ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆದರೆ ತಪ್ಪೇನು: ಬಿ. ಆರ್. ಪಾಟೀಲ ಪ್ರಶ್ನೆ


Updated:August 28, 2018, 5:23 PM IST
ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆದರೆ ತಪ್ಪೇನು: ಬಿ. ಆರ್. ಪಾಟೀಲ ಪ್ರಶ್ನೆ

Updated: August 28, 2018, 5:23 PM IST
ಶಿವರಾಮ ಅಸುಂಡಿ, ನ್ಯೂಸ್ 18 ಕನ್ನಡ

ಕಲಬುರ್ಗಿ(ಆ.28): ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಿದ ಸಿದ್ಧರಾಮಯ್ಯ ಮತ್ತೊಮ್ೆ ಮುಖ್ಯಮಂತ್ರಿಯಾದರೆ ತಪ್ಪೇನು ಎಂದು ಮಾಜಿ ಶಾಸಕ ಮತ್ತು ಸಿದ್ಧರಾಮಯ್ಯ ಆಪ್ತ ಬಿ.ಆರ್.ಪಾಟೀಲ ಅಭಿಪ್ರಾಯಪಟ್ಟಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ಸಿಎಂ ಆಗುವುದಾಗಿ ಸಿದ್ಧರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ತಾವು ಮತ್ತೊಮ್ಮೆ ಸಿಎಂ ಆಗುವುದಾಗಿ ಸಿದ್ಧರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿಲ್ಲ. ಜನ ಬಯಸಿದರೆ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ. ಹಾಗೆಂದು ಹಾಲಿ ಸಿಎಂ ಕುಮಾರಸ್ವಾಮಿಯವರನ್ನು ಕೇಳಗಿಳಿಸಿ ಅಧಿಕಾರಕ್ಕೆ ಬರುತ್ತಾರೆ ಎಂದರ್ಥವಲ್ಲ. ಲೋಕಾರೂಢಿಯಾಗಿ ಮಾತನಾಡಿದ ಸಿದ್ಧರಾಮಯ್ಯ ಹೇಳಿಕೆಯನ್ನು ತಪ್ಪಾಗಿ ಗ್ರಹಿಕೆ ಮಾಡಲಾಗುತ್ತಿದೆ ಎಂದರು.

ಸಿದ್ಧರಾಮಯ್ಯ ತಮ್ಮ ಅವಧಿಯಲ್ಲಿ ಹಲವಾರು ಜನಪರ ಕೆಲಸಗಳನ್ನು ಮಾಡಿದ್ದಾರೆ. ಅವೇ ಕೆಲಸಗಳು ಅವರನ್ನು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಿಎಂ ಆಗುವಂತೆ ಮಾಡಿದರೆ ಅಚ್ಚರಿಯಿಲ್ಲ ಎಂದು ಬಿ.ಆರ್.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
First published:August 28, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...