HOME » NEWS » State » THERE IS NO HINDRANCE TO MINING OPERATING IN LEGAL FRAMEWORKS BS YEDDYURAPPA MAK

BS Yeddyurappa: ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣಿಗಾರಿಕೆಗೆ ಅಡ್ಡಿ ಇಲ್ಲ; ಬಿ.ಎಸ್.​ ಯಡಿಯೂರಪ್ಪ

ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆಯನ್ನು ಸಹಿಸಿಕೊಳ್ಳುವುದಿಲ್ಲ. ಹೀಗಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುವುದು. ಆದರೆ, ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣಿಗಾರಿಕೆಗೆ ಅಡ್ಡಿ ಉಂಟು ಮಾಡಬಾರದು ಎಂದು ಸಿಎಂ ಯಡಿಯೂರಪ್ಪ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

news18-kannada
Updated:February 2, 2021, 2:59 PM IST
BS Yeddyurappa: ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣಿಗಾರಿಕೆಗೆ ಅಡ್ಡಿ ಇಲ್ಲ; ಬಿ.ಎಸ್.​ ಯಡಿಯೂರಪ್ಪ
ಸಿಎಂ ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು (ಫೆಬ್ರವರಿ 02) ಕಳೆದ ಜನವರಿ 21ರಂದು ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಭಾರೀ ಜಿಲೆಟಿನ್ ಸ್ಫೋಟವಾದ ದುರ್ಘಟನೆ ಸಂಭವಿಸಿತ್ತು. ಕಲ್ಲು ಕ್ವಾರಿಯೊಂದರ ಬಳಿ ರಾತ್ರಿ 10:30ಕ್ಕೆ ಸಂಭವಿಸಿದೆ ಈ ಅವಘಡದಲ್ಲಿ 06ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಗೆ ಸ್ವತಃ ಪ್ರಧಾನಿ ಸೇರಿದಂತೆ ಅನೇಕ ರಾಷ್ಟ್ರೀಯ ರಾಜ್ಯ ನಾಯಕರು ಸಂತಾಪ ಸೂಚಿಸಿದ್ದರು. ಈ ವೇಳೆ ರಾಜ್ಯದಲ್ಲಿ ಈ ದುರ್ಘಟನೆಗೆ ಸರ್ಕಾರವೇ ಕಾರಣ ಬಿ.ಎಸ್. ಯಡಿಯೂರಪ್ಪ ದುರ್ಘಟನೆಯ ಹೊಣೆ ಹೊರಬೇಕು, ಅಲ್ಲದೆ, ರಾಜ್ಯದಲ್ಲಿರುವ ಎಲ್ಲಾ ಅಕ್ರಮ ಗಣಿಗಾರಿಕೆಗಳನ್ನು ಮುಚ್ಚಬೇಕು ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್​ ನಾಯಕರು ಆಗ್ರಹಿಸಿದ್ದರು. ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲೂ ಈ ಕೂಗು ಜೋರಾಗಿಯೇ ಕೇಳಿ ಬಂದಿದೆ. ವಿರೋಧ ಪಕ್ಷಗಳು ಮತ್ತೆ ಅಕ್ರಮ ಗಣಿಗಾರಿಕೆಯನ್ನು ಮುಚ್ಚುವಂತೆ ಒತ್ತಾಯಿಸಿದ್ದಾರೆ.

ರಾಜ್ಯಪಾಲರ ಭಾಷಣ ವಂದನಾ ನಿರ್ಣಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಶಾಸಕ ಅರಗ ಜ್ಞಾನೇಂದ್ರ ಅವರಿಂದಲೂ ಈ ವಿಷಯ ಪ್ರಸ್ತಾಪವಾಗಿತ್ತು. ಅಲ್ಲದೆ, ಜಲ್ಲಿಕಲ್ಲುಗಳು ಇಲ್ಲದೆ ಇದ್ದರೆ ಅಭಿವೃದ್ಧಿ ಕಾರ್ಯಗಳೂ ಸಹ ಕುಂಠಿತವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಈ ವೇಳೆ ಸದನದಲ್ಲಿ ವಿರೋಧ ಪಕ್ಷಗಳ ಪ್ರಶ್ನೆ ಸೇರಿದಂತೆ ಗಣಿಗಾರಿಕೆ ಕುರಿತು ಉತ್ತರ ನೀಡಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ​"ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆಯನ್ನು ಸಹಿಸಿಕೊಳ್ಳುವುದಿಲ್ಲ. ಹೀಗಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುವುದು. ಆದರೆ, ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣಿಗಾರಿಕೆಗೆ ಅಡ್ಡಿ ಉಂಟು ಮಾಡಬಾರದು, " ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Huge Blast; ಶಿವಮೊಗ್ಗ ಬ್ಲಾಸ್ಟ್​ ಕುರಿತು ಉನ್ನತ ಮಟ್ಟದ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ; ಯಡಿಯೂರಪ್ಪ ಭರವಸೆ

ಅಲ್ಲದೆ, ಜಲ್ಲಿಕಲ್ಲುಗಳು ಇಲ್ಲದೆ ಇದ್ದರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೂ ಸಹ ಕುಂಠಿತವಾಗುತ್ತದೆ, ಈ ಕುರಿತು ಭರವಸೆ ನೀಡಿರುವ ಯಡಿಯೂರಪ್ಪ, "ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಕಲ್ಲು ಕೊರತೆ ಉಂಟಾಗುತ್ತಿದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಕಲ್ಲು ಕೊರತೆ ಆಗದಂತೆ ನೋಡಿಕೊಳ್ಳಬೇಕು. ಅಕ್ರಮ ಇದ್ದರೆ ಮಾತ್ರ ಕ್ರಮ ಕೈಗೊಳ್ಳಬೇಕು" ಎಂದು ಸೂಚನೆ ನೀಡಿದ್ದಾರೆ.

ಈ ಹಿಂದೆ ಶಿವಮೊಗ್ಗದಲ್ಲಿ ಉಂಟಾದ ಭಾರೀ ಸ್ಪೋಟ ಮತ್ತು ಕಾರ್ಮಿಕರ ಸಾವಿನ ಬಗ್ಗೆ ಸಂತಾಪ ಸೂಚಿಸಿದ್ದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಈ ಘಟನೆ ಕುರಿತು ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿಯೂ ತಿಳಿಸಿದ್ದಾರೆ.
Published by: MAshok Kumar
First published: February 2, 2021, 2:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories