News18 India World Cup 2019

ಲೋಕಸಭಾ ಚುನಾವಣೆ ಫಲಿತಾಂಶ ಅನಿರೀಕ್ಷಿತ: ಸಿಎಂ ಕುಮಾರಸ್ವಾಮಿ

 ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡು ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು- ಗೆಲುವುಗಳನ್ನು ಕಂಡಿದೆ- ಸಿಎಂ ಕುಮಾರಸ್ವಾಮಿ

Latha CG | news18
Updated:May 23, 2019, 6:08 PM IST
ಲೋಕಸಭಾ ಚುನಾವಣೆ ಫಲಿತಾಂಶ ಅನಿರೀಕ್ಷಿತ: ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
Latha CG | news18
Updated: May 23, 2019, 6:08 PM IST
ಬೆಂಗಳೂರು,(ಮೇ 23): ಲೋಕಸಭಾ ಚುನಾವಣೆ ಫಲಿತಾಂಶ ನೋಡಿ ಮೈತ್ರಿ ನಾಯಕರು ಆತಂಕಕ್ಕೊಳಗಾಗಿದ್ದಾರೆ. ರಾಜ್ಯದಲ್ಲಿ ಬಹುತೇಕ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದರಿಂದಾಗಿ ಮೈತ್ರಿ ಸರ್ಕಾರ ಬೀಳಬಹುದು ಎಂಬ ಭಯ ದೋಸ್ತಿ ನಾಯಕರಲ್ಲಿ ಶುರುವಾಗಿದೆ. ಒಂದು ಕಡೆ ಸಿಎಂ ಕುಮಾರಸ್ವಾಮಿ ಮಗ ನಿಖಿಲ್​ ಕುಮಾರಸ್ವಾಮಿ ಮಂಡ್ಯದಲ್ಲಿ ಭಾರೀ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಇನ್ನೊಂದೆಡೆ ತುಮಕೂರಿನಲ್ಲಿಯೂ ಸಹ ಮಾಜಿ ಪ್ರಧಾನಿ ದೇವೇಗೌಡರು ಹೀನಾಯ ಸೋಲು ಕಂಡಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಮೈತ್ರಿ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವೀಟ್​ ಮಾಡಿ, ಲೋಕಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ ಎಂದು ಹೇಳಿದ್ದಾರೆ.

"ಲೋಕಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ‌ನಾನು ಗೌರವಿಸುತ್ತೇನೆ. ಮತ್ತೊಮ್ಮೆ ಜನಾಶೀರ್ವಾದ ಪಡೆದ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡು ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು- ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರು ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ" ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

 








ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ತೀವ್ರ ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ದೇವೇಗೌಡರ ಮನೆಯಲ್ಲಿ ಸಭೆ ನಡೆದಿದೆ. ತುಮಕೂರು ಮತ್ತು ಮಂಡ್ಯ ಸೋಲಿನ ಬಗ್ಗೆ ಎಚ್ ಡಿಕೆ ಮತ್ತು ಎಚ್ ಡಿಡಿ ತೀವ್ರ ಅಸಮಾಧಾನಪಟ್ಟುಕೊಂಡಿದ್ದಾರೆ. ಈ ಕ್ಷೇತ್ರದ ಮತದಾರರನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ ಎಂದು ಅವರಿಗೆ ಮನವರಿಕೆ ಮಾಡಿಕೊಂಡಿದ್ಧಾರೆ. ಫಲಿತಾಂಶ ಮತ್ತು ಸರ್ಕಾರ ಮುಂದುವರೆಯುವ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆ ಬರುವ ತನಕ ಯಾರು ಪ್ರತಿಕ್ರಿಯೆ ನೀಡದಿರಲು ದೇವೇಗೌಡರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
First published:May 23, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...