗಳ ಸ್ಥಾಪನೆ ಮಾಡಲಿದ್ದು, ನಗರ ಪ್ರದೇಶದಲ್ಲಿ ಒಟ್ಟು 24063 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 34219 ಮತಗಟ್ಟೆಗಳ ನಿರ್ಮಾಣ ಇರಲಿದೆ. ಅದರಲ್ಲೂ ವಿಶೇಷ ಅಂದ್ರೆ ರಾಜ್ಯದ 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳನ್ನು ಸ್ಥಾಪನೆ ಮಾಡಲು ಚುನಾವಣಾ ಆಯೋಗ ಮುಂದಾಗಿದೆ. ಇದರ ಜೊತೆಗೆ ಮಹಿಳಾ ಸಿಬ್ಬಂದಿಯೇ ನಿರ್ವಹಿಸುವ ಒಟ್ಟು 1320 ಮತಗಟ್ಟೆಗಳೂ ಈ ಬಾರಿಯ ಚುನಾವಣೆಯಲ್ಲಿ ಇರಲಿದೆ. ಜೊತೆಗೆ 240 ಮಾದರಿ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಿದೆ.
ಇನ್ನು ಚುನಾವಣಾ ಅಕ್ರಮ ತಡೆಗೆ 2400 ವೀಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲು ಚುನಾವಣಾ ಆಯೋಗ ಉದ್ದೇಶಿಸಿದ್ದು, ಚುನಾವಣೆಗಾಗಿ ಒಟ್ಟು 2016 ಫ್ಲೈಯಿಂಗ್ ಸ್ಕ್ಯಾಡ್‌ಗಳನ್ನು ನಿಯೋಜಿಸಲಿದೆ. ಜೊತೆಗೆ 19 ಜಿಲ್ಲೆಗಳಲ್ಲಿ 171 ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ ಅಕ್ರಮ ತಡೆಯಲು ಪ್ಲಾನ್ ಮಾಡಿದ್ದು, ಮುಖ್ಯವಾಗು ವಿಮಾನ ನಿಲ್ದಾಣ, ಹೆದ್ದಾರಿಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿ, ಬ್ಯಾಂಕ್ ವ್ಯವಹಾರಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ