BS Yediyurappa: ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ, ಸಿಎಂ ಬದಲಾವಣೆ ಇಲ್ಲ; ಬಿ ಎಸ್ ಯಡಿಯೂರಪ್ಪ

ನಾನು ರಾಜೀನಾಮೆ ಕೊಟ್ಟ ನಂತರವೇ ಸಿಎಂ ಆಯ್ಕೆ ಆಗಿದೆ. ನನಗೆ ಪಕ್ಷ ಎಲ್ಲಾ ರೀತಿಯ ಗೌರವ ನೀಡಿದೆ. ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ. ಪಕ್ಷದ ಆ ಋಣ ತೀರಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವೆ ಎಂದು ಹೇಳಿದರು.

ಬಿ ಎಸ್ ಯಡಿಯೂರಪ್ಪ ಕುಟುಂಬ

ಬಿ ಎಸ್ ಯಡಿಯೂರಪ್ಪ ಕುಟುಂಬ

  • Share this:
ಇಂದು ಗುರುರಾಯರ 351ನೇ ಆರಾಧನ ಮಹೋತ್ಸವ (Aradhana Mahotsava) ಹಿನ್ನೆಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Former BC Yediyurappa)  ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿ ರಾಯರ ದರ್ಶನ ಪಡೆದರು. ಪುತ್ರರಾದ ಸಂಸದ ರಾಘವೇಂದ್ರ (BY Raghavendra) ದಂಪತಿ ಹಾಗೂ ವಿಜಯೇಂದ್ರ (BY Vijayendra) ದಂಪತಿ ಮಠಕ್ಕೆ ಆಗಮಿಸಿದ್ದರು. ಮೊದಲಿಗೆ ಕ್ಷೇತ್ರ ದೇವತೆ ಶ್ರೀ ಮಂಚಾಲಮ್ಮ ದೇವಿ ದರ್ಶನ ಪಡೆದರು. ಬುಧವಾರ ರಾತ್ರಿಯೇ ಕ್ಷೇತ್ರಕ್ಕೆ ಆಗಮಿಸಿದ್ದ ಯಡಿಯೂರಪ್ಪನವರು, ರಾಜ್ಯ ರಾಜಕೀಯ ಮತ್ತು ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಸಿಎಂ ಕನಸು ನನಸಾಗದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ.  ಆ.21 ರಿಂದ ಎಲ್ಲೆಡೆ ಪ್ರವಾಸ ಮಾಡುತ್ತೇನೆ. ರಾಯರ ಕ್ಷೇತ್ರದಲ್ಲಿ ಈ ಮಾತು ಹೇಳಿರೋದರಿಂದ ಗೆಲವು ಶತಸಿದ್ಧ. ಗೆಲ್ಲುವ ಅಭ್ಯರ್ಥಿ ಹುಡುಕಿ ಕೆಲಸ ಮಾಡಲು ಸೂಚನೆ ನೀಡಿದ್ದೇವೆ. ಪ್ರವಾಸದ ಮೂಲಕ ಪಕ್ಷ  ಸಂಘಟನೆ ಮಾಡುವೆ. ಸಿಎಂ ಸ್ಥಾನ ಬಿಟ್ಟಿದ್ದರೂ ಜನರ ಒಲವು ನನ್ನ ಮೇಲಿದೆ. ಕರ್ನಾಟಕದ ಜನರ ವಿಶ್ವಾಸ ಬಿಜೆಪಿ ಪರವಿದೆ. ಅಧಿಕಾರಕ್ಕೆ ತರೋದೇ ನಮ್ಮ ಗುರಿ. ಕಾರ್ಯಕರ್ತರು ಗೊಂದಲಕ್ಕೆ ಸಿಲುಕೋದು ಬೇಡ ಎಂದು ಸಲಹೆ ನೀಡಿದರು.

There is no injustice from my party said BS Yediyurappa mrq
ಬಿ ಎಸ್ ಯಡಿಯೂರಪ್ಪ ಕುಟುಂಬ


ಇದನ್ನೂ ಓದಿ:  Covid Guidelines: ಕೋವಿಡ್‌ ಕಂಟ್ರೋಲ್‌ಗೆ ಮುಂದಾದ ಆರೋಗ್ಯ ಇಲಾಖೆ, ಗೌರಿಗಣೇಶ ಹಬ್ಬದ ಹೊಸ್ತಿಲಲ್ಲೇ ಟಫ್ ರೂಲ್ಸ್ ಫಿಕ್ಸ್!

ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನಮ್ಮ ಪಕ್ಷಕ್ಕೆ ಶಕ್ತಿ. ಅಮಿತ್ ಶಾ ಜತೆ ರಾಜ್ಯ ರಾಜಕೀಯ ವಿದ್ಯಮಾನದ ಕುರಿತು ಚರ್ಚೆ ಆಗಿದೆ. ನಾವು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಕೇಂದ್ರ ನಾಯಕರಿಂದ ಯಾವುದೇ ಅಡ್ಡಿ ಆತಂಕವಿಲ್ಲ. ಸಾಮೂಹಿಕ ನೇತೃತ್ವದಲ್ಲೇ ವಿಧಾನಸಭಾ ಚುನಾವಣೆ ಎದುರಿಸ್ತೇವೆ ಎಂದರು.

There is no injustice from my party said BS Yediyurappa mrq
ಬಿ ಎಸ್ ಯಡಿಯೂರಪ್ಪ ಕುಟುಂಬ


ವಿಪಕ್ಷಗಳ ವಿರುದ್ಧ ಕಿಡಿ

ಸಿಎಂ ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪನವರು, ಚುನಾವಣೆ ಹತ್ತಿರದಲ್ಲೇ ಇರೋದರಿಂದ ಬದಲಾವಣೆ ಇಲ್ಲ. ಬೊಮ್ಮಾಯಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಊಹಾಪೋಹ ಬೇಡ. ಚುನಾವಣೆ ಹತ್ತಿರದಲ್ಲಿ ಇರೋದರಿಂದ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.

ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ

ನಾನು ರಾಜೀನಾಮೆ ಕೊಟ್ಟ ನಂತರವೇ ಸಿಎಂ ಆಯ್ಕೆ ಆಗಿದೆ. ನನಗೆ ಪಕ್ಷ ಎಲ್ಲಾ ರೀತಿಯ ಗೌರವ ನೀಡಿದೆ. ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ. ಪಕ್ಷದ ಆ ಋಣ ತೀರಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವೆ ಎಂದು ಹೇಳಿದರು.

There is no injustice from my party said BS Yediyurappa mrq
ಬಿ ಎಸ್ ಯಡಿಯೂರಪ್ಪ ಕುಟುಂಬ


ಬಿಹಾರದ ಸಿಎಂ ನಿತೀಶ್ ಕುಮಾರ್ ಅನೇಕ ಸಲ ಮೈತ್ರಿ ಮಾಡಿಕೊಂಡು ನಂತರ ಕೈ ಬಿಟ್ಟಿದ್ದಾರೆ. ಈ ರೀತಿಯ ವಿದ್ಯಮಾನಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ಕೆಟ್ಟ ಪರಿಣಾಮ ಆಗದು. ಮುಂದೆಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಸಹ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.ಕೇಂದ್ರ ಒಪ್ಪಿದ್ರೆ ವಿಜಯೇಂದ್ರ ಸ್ಪರ್ಧೆ

ಕೇಂದ್ರ ಒಪ್ಪಿದರೆ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆಗೆ ಅವಕಾಶ ಸಿಗಲಿದೆ. ಕಾಂಗ್ರೆಸ್ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾಡಿರುವ ಆರೋಪ ಶುದ್ಧ ಸುಳ್ಳು. ಕೆಲವೊಂದು ಸಮಸ್ಯೆಗಳಿದ್ದು ಪರಿಹರಿಸಿಕೊಂಡು ಮುಂದುವರಿಯಲಿದ್ದೇವೆ. ಕೇಂದ್ರ ನಾಯಕರ ತೀರ್ಮಾನದಿಂದಲೇ ಆಯಾ ಜಿಲ್ಲೆಯ ಸಚಿವರನ್ನು ಆಯಾ ಜಿಲ್ಲೆಗಳಿಗೆ ಸಚಿವರಾಗಿ ನೇಮಿಸಿಲ್ಲ.

There is no injustice from my party said BS Yediyurappa mrq
ಬಿ ಎಸ್ ಯಡಿಯೂರಪ್ಪ ಕುಟುಂಬ


ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲು ಬಿಜೆಪಿ ಅವಕಾಶ ನೀಡಲ್ಲ. ಇಡಿ, ಸಿಐಡಿ ಸೇರಿ ಯಾವುದೇ ತನಿಖಾ ಸಂಸ್ಥೆಯ ಬಗ್ಗೆ ಕಾಂಗ್ರೆಸ್ ನವರು ಭಯ ಬೀಳಬೇಕಿಲ್ಲ. ತಪ್ಪು ಮಾಡಿರದಿದ್ದರೆ ಕಾಂಗ್ರೆಸ್ ನವರು ಆತಂಕಪಡಬೇಕಿಲ್ಲ ಎಂದು ಕೈ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ಕೈ ಆರೋಪಕ್ಕೆ ತಿರುಗೇಟು

ಸಂಪುಟ ವಿಸ್ತರಣೆಯ ಮೂಲಕ ಸಿಎಂ ಎಲ್ಲ ಪ್ರದೇಶಕ್ಕೆ ಪ್ರಾಶಸ್ತ್ಯ ನೀಡಲಿದ್ದಾರೆ. ಮನೆ ಮನೆ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ಟೀಕೆ ಸಲ್ಲದು. ಆ.21 ರಿಂದ ರಾಜ್ಯಾದ್ಯಂತ ಪ್ರವಾಸದ ಬಗ್ಗೆ ಸಭೆ ನಡೆಸಿ ಸ್ಥಳ ಶೀಘ್ರ ನಿಗದಿ ಮಾಡಲಾಗುವುದು ತಿಳಿಸಿದರು.

ಇದನ್ನೂ ಓದಿ:  Mantralaya: ಗುರುರಾಯರ 351ನೇ ಆರಾಧನಾ ಮಹೋತ್ಸವ, ಮಂತ್ರಾಲಯದಲ್ಲಿ ಕಳೆಗಟ್ಟಿದ ಭಕ್ತರ ಸಂಭ್ರಮ

2009 ರ ಪ್ರವಾಹದ ಸಂದರ್ಭದಲ್ಲಿ ಯಡಿಯೂರಪ್ಪನವರು ಮಠಕ್ಕೆ ನೀಡಿದ‌ ಸೇವೆಯನ್ನು ಮಠದ ಪೂಜ್ಯರು ಸ್ಮರಿಸಿಕೊಂಡರು. ಪ್ರವಾಹದ ಸಂದರ್ಭದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಇಲ್ಲಿನ ಜನರನ್ನ ಸ್ಥಳಾಂತರಿಸಿದ್ದು ಹಾಗೂ ಕರ್ನಾಟಕದಿಂದ‌ ಮಂತ್ರಾಲಯಕ್ಕೆ ಸಂಪರ್ಕ ಬಹುಕೋಟಿ ಚೆಚ್ಚದ ಸೇತುವೆ ನಿರ್ಮಿಸಿದ್ದರು. ತಾವು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು ರಾಯರಿಗೆ ಮತ್ತು ನಮಗೆ ಸಂತಸವಾಗಿದೆ ಎಂದು  ಹೇಳಿದರು.
Published by:Mahmadrafik K
First published: