ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ರಾಜ್ಯದ ಈ ಸಂಸದರಿಗೆ ಸಿಗಲಿದೆ ಮಂತ್ರಿ ಸ್ಥಾನ

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕೆಲವೊಂದು ರಾಜ್ಯಗಳಲ್ಲಿ ಪ್ರಚಂಡ ಗೆಲುವು ಸಾಧಿಸಿದೆ, ಅವುಗಳಲ್ಲಿ ಕರ್ನಾಟಕವೂ ಸಹ ಒಂದು . 28 ಸದಸ್ಯ ಬಲದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ಕರ್ನಾಟಕದಲ್ಲಿಯೇ ಬಿಜೆಪಿ ಹೆಚ್ಚಿನ ಪ್ರಗತಿ ಸಾಧಿಸಿರುವುದರಿಂದ ಸರ್ಕಾರದ ಸಂಪುಟ ರಚನೆ ವೇಳೆ ರಾಜ್ಯಕ್ಕೆ ಮೋದಿ ಅವರು ಹೆಚ್ಚಿನ ಪ್ರಾಮುಖ್ಯತೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

HR Ramesh | news18
Updated:May 25, 2019, 5:53 PM IST
ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ರಾಜ್ಯದ ಈ ಸಂಸದರಿಗೆ ಸಿಗಲಿದೆ ಮಂತ್ರಿ ಸ್ಥಾನ
ನರೇಂದ್ರ ಮೋದಿ ಸಂಪುಟದ ಸಂಭಾವ್ಯ ಸಚಿವರು
  • News18
  • Last Updated: May 25, 2019, 5:53 PM IST
  • Share this:
ಬೆಂಗಳೂರು: ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ ಎರಡನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿದೆ. ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೇ 30ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕೆಲವೊಂದು ರಾಜ್ಯಗಳಲ್ಲಿ ಪ್ರಚಂಡ ಗೆಲುವು ಸಾಧಿಸಿದೆ, ಅವುಗಳಲ್ಲಿ ಕರ್ನಾಟಕವೂ ಸಹ ಒಂದು . 28 ಸದಸ್ಯ ಬಲದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ಕರ್ನಾಟಕದಲ್ಲಿಯೇ ಬಿಜೆಪಿ ಹೆಚ್ಚಿನ ಪ್ರಗತಿ ಸಾಧಿಸಿರುವುದರಿಂದ ಸರ್ಕಾರದ ಸಂಪುಟ ರಚನೆ ವೇಳೆ ರಾಜ್ಯಕ್ಕೆ ಮೋದಿ ಅವರು ಹೆಚ್ಚಿನ ಪ್ರಾಮುಖ್ಯತೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. 25 ಜನರಲ್ಲಿ ಈ ಸಂಸದರು ಕೇಂದ್ರದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ.

ಅನಂತ್​ಕುಮಾರ್ ಹೆಗಡೆ: ಕಳೆದ ಮೋದಿ ಸರ್ಕಾರದಲ್ಲಿ ಕೌಶಲಾಭಿವೃದ್ಧಿ ರಾಜ್ಯ ಖಾತೆ ಸಚಿವರಾಗಿದ್ದ ಅನಂತ್​ಕುಮಾರ್ ಹೆಗಡೆ ಉತ್ತರ ಕನ್ನಡ ಕ್ಷೇತ್ರದಿಂದ ಬರೋಬ್ಬರಿ ನಾಲ್ಕು ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಹಿಂದುತ್ವದ ಫೈಯರ್ ಬ್ರಾಂಡ್​ ಎಂದೇ ಗುರುತಿಸಿಕೊಂಡಿರುವ ಹೆಗಡೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿದ್ದವರು. ಈಗಲೂ ಸಹ ಇವರು ಇದೇ ಕಾರಣದಿಂದ ಕೇಂದ್ರದಲ್ಲಿ ಮತ್ತೆ ಮಂತ್ರಿಯಾಗುವ ಸಾಧ್ಯತೆ ಇದೆ.

ಶ್ರೀನಿವಾಸ ಪ್ರಸಾದ್​: ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಶ್ರೀನಿವಾಸಪ್ರಸಾದ್ ಚಾಮರಾಜನಗರ (ಮೀಸಲು) ಕ್ಷೇತ್ರದಿಂದ ಕಾಂಗ್ರೆಸ್​ ಪ್ರಬಲ ಸ್ಪರ್ಧಿ ಆರ್.ಧ್ರುವನಾರಾಯಣ್ ವಿರುದ್ಧ ಕೆಲವೇ ಕೆಲವು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.​ ತಮ್ಮ ಅನುಭವದ ಮೂಲಕವೇ ರಾಜಕೀಯದ ಆಳ-ಅಗಲ ಅರಿತಿರುವ ಪ್ರಸಾಸ್​ ಈ ಮೊದಲು ಕಾಂಗ್ರೆಸ್​ನಿಂದ ಗುರುತಿಸಿಕೊಂಡಿದ್ದವರು. ಈ ಹಿಂದೆ ಅಟಲ್​ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕಾಂಗ್ರೆಸ್​ನೊಂದಿಗಿನ ಭಿನ್ನಮತದಿಂದ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಅವರು ಇದೀಗ ಹಲವು ವರ್ಷಗಳ ನಂತರ ಮತ್ತೆ ಸಂಸತ್​ ಪ್ರವೇಶಿಸಿದ್ದಾರೆ. ಅಷ್ಟೇ ಅಲ್ಲದೇ, ದಲಿತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಹೀಗಾಗಿ ದಲಿತ ಕೋಟಾದಡಿ ಕೇಂದ್ರದಲ್ಲಿ ಇವರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗುತ್ತಿದೆ.

ಶೋಭಾ ಕರಂದ್ಲಾಜೆ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಸಂಸತ್​ ಪ್ರವೇಶಿಸಿರುವ ಶೋಭಾ ಕರಂದ್ಲಾಜೆ ಈ ಬಾರಿ ಮಹಿಳಾ ಕೋಟಾದಡಿ ಮಂತ್ರಿಯಾಗುವ ಸಾಧ್ಯತೆ ಇದೆ. ಯಡಿಯೂರಪ್ಪ ಅವರಿಗೆ ತೀರಾ ಆತ್ಮೀಯರಾಗಿರುವ ಶೋಭಾ ಒಕ್ಕಲಿಗ ಸಮುದಾಯದಕ್ಕೆ ಸೇರಿದವರಾಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಿದರೆ  ಹಳೇ ಮೈಸೂರು ಭಾಗದ ಒಕ್ಕಲಿಗರನ್ನು ಸೆಳೆದುಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲೂ  ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕರೂ ಸಿಗಬಹುದು.

ಉಮೇಶ್​ ಜಾಧವ್: ಇತ್ತೀಚೆಗಷ್ಟೇ ಕಾಂಗ್ರೆಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದ ಉಮೇಶ್​ ಜಾಧವ್​ ಅವರು ಸೋಲಿಲ್ಲದ ಸರದಾರ ಎಂಬ ಖ್ಯಾತಿಯ ಘಟಾನುಘಟಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ, ಸಂಸತ್​ ಪ್ರವೇಶಿಸಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಮೋದಿ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತುವಂತಹ ನಾಯಕ ಖರ್ಗೆಯನ್ನು ಸೋಲಿಸಿರುವ ಉಮೇಶ್ ಜಾಧವ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕರು ಸಿಗಬಹುದು. ಲಂಬಾಣಿ ಸಮುದಾಯಕ್ಕೆ ಸೇರಿರುವ ಜಾಧವ್ ಅವರಿಗೆ ಮಂತ್ರಿ ಸ್ಥಾನ ನೀಡಿದರೆ ಎಸ್​ಸಿ ಸಮುದಾಯವನ್ನು ಒಲಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಇವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಪಿ.ಸಿ.ಮೋಹನ್​: ಬೆಂಗಳೂರು ಸೆಂಟ್ರಲ್​ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿರುವ ಪಿ.ಸಿ.ಮೋಹನ್​ ಅವರಿಗೂ ಈ ಬಾರಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಹೈಕಮಾಂಡ್​ನ ಕೆಲ ನಾಯಕರೊಂದಿಗೆ ಮೋಹನ್ ಉತ್ತಮ ಬಾಂಧವ್ಯ ಹೊಂದಿದ್ದು, ಇವರ ಮೂಲಕ ಸಚಿವ ಸ್ಥಾನ ಪಡೆಯಬಹುದು ಎನ್ನಲಾಗುತ್ತಿದೆ.ಜಿ.ಎಸ್​.ಬಸವರಾಜ್: ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದವರು ಜಿ.ಎಸ್.ಬಸವರಾಜ್. ಬಿಜೆಪಿಯ ನಿಷ್ಠಾವಂತ ನಾಯಕರಾಗಿರುವ ಬಸವರಾಜ್, ಯಡಿಯೂರಪ್ಪ ಅವರ ಆಪ್ತರು ಕೂಡ ಹೌದು. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿರುವ ಬಸವರಾಜ್, ಇದುವರೆಗೂ ನಾಲ್ಕು ಬಾರಿ ಸಂಸದರಾಗಿದ್ದರೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಇದೀಗ ಮಾಜಿ ಪ್ರಧಾನಿಯನ್ನು ಸೋಲಿಸಿ, ಮತ್ತೆ ಸಂಸತ್​ ಪ್ರವೇಶಿಸುತ್ತಿರುವ ಬಸವರಾಜ್ ಅವರಿಗೆ ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಪ್ರತಾಪ್ ಸಿಂಹ: ಮೈಸೂರು ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ಪ್ರತಾಪ್​ ಸಿಂಹ ಅವರಿಗೆ ಈ ಬಾರಿಯ ಮೋದಿ ಸರ್ಕಾರದಲ್ಲಿ ಸಚಿವರಾಗುವ ಭಾಗ್ಯವಿದೆ. ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಮೋದಿ ಆಶಯಕ್ಕೆ ತಕ್ಕಂತೆ ಯುವ ಸಂಸದರಾಗಿರುವ ಸಿಂಹ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಅಲ್ಲದೇ, ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್​-ಜೆಡಿಎಸ್​ ಪ್ರಾಬಲ್ಯ ಕುಗ್ಗಿಸಿ, ಬಿಜೆಪಿ ಪ್ರಬಲಗೊಳಿಸುವ ನಿಟ್ಟಿನಲ್ಲೂ ಸಿಂಹ ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ.

First published:May 25, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading