• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ರಾಜ್ಯದ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಮಾಡುವ ಪ್ರಸ್ತಾಪ ಇಲ್ಲ: ಕೇಂದ್ರ ಸ್ಪಷ್ಟನೆ

ರಾಜ್ಯದ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಮಾಡುವ ಪ್ರಸ್ತಾಪ ಇಲ್ಲ: ಕೇಂದ್ರ ಸ್ಪಷ್ಟನೆ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು, ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ' ಎಂದು ಹೇಳಿರುವುದರಿಂದ ಕರ್ನಾಟಕದ ಬಗ್ಗೆ ವಿವಾದ ಸೃಷ್ಟಿಸುತ್ತಿದ್ದ ಮಹಾರಾಷ್ಟ್ರದ ನಡೆಗೆ ತೀವ್ರ ಮುಖಭಂಗ ಆದಂತಾಗಿದೆ.

ಮುಂದೆ ಓದಿ ...
  • Share this:

ನವದೆಹಲಿ (ಮಾ. 16): ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ ಎಂದು ಮಂಗಳವಾರ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಇರುವ ಗಡಿ ವಿಷಯದಲ್ಲಿ, ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ‌ ಶಿವಸೇನೆ‌ ಪಕ್ಷ ಪದೇ ಪದೇ ವಿವಾದ ಸೃಷ್ಟಿಸಿತ್ತು. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ 'ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು. ಇದಕ್ಕಾಗಿ‌ ಹೋರಾಟ ಮಾಡಬೇಕಾಗಿದೆ' ಎಂದಿದ್ದರು. ಮಂಗಳವಾರ ಲೋಕಸಭೆಯ ಕಲಾಪದ ವೇಳೆ ಇಂಥದೊಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು "ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.


ಗಡಿ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಹಲವಾರು ವ್ಯಕ್ತಿಗಳು ಮನವಿ ಮಾಡಿದ್ದಾರೆ. ವಿವಿಧ ಸಂಸ್ಥೆಗಳು ಬೇಡಿಕೆ ಇಟ್ಟಿವೆ. ಆದರೆ ಅಂತಹ ಯಾವುದೇ ಪ್ರಸ್ತಾಪವು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ‌ಜೊತೆಗೆ 2011ರ ಜನಗಣತಿ ಪ್ರಕಾರ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮರಾಠಿ ಮಾತನಾಡುವ ಜನಸಂಖ್ಯೆ 55,98,325 ಎಂದು ತಿಳಿಸಿದ್ದಾರೆ. ಆ ಜನ ದುಧಾನಿ, ಇಚಲಕರಂಜಿ, ಕಗಲ್, ಕಮಲ್‌ನಗರ, ಮೈನ್‌ದಾರ್ಗಿ, ನಿಪಾನಿ, ಸದಲ್ಗಿ ಮತ್ತು ಸಂಕೇಶ್ವರದಲ್ಲಿ ಇರುವುದು 2011ರ ಜನಗಣತಿಯಲ್ಲಿ ದೃಢಪಟ್ಟಿದೆ ಎಂದು ಹೇಳಿದ್ದಾರೆ.


ಇದನ್ನು ಓದಿ: ಬೆಳಗಾವಿ ಲೋಕಸಭಾ, ಎರಡು ವಿಧಾನಸಭೆ ಸೇರಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ


ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು, ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ' ಎಂದು ಹೇಳಿರುವುದರಿಂದ ಕರ್ನಾಟಕದ ಬಗ್ಗೆ ವಿವಾದ ಸೃಷ್ಟಿಸುತ್ತಿದ್ದ ಮಹಾರಾಷ್ಟ್ರದ ನಡೆಗೆ ತೀವ್ರ ಮುಖಭಂಗ ಆದಂತಾಗಿದೆ. ಮುಖ್ಯವಾಗಿ ಇತ್ತೀಚೆಗೆ ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಹೇಳಿದ್ದ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರಿಗೆ ತೀವ್ರ ಹಿನ್ನಡೆ ಆದಂತಾಗಿದೆ.


ಮರಾಠಿ ಭಾಷೆ ಮತ್ತು ಬೆಳಗಾವಿ ವಿಷಯದಲ್ಲಿ ಸದಾ ಒಂದಿಲ್ಲೊಂದು ವಿವಾದ ಸೃಷ್ಟಿಸುವ ಮಹಾರಾಷ್ಟ್ರದ ಶಿವಸೇನೆಯ ಸಂಸದ ಅರವಿಂದ ಸಾವಂತ್ ಲೋಕಸಭೆಯಲ್ಲಿ ನಿನ್ನೆ (ಮಾರ್ಚ್ 15) ಕೂಡ ವಿಷಯ ಪ್ರಸ್ತಾಪಿಸಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅರವಿಂದ್ ಸಾವಂತ್ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಮಾತನಾಡಿದ್ದರು. ಕಳೆದ ಶನಿವಾರ ಶಿವಸೇನೆ‌‌‌ ವಕ್ತಾರ ಸಂಜಯ್ ರಾವತ್, ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮರಾಠಿ ಕಚೇರಿ ತೆರವುಗೊಳಿಸಿರುವುದರಿಂದ ಅಲ್ಲಿನ ಮರಾಠಿಗರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆದುದರಿಂದ ಅವರಿಗೆ ಧೈರ್ಯ ತುಂಬಲು ಬೆಳಗಾವಿಗೆ ಸರ್ವಪಕ್ಷ ನಿಯೋಗ ಕಳಿಸಿ ಎಂದು ಆಗ್ರಹಿಸಿದ್ದರು. ಇದೀಗ ಅವರಿಗೂ ಮುಖಭಂಗವಾದಂತಾಗಿದೆ.

Published by:HR Ramesh
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು