ಭಾರತ ರತ್ನ ಗೌರವವನ್ನು ಸಾವರ್ಕರ್​ಗೆ ಆ‌ಮೇಲೆ ಕೊಡುವಿರಂತೆ, ಮೊದಲು ಸಿದ್ಧಗಂಗಾ ಶ್ರೀಗೆ ನೀಡಿ; ಸಿದ್ದರಾಮಯ್ಯ ಆಗ್ರಹ

ಮಹಾರಾಷ್ಟ್ರ ಚುನಾವಣಾ ಸಂದರ್ಭದಲ್ಲಿ ಹಿಂದೂತ್ವ ಪ್ರತಿಪಾದಕ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಈ ವಿಷಯವನ್ನು ಮುನ್ನೆಲೆಗೆ ತಂದಿದೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಮೊದಲು ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿದ್ದಾರೆ.

HR Ramesh | news18-kannada
Updated:October 18, 2019, 10:54 PM IST
ಭಾರತ ರತ್ನ ಗೌರವವನ್ನು ಸಾವರ್ಕರ್​ಗೆ ಆ‌ಮೇಲೆ ಕೊಡುವಿರಂತೆ, ಮೊದಲು ಸಿದ್ಧಗಂಗಾ ಶ್ರೀಗೆ ನೀಡಿ; ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ, ಶಿವಕುಮಾರ್ ಸ್ವಾಮೀಜಿ
  • Share this:
ಬೆಂಗಳೂರು: ಹಿಂದೂ ಮಹಾಸಭಾದ ನಾಯಕ ವಿನಾಯಕ ದಾಮೋದರ ಸಾವರ್ಕರ್ ಗೆ ಭಾರತ ರತ್ನ ನೀಡುವುದಾಗಿ  ಮಹಾರಾಷ್ಟ್ರ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾರತ ರತ್ನ ಪಡೆಯಲು ಸಾವರ್ಕರ್​​ಗಿಂತ ಅರ್ಹ ವ್ಯಕ್ತಿ ಮತ್ತೊಬ್ಬರಿಲ್ಲ ಎಂದು ಹೇಳಿದ್ದರು. ಆದರೆ,  ಸಾವರ್ಕರ್​ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಕಾಂಗ್ರೆಸ್​ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು,  "ಸಾವರ್ಕರ್ ಅವರಿಗೆ 'ಭಾರತ ರತ್ನ' ಆ‌ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ‌ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ," ಎಂದು ಆಗ್ರಹಿಸಿದ್ದಾರೆ.

ಸಾರ್ವರ್ಕರ್ ಅವರಿಗೆ 'ಭಾರತ ರತ್ನ' ಆ‌ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ‌ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ.@INCKarnataka
ಸಿದ್ಧಗಂಗಾ ಮಠದ ಶಿವಕುಮಾರ್ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಕಳೆದ ವರ್ಷ ಅವರು ಲಿಂಗೈಕ್ಯರಾದ ಬಳಿಕ ಮರಣೋತ್ತರವಾಗಿ ಭಾರತ ರತ್ನ ನೀಡುವಂತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೇ ವಿಚಾರವಾಗಿ ಕರ್ನಾಟಕದಲ್ಲಿ ದೊಡ್ಡ ಆಂದೋಲನವೇ ನಡೆದಿತ್ತು. ಶ್ರೀಗಳಿಗೆ ಕಳೆದ ಬಾರಿ ಈ ಗೌರವ ಸಿಗಲಿದೆ ಎಂದೇ ಎಣಿಸಲಾಗಿತ್ತು. ಆದರೆ, ಶ್ರೀಗಳಿಗೆ ಭಾರತ ರತ್ನವನ್ನು ಕೇಂದ್ರ ಸರ್ಕಾರ ನೀಡಲಿಲ್ಲ. ಇದೀಗ ಮಹಾರಾಷ್ಟ್ರ ಚುನಾವಣಾ ಸಂದರ್ಭದಲ್ಲಿ ಹಿಂದೂತ್ವ ಪ್ರತಿಪಾದಕ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಈ ವಿಷಯವನ್ನು ಮುನ್ನೆಲೆಗೆ ತಂದಿದೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಮೊದಲು ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ನಾಥೂರಾಮ್​ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ; ಸಿದ್ದರಾಮಯ್ಯ ಲೇವಡಿಇಂದು ಮಂಗಳೂರಿನಲ್ಲೂ ಸಿದ್ದರಾಮಯ್ಯ ಅವರು ಇದೇ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಗಾಂಧೀಜಿ ಹತ್ಯೆ ಮಾಡಲು ಯೋಜನೆ ರೂಪಿಸಿದ್ದೇ ಸಾವರ್ಕರ್. ನಾಥೂರಾಮ್​ ಗೋಡ್ಸೆ ಹಿಂದೆ ನಿಂತು ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದರು.  ಸೂಕ್ತ ಸಾಕ್ಷಿ ಇಲ್ಲದೇ ಆರೋಪಿಯಾಗಿ ಗುರುತಿಸಿರಲಿಲ್ಲ. ಅಂತಹ ವ್ಯಕ್ತಿಗೆ ಕೇಂದ್ರ ಸರ್ಕಾರ ಭಾರತ ರತ್ನ ಕೊಡಲು ಮುಂದಾಗಿದೆ. ಹಾಗೆಯೇ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ," ಎಂದು ಕಿಡಿಕಾರಿದ್ದರು.

First published:October 18, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading