ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದಲ್ಲಿ ಬೀದಿ ನಾಯಿಗಳ (Street Dogs) ಹಾವಳಿ ಮೀತಿ ಮೀರಿದ್ದು, ಅದರೊಡನೆ ಹುಚ್ಚು ನಾಯಿಗಳ ಆತಂಕ ಸಹ ಹೆಚ್ಚಳವಾಗಿದೆ. ಬಳ್ಳಾರಿಯ (Ballary) 30ನೇ ವಾರ್ಡ್ ವಟ್ಟಪ್ಪಗೇರಿಯಲ್ಲಿ ನಾಯಿಯೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ (Dog Attack) ಕಚ್ಚಿ ಗಾಯಗೊಳಿಸಿದೆ. ಮಹಿಳೆಯರು, ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನರು ವಿಮ್ಸ್ ಆಸ್ಪತ್ರೆಯಲ್ಲಿ (VIMS Hospital) ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಚ್ಚು ನಾಯಿ ದಾಳಿಯು ಈ ಏರಿಯಾದ ಸಾರ್ವಜನಿಕರ ನಿದ್ದೆಗೆಡಿಸಿದೆ. ವಟ್ಟಪ್ಪಗೇರಿಯ ಜನರು ನಾಯಿಯ ಹುಚ್ಚಾಟಕ್ಕೆ ಸೋಮವಾರ ರಾತ್ರಿಯಿಂದಲೇ ನಲುಗಿದ್ದಾರೆ. ಸೋಮವಾರ ರಾತ್ರಿಯಿಂದ ಬೆಳಗಿನವೆರೆಗೂ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದೆ.
ರಾತ್ರಿ ಮನೆಯ ಹೊರಗಡೆ ಮಲಗಿದ್ದವರ ಮೇಲೆಯೂ ಹುಚ್ಚು ನಾಯಿ ದಾಳಿ ನಡೆಸಿದೆ. ಬೆಳ್ಳಗೆ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರನ್ನು ಕೂಡಾ ಕಚ್ಚಿ ಗಾಯಗೊಳಿಸಿದೆ.
ನಾಯಿ ಕೊಲ್ಲಲು ಮುಂದಾದ ಜನತೆ
ಸುಮಾರು 30ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೀದಿನಾಯಿ ದಾಳಿಯಿಂದ ಆತಂಕಗೊಂಡ ಜನತೆ ಈ ಹುಚ್ಚು ನಾಯಿಯನ್ನು ಸಾಯಿಸಲು ಪ್ರಯತ್ನಿಸಿದ್ದೂ, ನಾಯಿ ತಪ್ಪಿಸಿಕೊಂಡಿದೆ.
ಸ್ಥಳಕ್ಕೆ ಕೌಲ್ ಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದಿನಾಯಿಯನ್ನು ಹಿಡಿಯಲು ಮುಂದಾಗಿರುವ ಪಾಲಿಕೆ ಸಿಬ್ಬಂದಿ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಿದ್ದಾರೆ. ಪಾಲಿಕೆ ಆಯುಕ್ತ ರುದ್ರೇಶ್ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವವರನ್ನು ವಿಚಾರಿಸಿದ್ದಾರೆ.
ನಗರದಲ್ಲಿ ಆತಂಕದ ವಾತಾವರಣ
ವಾರ್ಡ್ ನಂಬರ್ 30ರಲ್ಲಿ ಹುಚ್ಚು ನಾಯಿ ದಾಳಿ ಮಾಡಿದ್ದರಿಂದ ಜನರು ಭಯದ ವಾತಾವರಣದಲ್ಲಿದ್ದಾರೆ.ಯಾವ್ಯಾಗ ಬೀದಿ ನಾಯಿ ಅಟ್ಯಾಕ್ ಮಾಡಬಹುದು ಅನ್ನೋ ಭೀತಿ ಇದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ 30 ಜನರನ್ನ ಕಚ್ಚಿ ಗಾಯಗೊಳಿಸಿದ ನಾಯಿಯನ್ನ ಸೆರೆ ಹಿಡಿಯಲಾಗುವುದು,ಜೊತೆಗೆ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಾದವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ತಿಳಿಸಲಾಗಿದೆ ಅಂತಾ ಹೇಳಿದ್ದಾರೆ.
ಬೀದಿ ನಾಯಿಗಳ ಸಂಖ್ಯೆಯಲ್ಲಿ ಹೆಚ್ಚಳ
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ. ರಾತ್ರಿಯಾದ್ರೆ ಸಾಕು ಹೊರಗಡೆ ಜನರು ಓಡಾಡಲು ಭಯ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಮಹಾನಗರ ಪಾಲಿಕೆ ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಕೂಡ ಮಾಡುತ್ತಿಲ್ಲ. ಹೀಗಾಗಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿ ಜನರ ಮೇಲೆ ಅಟ್ಯಾಕ್ ಮಾಡುತ್ತಿದೆ.
ಮೈಲಾರ ಗೊರವಯ್ಯ ಕಾರ್ಣಿಕ
ರಾಜ್ಯದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು (Mailara Karnikotsva) ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: CM Ibrahim: 13 ಮಂದಿಗೆ ಮಂಚದ ಮೇಲೆ ಮಲಗಿಸಿ ಸರ್ಕಾರ ರಚಿಸಿದ್ದೀರಿ, ನಾಚಿಕೆಯಾಗಲ್ವಾ? - ಸಿಎಂ ಇಬ್ರಾಹಿಂ ಕೆಂಡ
ಅನ್ನದಾತರಿಗೆಲ್ಲಾ (Farmers) ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ (Political Parties) ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ (Mailar, Huvina hadagali) ಗ್ರಾಮದಲ್ಲಿ ಭಂಡಾರದ ಒಡೆಯ ದೈವವಾಣಿಯನ್ನು ಲಕ್ಷಾಂತರ ಜನರು ಆಲಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ