ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೇಯ ಕೃತ್ಯಗಳಲ್ಲಿ ನಿರತವಾಗಿವೆ; ಹೆಚ್​.ಡಿ. ದೇವೇಗೌಡ ಕಿಡಿ

ಬಿಜೆಪಿಯವರು ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಹೇರಿದ್ದಾರೆ ಎಂದರೆ ಭವಿಷ್ಯದಲ್ಲಿ ರಾಜ್ಯಕ್ಕೆ ಏನೋ ಕಾದಿದೆ ಎಂದು ಅರ್ಥ. ನಾನು ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಆದರೆ, ಇದು ದೇಶಕ್ಕೆ ಬರ್ತಿರೋ ಗಂಡಾಂತರದ ಮುನ್ಸೂಚನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

MAshok Kumar | news18-kannada
Updated:October 10, 2019, 12:54 PM IST
ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೇಯ ಕೃತ್ಯಗಳಲ್ಲಿ ನಿರತವಾಗಿವೆ; ಹೆಚ್​.ಡಿ. ದೇವೇಗೌಡ ಕಿಡಿ
ಹೆಚ್.ಡಿ. ದೇವೇಗೌಡ
  • Share this:
ಬೆಂಗಳೂರು (ಅಕ್ಟೋಬರ್ 10); ನೆರೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಕೇವಲ 1200 ಕೋಟಿ ಬಿಡುಗಡೆ ಮಾಡಿದೆ. ಅಲ್ಲದೆ, ವಿಪಕ್ಷ ಶಾಸಕರ ಕ್ಷೇತ್ರಗಳ ಅನುದಾನ ರದ್ದು ಮಾಡಲಾಗಿದೆ ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹೇಯ ಕೃತ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

ಉತ್ತರ ಕರ್ನಾಟಕದ ನೇರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ನಿರ್ಲಕ್ಷ್ಯ ಮನೋಭಾವ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ದೇವೇಗೌಡ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಇಲ್ಲಿನ ಮೌರ್ಯ ಹೋಟೆಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾತನಾಡಿರುವ ಅವರು,

“ನೆರೆಯಿಂದಾಗಿ ರಾಜ್ಯದಲ್ಲಿ ಸುಮಾರು 36 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರವೇ ವರದಿ ನೀಡಿದೆ. ಆದರೆ, ಕೇಂದ್ರ ಸರ್ಕಾರ ಕೇವಲ 1200 ಕೋಟಿ ಮಾತ್ರ ಪರಿಹಾರ ನೀಡಿದೆ. ಇದು ನೆರೆ ಸಂತ್ರಸ್ತರಿಗೆ ಕೇಂದ್ರ ಎಸಗುತ್ತಿರುವ ಅನ್ಯಾಯ. ಅಲ್ಲದೆ, ರಾಜ್ಯ ಬಿಜೆಪಿ ಸರ್ಕಾರ ವಿಪಕ್ಷ ಶಾಸಕರ ಕ್ಷೇತ್ರದ ಅನುದಾನವನ್ನೂ ರದ್ದು ಮಾಡಿದೆ. ಇದರಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಂತಹ ನಡೆ ಹೇಯ ಕೃತ್ಯ” ಎಂದು ಅವರು ಕಿಡಿಕಾರಿದ್ದಾರೆ.

ಮಾಧ್ಯಮಗಳನ್ನು ವಿಧಾನಮಂಡಲ ಅಧಿವೇಶನದಿಂದ ದೂರ ಇಟ್ಟಿರುವ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧವೂ ಹರಿಹಾಯ್ದಿರುವ ಅವರು, “ಬಿಜೆಪಿಯವರು ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಹೇರಿದ್ದಾರೆ ಎಂದರೆ ಭವಿಷ್ಯದಲ್ಲಿ ರಾಜ್ಯಕ್ಕೆ ಏನೋ ಕಾದಿದೆ ಎಂದು ಅರ್ಥ. ನಾನು ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಆದರೆ, ಇದು ದೇಶಕ್ಕೆ ಬರ್ತಿರೋ ಗಂಡಾಂತರದ ಮುನ್ಸೂಚನೆ, ಇದರ ವಿರುದ್ಧ ತಮ್ಮ ಪಕ್ಷ ಏಕಾಂಗಿಯಾಗಿ ಹೋರಾಟ ರೂಪಿಸಲಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಸಂಘ ಪರಿವಾರದಿಂದ ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಆದೇಶ; ಬೆಚ್ಚಿದ ಸಿಎಂರಿಂದ ಟ್ವೀಟ್​ ಡಿಲೀಟ್​​

First published: October 10, 2019, 12:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading