ಸಚಿವ ಸಂಪುಟ ವಿಸ್ತರಣೆ; ಬೆಂಗಳೂರು ನಗರಕ್ಕೆ ಸಿಂಹಪಾಲು; ಬರೋಬ್ಬರಿ 17 ಜಿಲ್ಲೆಗಳಿಗಿಲ್ಲ ಮಂತ್ರಿ ಭಾಗ್ಯ

ಇನ್ನು ದಕ್ಷಿಣ ಕನ್ನಡದಲ್ಲಿನ 8 ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಗೆದ್ದಿದೆ. ಉಡುಪಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಆದರೂ, ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಿಲ್ಲ.

Ganesh Nachikethu | news18
Updated:August 21, 2019, 8:14 AM IST
ಸಚಿವ ಸಂಪುಟ ವಿಸ್ತರಣೆ; ಬೆಂಗಳೂರು ನಗರಕ್ಕೆ ಸಿಂಹಪಾಲು; ಬರೋಬ್ಬರಿ 17 ಜಿಲ್ಲೆಗಳಿಗಿಲ್ಲ ಮಂತ್ರಿ ಭಾಗ್ಯ
ಸಿಎಂ ಯಡಿಯೂರಪ್ಪ
  • News18
  • Last Updated: August 21, 2019, 8:14 AM IST
  • Share this:
ಬೆಂಗಳೂರು(ಆಗಸ್ಟ್​​.21): ಬಿ.ಎಸ್​​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೂರು ವಾರಗಳ ಬಳಿಕ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಿದೆ. ಬಿಜೆಪಿ ಹೈಕಮಾಂಡ್​​ ಸೂಚನೆ ಮೇರೆಗೆ ಮೊದಲಿಗೆ ಕೇವಲ ಪಕ್ಷೇತರ ಶಾಸಕ ಎಚ್​​. ನಾಗೇಶ್​​ ಸೇರಿದಂತೆ 17 ಶಾಸಕರಿಗೆ ಮಾತ್ರ ಮಂತ್ರಿ ಭಾಗ್ಯ ಸಿಕ್ಕಿದೆ. ಇತ್ತ ಬಿಜೆಪಿಯ ಘಟಾನುಘಟಿ ನಾಯಕರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಸ್ಪೋಟವಾಗಿದೆ. ಇತ್ತ ತಮ್ಮ ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗಾಗಿ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗಿಲ್ಲ. ಸದ್ಯದಲ್ಲೇ ಇವರ ಅನರ್ಹತೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಲಿದೆ. ನಂತರ ಬೇಕಾದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣದ ಅನರ್ಹ ಶಾಸಕರಿಗೆ ಅಥವಾ ಪಕ್ಷದವರಿಗೆ ಮಂತ್ರಿ ಸ್ಥಾನ ನೀಡಬಹುದು ಎಂಬುದು ಸಿಎಂ ಬಿ.ಎಸ್​​ ಯಡಿಯೂರಪ್ಪ ಲೆಕ್ಕಚಾರ.

ಒಂದೆಡೆ ಸಂಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಯಾಕಾಗಿಲ್ಲ? ಎಂಬ ಚರ್ಚೆ ನಡೆಯುತ್ತಿದ್ದರೆ, ಇನ್ನೊಂದೆಡೆ ಪ್ರಸ್ತುತ ಸಂಪುಟದಲ್ಲಿ ರಾಜ್ಯದ 30 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದು ಚರ್ಚಾ ಕೇಂದ್ರವಾಗಿದೆ. ಬೆಂಗಳೂರು ನಗರಕ್ಕೆ ನಾಲ್ವರಿಗೆ ಸಚಿವ ಸ್ಥಾನ ಲಭಿಸಿದೆ. ಶಿವಮೊಗ್ಗ ಜಿಲ್ಲೆಗೆ ಸಿಎಂ ಸೇರಿದಂತೆ ಇಬ್ಬರಿಗೆ ಸ್ಥಾನ; ಬೆಳಗಾವಿಗೆ ಕೇವಲ ಎರಡು ಸಚಿವ ಸ್ಥಾನ; ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ಕೋಲಾರ, ತುಮಕೂರು, ಚಿಕ್ಕಮಗಳೂರು ಹಾಗೂ ಉಡುಪಿಗೆ ತಲಾ ಒಂದು ಮಂತ್ರಿ ಸ್ಥಾನ ಲಭಿಸಿದೆ.

ಹಾಗೆಯೇ ಬಿಜೆಪಿ ಪ್ರಾಬಲ್ಯ ಹೊಂದಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಯಾದಗಿರಿ, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಇದರ ಹಿಂದಿನ ಉದ್ದೇಶವೇನು? ಎಂಬ ಸಹಜ ಪ್ರಶ್ನೆ ಹುಟ್ಟಿಕೊಂಡಿದೆ.

ನಿನ್ನೆಯೇ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿತ್ತು. ಬಿಜೆಪಿ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗುವ ಮೂಲಕ ಬೇಸರ ತೋರ್ಪಡಿಸಿದ್ದರು. ಶಾಸಕರಾದ ರಾಜುಗೌಡ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಉಮೇಶ್ ಕತ್ತಿಯಂತಹ ಘಟಾನುಘಟಿಗಳಿಗೆ ಸಚಿವ ಸ್ಥಾನ ಸಿಗದಿರುವುದು ಸರ್ಕಾರಕ್ಕೆ ಕುತ್ತಾಗಿ ಪರಿಣಮಿಸಿದೆ. ಸದ್ಯ ಸಚಿವ ಸ್ಥಾನದಿಂದ ವಂಚಿತರಾದವರು ಬಹಿರಂಗವಾಗಿ ಅಸಮಾಧಾನ ಹೊರಹಾಕದಿದ್ದರೂ, ತಮ್ಮ ಬೆಂಬಲಿಗರ ಮೂಲಕ ರಾಜ್ಯ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅಚ್ಚರಿಯ ವಿಚಾರವೆಂದರೆ ಸಂಪುಟದಲ್ಲಿ ಯಡಿಯೂರಪ್ಪ ಅವರದ್ದೇ ಬಲ ಕುಂದಿದಂತಿದೆ. ಮುಖ್ಯಮಂತ್ರಿಗಳ ಅನೇಕ ಆಪ್ತರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ.

ಸಚಿವ ಸಂಪುಟ ವಿಸ್ತರಣೆ: ಯಡಿಯೂರಪ್ಪಗೆ ಹೈಕಮಾಂಡ್​ ಶಾಕ್; ಸಿಎಂ ಆಪ್ತರಿಗಿಲ್ಲ ಸಚಿವ ಸ್ಥಾನ​​

ಸಿಎಂ ಬಿ.ಎಸ್​ ಯಡಿಯೂರಪ್ಪನವರ ಆಪ್ತರಾದ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಿವನಗೌಡ ನಾಯಕ್, ಬಸನಗೌಡ ಯತ್ನಾಳ್, ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಸುಳ್ಯ ಶಾಸಕ ಎಸ್. ಅಂಗಾರ, ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರಿಗೆ ಮಂತ್ರಿ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಬಿಜೆಪಿ ಹೈಕಮಾಂಡ್​​ ವಿರುದ್ಧ ಗರಂ ಆಗಿರುವ ಮೇಲಿನ ಘಟಾನುಘಟಿ ನಾಯಕರು, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡದಲ್ಲಿನ 8 ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಗೆದ್ದಿದೆ. ಉಡುಪಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಆದರೂ, ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಿಲ್ಲ. ಅಂತೆಯೇ ದಕ್ಷಿಣ ಕನ್ನಡಕ್ಕೂ ಯಾವುದೇ ಮಂತ್ರಿ ಸ್ಥಾನ ಸಿಕ್ಕಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರಕ್ಕೆ ಇದೇ ವಿಚಾರ ಕುತ್ತಾಗಿ ಪರಿಣಮಿಸಬಹುದು.ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ

-------------
First published: August 21, 2019, 8:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading