• Home
  • »
  • News
  • »
  • state
  • »
  • Conversion Act: ರಾಜ್ಯದಲ್ಲಿ ಮತಾಂತರವಾಗಲು ಇಚ್ಚಿಸುವವರು ಈ ನಿಯಮಗಳನ್ನು ಪಾಲಿಸಲೇಬೇಕು

Conversion Act: ರಾಜ್ಯದಲ್ಲಿ ಮತಾಂತರವಾಗಲು ಇಚ್ಚಿಸುವವರು ಈ ನಿಯಮಗಳನ್ನು ಪಾಲಿಸಲೇಬೇಕು

ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ

ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸುವಂತೆ ಶಿಫಾರಸು ಮಾಡಲಿದೆ. ರಾಜ್ಯಪಾಲರ (Governor) ಅಂಕಿತದ ಬಳಿಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಗೆ ಬರುತ್ತದೆ.

  • Share this:

ಬೆಂಗಳೂರು: ಕೊನೆಗೂ ಮತಾಂತರ ಕಾಯ್ದೆ (Conversion Act ) ಜಾರಿಗೆ ತರಲು ರಾಜ್ಯ ಸರ್ಕಾರ (State Government) ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ (Belagavi) ಅಧಿವೇಶನದಲ್ಲಿ (Belagavi Session) ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧೀವೇಶದಲ್ಲಿ (Budget Session) ಕೂಡ ಸರ್ಕಾರ ಮಂಡನೆ ಮಾಡಲಿಲ್ಲ. ಆದರೆ ಇದೀಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ ಇಂದು ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಆಧ್ಯಾದೇಶ 2022 ಇದಕ್ಕೆ ಅನುಮೋದನೆ ನೀಡಿದೆ. ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸುವಂತೆ ಶಿಫಾರಸು ಮಾಡಲಿದೆ. ರಾಜ್ಯಪಾಲರ (Governor) ಅಂಕಿತದ ಬಳಿಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಗೆ ಬರುತ್ತದೆ.


ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು!


1. ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ಮಾಹಿತಿ ಕಳಿಸಬೇಕು


2. ಮತಾಂತರ ಮಾಡುವ ವ್ಯಕ್ತಿಯೂ  ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆೆ ಮಾಹಿತಿ ಕೊಡಬೇಕು.


3. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆೆ 30 ದಿನಗಳ ಒಳಗಾಗಿ ಆಕ್ಷೇಪಣೆ


4. ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.


5. ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.


ಇದನ್ನೂ ಓದಿ: Kolluru Mookambika Temple: ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಇದೇ ಮೊದಲ ಬಾರಿಗೆ 1.53 ಕೋಟಿ ದೇಣಿಗೆ ಸಂಗ್ರಹ


6. ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.


7. ಅಪರಾಧಕ್ಕೆೆ ನೆರವು ಹಾಗೂ ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಾಗಿ ಪರಿಗಣಿಸುವ ಅವಕಾಶವೂ ಇದೆ.


8. ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಮಾಹಿತಿ ಕೊಡಬೇಕು.


9. ಈ ಮಾಹಿತಿಯನ್ನು ಜಿಲ್ಲಾಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಬೇಕು


10. ವಿಚಾರಣೆಯ ಸಂದರ್ಭದಲ್ಲಿ ತಪ್ಪುು ಕಂಡುಬಂದಲ್ಲಿ ಜಿಲ್ಲಾಾ ದಂಡಾಧಿಕಾರಿ ಕ್ರಿಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.


SLC Result: ಮುಂದಿನ ವಾರ ಹೊರಬೀಳಲಿದೆ SSLC ಫಲಿತಾಂಶ; ರಿಸಲ್ಟ್​ ನೋಡಲು ಹೀಗೆ ಮಾಡಿ


ಮತಾಂತರ ತಡೆ ಸುಗ್ರೀವಾಜ್ಞೆ ಹೈಲೈಟ್ಸ್


ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು.


ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.


ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ.


ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಆಗಲಿದೆ.


ಈ ಬಗ್ಗೆ ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ.


ಸಾಮೂಹಿಕ ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓಗಳು ಪಾಲ್ಗೊಳ್ಳುವಂತಿಲ್ಲ.


ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ನಿಲ್ಲಿಸಲಾಗುವುದು


ಮತಾಂತರ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಮೂಲಕ ಅನುಮೋದನೆ ನೀಡಿ, ಅಧ್ಯಾದೇಶದ ಮೂಲಕ ರಾಜ್ಯಪಾಲರಿಗೆ ರವಾನಿಸಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗೋಷ್ಠಿ ನಡೆಸಿ ತಿಳಿಸಿದ್ದಾರೆ.

Published by:Pavana HS
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು