ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಕ್ಕೆ ಸಾಕಷ್ಟು ಸಾಕ್ಷಿ ಇದೆ, ಯತ್ನಾಳ್ ಉಚ್ಛಾಟನೆ ಆಗಲೇಬೇಕು; ಸಿದ್ದರಾಮಯ್ಯ ಕಿಡಿ

ಶಾಸಕ ಯತ್ನಾಳ್ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ. ಇದು ಸದನಕ್ಕೆ ಮಾಡಿ ಅಗೌರವ. ಹೀಗಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿ ಕೂಡಲೇ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

news18-kannada
Updated:March 2, 2020, 2:10 PM IST
ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಕ್ಕೆ ಸಾಕಷ್ಟು ಸಾಕ್ಷಿ ಇದೆ, ಯತ್ನಾಳ್ ಉಚ್ಛಾಟನೆ ಆಗಲೇಬೇಕು; ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ
  • Share this:
ಬೆಂಗಳೂರು (ಮಾರ್ಚ್ 02); ಹೆಚ್.ಎಸ್. ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ತದನಂತರದ ಕಾಲದಲ್ಲೂ ಹತ್ತಾರು ಹೋರಾಟಗಳಲ್ಲಿ ಬಾಗಿಯಾಗಿ ಜೈಲುವಾಸ ಅನುಭವಿಸಿದ್ದಕ್ಕೆ ಸಾಕ್ಷಿಗಳಿವೆ. ಆದರೆ, ಪ್ರಮಾಣ ವಚನ ಸ್ವೀಕರಿಸಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಸದನದ ಕಲಾಪದ ನಂತರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ಮತ್ತು ಯತ್ನಾಳ್ ವಿರುದ್ಧ ಟೀಕಾಪ್ರಹಾರ ನಡೆಸಿರುವ ಸಿದ್ದರಾಮಯ್ಯ, “ಹೆಚ್.ಎಸ್. ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 14 ತಿಂಗಳು ಜೈಲುವಾಸ ಅನುಭವಿಸಿದ್ದಕ್ಕೆ ದಾಖಲೆ ಇದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಅವರು ಅಂದಿನ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು.

ರಾಜ್ಯದಲ್ಲಿ ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಅವರು ಆಡಳಿತರೂಢ ಸರ್ಕಾರದ ವಿರುದ್ಧ ಅನೇಕ ಗಮನಾರ್ಹ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿರುವ ಸಾಕಷ್ಟು ಉದಾಹರಣೆಗಳಿವೆ. ದಲಿತರು ಹಿಂದುಳಿದವರಿಗಾಗಿ ನಿರಂತರ ಹೋರಾಟ ನಡೆಸಿದ್ದಾರೆ. ಅಂತಹ ವ್ಯಕ್ತಿಯ ಬಗ್ಗೆ ಶಾಸಕ ಯತ್ನಾಳ್ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಆದರೆ, ಈ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ರೆ ಸ್ಪೀಕರ್ ಕಾನೂನು ಸಚಿವರನ್ನು ಕೇಳಬೇಕು ಎನ್ನುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ” ಎಂದು ಕಿಡಿಕಾರಿದರು.

ಇನ್ನೂ ಯತ್ನಾಳ್ ವಿರುದ್ಧವೂ ಹರಿಹಾಯ್ದಿರುವ ಅವರು, “ಶಾಸಕ ಯತ್ನಾಳ್ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ. ಇದು ಸದನಕ್ಕೆ ಮಾಡಿ ಅಗೌರವ. ಹೀಗಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿ ಕೂಡಲೇ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಶಾಸಕ ಯತ್ನಾಳ್ ಉಚ್ಛಾಟನೆಗೆ ಸಿದ್ದರಾಮಯ್ಯ ಆಗ್ರಹ; ಸದನದ ಬಾವಿಗಿಳಿದು ಕೈ ನಾಯಕರ ಪ್ರತಿಭಟನೆ
First published: March 2, 2020, 2:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading