ಬೆಂಗಳೂರು: ಹೈಕಮಾಂಡ್(Congress High Command) ಬುಲಾವ್ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ದೆಹಲಿಗೆ ಹೊರಟಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ದೆಹಲಿಗೆ ಹೋಗ್ತಿದ್ದೀನಿ. ದೆಹಲಿಗೆ ಬರುವಂತೆ ಕಾಂಗ್ರೆಸ್ ನಾಯಕರು (Congress Leaders) ಸೂಚನೆ ಕೊಟ್ಟಿದ್ದಾರೆ. ಈಗ ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ನಮ್ಮ ಮನೆ, ಸರ್ವ ಜನಾಂಗದ ಶಾಂತಿಯ ತೋಟ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ. ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ ಎಂದರು.
ಚುನಾವಣೆಯಲ್ಲಿ ನನ್ನ ಡ್ಯೂಟಿ ಮಾಡಿದ್ದೇನೆ. ನೀವು ಒಬ್ಬರೇ ಬನ್ನಿ ಅಂತ ಹೇಳಿದ್ದು, ಒಬ್ಬನೇ ಹೋಗುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು.
ಸೋಮವಾರ ತಮ್ಮ ಬೆಂಬಲಿಗರ ಜೊತೆಯಲ್ಲಿ ಸಿದ್ದರಾಮಯ್ಯನವರು ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು. ಹೀಗಾಗಿ ಇಂದು ದೆಹಲಿಗೆ ತೆರಳುವ ಮುನ್ನ ನಾನು ಒಬ್ಬನೇ ಹೋಗುತ್ತಿದ್ದೇನೆ ಎಂದು ಹೇಳಿ ಟಾಂಗ್ ನೀಡಿದರು.
ಶಾಂತಿನಗರ ಶಾಸಕ ಎನ್ಎ ಹ್ಯಾರಿಸ್ ಸಹ ಇಂದು ದೆಹಲಿಗೆ ತೆರಳುತ್ತಿದ್ದಾರೆ.
ಡಿಸಿಎಂ ಸ್ಥಾನಕ್ಕಾಗಿ ಪೈಪೋಟಿ
ತಮ್ಮನ್ನೂ ಉಪಮುಖ್ಯಮಂತ್ರಿ ಮಾಡಿ ಅನ್ನೋ ಕೂಗು ಎದ್ದಿದೆ. ಅನೇಕ ಡಿಸಿಎಂ ಆಕಾಂಕ್ಷಿಗಳು ನೇರವಾಗಿ ಕೇಳದೇ ತಮ್ಮದೇ ಸಮುದಾಯದವರನ್ನು ಮುಂದೆಬಿಟ್ಟು ಹೇಳಿಸ್ತಿದ್ದಾರೆ. ವಿವಿಧ ಸ್ವಾಮೀಜಿಗಳು (Swamiji) ತಮ್ಮ ಸಮುದಾಯದ ನಾಯಕನಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ