HOME » NEWS » State » THERE IS NO LEADERSHIP OR CM CHANGE IN KARNATAKA AND BS YEDIYURAPPA WILL CONTINUE AS OUR CM SAYS MINISTER V SOMANNA HK

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದೆಯೂ ಯಡಿಯೂರಪ್ಪ ಅವರೇ ಸಿಎಂ: ಸಚಿವ ವಿ ಸೋಮಣ್ಣ

ರಾಜ್ಯದಲ್ಲಿ ಸಚಿವ ಸಂಪುಟ ಪುನರ್​ ರಚನೆ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗುತ್ತಿರುವ ಸಂದರ್ಭದಲ್ಲಿ ಸಚಿವ ವಿ ಸೋಮಣ್ಣ ನವದೆಹಲಿಗೆ ಧಾವಿಸಿರುವುದು ಸಹಜವಾಗಿಯೇ ಕುತೂಹಲವನ್ನು ಹುಟ್ಟುಹಾಕಿದೆ

news18-kannada
Updated:September 23, 2020, 4:04 PM IST
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದೆಯೂ ಯಡಿಯೂರಪ್ಪ ಅವರೇ ಸಿಎಂ: ಸಚಿವ ವಿ ಸೋಮಣ್ಣ
ಸಚಿವ ವಿ. ಸೋಮಣ್ಣ
  • Share this:
ನವದೆಹಲಿ(ಸೆಪ್ಟೆಂಬರ್​. 23): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಜಾರಾಗಿ ಕೇಳಿ ಬರುತ್ತಿರುವಾಗ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ವಸತಿ ಸಚಿವ ವಿ. ಸೋಮಣ್ಣ, 'ನಾಯಕತ್ವ ಬದಲಾವಣೆ ಎಂಬುದಿಲ್ಲ, ಬಿ.ಎಸ್. ಯಡಿಯೂರಪ್ಪ ಅವರೇ ಉಳಿದ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಮುಖ್ಯಮಂತ್ರಿ ಪರ ಬ್ಯಾಟ್ ಬೀಸಿದ್ದಾರೆ. ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಇಲಾಖೆ ಕೆಲಸದ ನೆಪದೊಂದಿಗೆ ದೆಹಲಿಗೆ ಬಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವ ಸಚಿವ ಸೋಮಣ್ಣ, ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ 'ಯಡಿಯೂರಪ್ಪ ಅನುಭವಿ ರಾಜಕಾರಣಿ, ನಮ್ಮೆಲ್ಲರ ಪ್ರಶ್ನಾತೀತ ನಾಯಕರು. ಅವರ ನಾಯಕತ್ವ ಬದಲಾವಣೆ ಮಾಡಲಾಗುತ್ತದೆ ಎಂಬುದು ಮಾಧ್ಯಮಗಳು ಮಾಡಿರುವ ಸೃಷ್ಟಿ ಎಂದರು. ಬಿ ಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕರೇ ಹೈಕಮಾಂಡಿಗೆ ದೂರು ನೀಡುತ್ತಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ವಿ. ಸೋಮಣ್ಣ, ಮನೆ ಎಂದ ಮೇಲೆ ಭಿನ್ನಾಭಿಪ್ರಾಯಗಳು ಇರುವುದು ಸಹಜ.‌ ಅದೇ ರೀತಿ ರಾಜಕೀಯ ಪಕ್ಷದಲ್ಲೂ ಭಿನ್ನಾಭಿಪ್ರಾಯ ಇರುತ್ತವೆ. ಅವೆಲ್ಲವನ್ನೂ‌ ನಿಭಾಯಿಸುವ ಸಾಮರ್ಥ್ಯ ಯಡಿಯೂರಪ್ಪ ಮತ್ತು ನಮ್ಮ ಪಕ್ಷದ ಹೈಕಮಾಂಡಿಗೆ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಸಚಿವ ಸಂಪುಟ ಪುನರ್​ ರಚನೆ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗುತ್ತಿರುವ ಸಂದರ್ಭದಲ್ಲಿ ಸಚಿವ ವಿ ಸೋಮಣ್ಣ ನವದೆಹಲಿಗೆ ಧಾವಿಸಿರುವುದು ಸಹಜವಾಗಿಯೇ ಕುತೂಹಲವನ್ನು ಹುಟ್ಟುಹಾಕಿದೆ. ಈ ನಡುವೆ ಸೋಮಣ್ಣ ಅವರನ್ನು ಸಂಪುಟದಿಂದ ಕಿತ್ತು ಹಾಕಲಾಗುತ್ತದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಈ ಹಿನ್ನಲೆಯಲ್ಲಿ ತಮ್ಮ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಗ್ರಾಮೀಣ ಭಾಗದಲ್ಲಿ‌ ಮನೆಗಳ‌ ನಿರ್ಮಾಣದ ಬಗ್ಗೆ ಚರ್ಚಿಸಲು ಬಂದಿದ್ದೇನೆ ಹೊರತು ರಾಜಕೀಯ ಕಾರಣಗಳಿಗಾಗಿ ದೆಹಲಿಗೆ ಬಂದಿಲ್ಲ ಎಂದರು.

ರಾಜ್ಯದಿಂದ ಕೇಂದ್ರ ಸಚಿವರಾಗಿರುವ ಡಿ.ವಿ.‌ ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ಸಂಘಟನಾ ಕಾರ್ಯದರ್ಶಿಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ಯಡಿಯೂರಪ್ಪ ಲಿಂಗಾಯತ ಸಮುದಾಯದ ಏಕಮೇವ ನಾಯಕ : ನಿಡುಮಾಮಿಡಿಶ್ರೀ

ಇತ್ತ ಕಲಬುರ್ಗಿಯಲ್ಲಿ ಮಾತನಾಡಿದ ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಲಿಂಗಾಯತ ಸಮುದಾಯದ ಏಕಮೇವ ನಾಯಕರಾಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಇಳಿಸುವುದು ಅಸಾಧ್ಯ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಒಕ್ಕಲಿಗರು ಏಕಮೇವ ನಾಯಕ. ಹಾಗೆಯೇ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕುರುಬ ಸಮಾಜದ ಏಕಮೇವ ನಾಯಕ. ಅದರಂತೆಯೇ ಬಿಜೆಪಿಯಲ್ಲಿ ಯಡಿಯೂರಪ್ಪ ಲಿಂಗಾಯತ ಸಮುದಾಯದ ಏಕಮೇವ ನಾಯಕರಾಗಿದ್ದಾರೆ ಎಂದರು.

ಇದನ್ನೂ ಓದಿ : Karnataka Band - ಸೆ. 28ರಂದು ಕರ್ನಾಟಕ ಬಂದ್; ಸೆ. 25, ಪ್ರತಿಭಟನೆಗೆ ಸೀಮಿತ: ರೈತ ಸಂಘಟನೆಗಳ ನಿರ್ಧಾರಬಿ ಎಸ್ ಯಡಿಯೂರಪ್ಪ ಅವರನ್ನು ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವುದಕ್ಕೆ ಪಿತೂರಿಗಳು ನಡೆದಿರುವುದು ಸರಿಯಾದ ಬೆಳವಣಿಗೆಗಳಲ್ಲ ಎಂದು ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವುದಕ್ಕೆ ಯತ್ನಿಸುತ್ತಿರುವುದು ಸರಿಯಲ್ಲ.
Youtube Video

ನಾಯಕತ್ವ ಬದಲಾವಣೆ ಮಾತುಗಳು ಬಿಜೆಪಿಯಲ್ಲಿ ಆಗಾಗ ಕೇಳಿಬರುತ್ತಲೇ ಇದೆ. ಆದರೆ ಇದು ಸರಿಯಾದ ಬೆಳವಣಿಗೆಯಲ್ಲ. ಯಡಿಯೂರಪ್ಪನವರು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂದು ತಿಳಿಸಿದರು.
Published by: G Hareeshkumar
First published: September 23, 2020, 3:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories