ಬೆಂಗಳೂರು: ಕರ್ನಾಟಕದ ನೂತನ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರಕ್ಕೆ ಶುಭಾಶಯ ಕೋರುತ್ತಿದ್ದಾರೆ. ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ (BJP) ತನ್ನದೇ ಶೈಲಿಯಲ್ಲಿ ಶುಭಕೋರಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಶ್ರೀ ಸಿದ್ದರಾಮಯ್ಯ ಮತ್ತು ಶ್ರೀ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಅದೇ ರೀತಿ, ಚುನಾವಣಾ ಪೂರ್ವದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ್ದ ಐದು 'ಗ್ಯಾರಂಟಿಗಳ' ಆಶ್ವಾಸನೆಯನ್ನು, ರಾಜಸ್ಥಾನ, ಛತ್ತಿಸ್‌ಗಡ, ಹಿಮಾಚಲದಲ್ಲಿ ಕೈಕೊಟ್ಟ ಹಾಗೆ ಕೊಡದೆ, ತಕ್ಷಣವೇ ಅನುಷ್ಠಾನಗೊಳಿಸುತ್ತೀರಿ ಎಂದು ನಾವು ನಂಬಿದ್ದೇವೆ ಎಂದು ಬಿಜೆಪಿ ಹೇಳಿದೆ.
ಅದ್ಧೂರಿಯಾಗಿ ನಡೆದ ಪ್ರಮಾಣ ವಚನ ಕಾರ್ಯಕ್ರಮ
ಕಂಠೀರವ ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: Rahul Gandhi: ನಮ್ಮ ಜೊತೆಯಲ್ಲಿದ್ದಿದ್ದು ಸತ್ಯ ಮತ್ತು ಬಡವರು ಮಾತ್ರ: ಕನ್ನಡಿಗರಿಗೆ 'ರಾಗಾ' ಧನ್ಯವಾದ
ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಶ್ರೀ @siddaramaiah ಮತ್ತು ಶ್ರೀ @DKShivakumar ಅವರಿಗೆ ಅಭಿನಂದನೆಗಳು.
ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ.
ಅದೇ ರೀತಿ, ಚುನಾವಣಾ ಪೂರ್ವದಲ್ಲಿ…
— BJP Karnataka (@BJP4Karnataka) May 20, 2023
ಉಭಯ ನಾಯಕರ ಜೊತೆಯಲ್ಲಿ ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಮತ್ತು ಬಿಝೆಡ್ ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸಿಎಂ ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ