ಸರ್ಕಾರಿ ಗುತ್ತಿಗೆ ವೈದ್ಯರ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ವೇತನ ಹೆಚ್ಚಳದ ಜೊತೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎಂಬಿಬಿಎಸ್ ವೈದ್ಯರನ್ನು ಸಕ್ರಮಗೊಳಿಸುವ ಬೇಡಿಕೆಗೆ ಸರ್ಕಾರ ಆಸ್ಪದ ನೀಡಿಲ್ಲ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು; ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಸಂಬಳ ಹೆಚ್ಚು ಮಾಡಬೇಕು ಎಂಬ ಆಗ್ರಹಕ್ಕೆ ಮನ್ನಣೆ ನೀಡಿರುವ ಸರ್ಕಾರ ಇದೀಗ ಸರ್ಕಾರಿ ಗುತ್ತಿಗೆ ವೈದ್ಯರ ಸಂಬಳವನ್ನು ಹೆಚ್ಚಳ ಮಾಡಿದೆ.

  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗ್ರಾಮೀಣ ಭಾಗದಲ್ಲಿ, ಹೋಬಳಿ, ತಾಲೂಕು, ಜಿಲ್ಲಾ ಕೇಂದ್ರ ಹಾಗೂ ನಗರ ಪಾಲಿಕೆ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಎಂಬಿಬಿಎಸ್ ವೈದ್ಯರ ವೇತನವನ್ನು 15 ಸಾವಿರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ತಿಂಗಳಿಗೆ 45 ಸಾವಿರ ವೇತನ ಪಡೆಯುತ್ತಿದ್ದ ಸರ್ಕಾರಿ ಗುತ್ತಿಗೆ ವೈದ್ಯರು ಇನ್ನು ಮುಂದೆ 60 ಸಾವಿರ ಸಂಬಳ ಪಡೆಯಲಿದ್ದಾರೆ.

  ಸರ್ಕಾರ ಹೊರಡಿಸಿರುವ ಆದೇಶ ಪ್ರತಿ.


  ಇದನ್ನು ಓದಿ: ಸಂವಿಧಾನದ ಬಗ್ಗೆ ಬದ್ಧತೆ ಇಲ್ಲದ ಮೋದಿ ಪ್ರಧಾನಿಯಾಗಿ ಮುಂದುವರೆಯಲು ನಾಲಾಯಕ್; ಸಿದ್ದರಾಮಯ್ಯ ಕಿಡಿ

  ವೇತನ ಹೆಚ್ಚಳದ ಜೊತೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎಂಬಿಬಿಎಸ್ ವೈದ್ಯರನ್ನು ಸಕ್ರಮಗೊಳಿಸುವ ಬೇಡಿಕೆಗೆ ಸರ್ಕಾರ ಆಸ್ಪದ ನೀಡಿಲ್ಲ.
  First published: