ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸುವ ಪುರಿ ಈ ರೀತಿ ಟ್ವೀಟ್ ಮಾಡಿದ್ದಾರೆ: "ನಮ್ಮ ಅಸ್ಥಿರ ನೆರೆಹೊರೆಯಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ ಅಲ್ಲಿರುವ ಸಿಖ್ಖರು ಮತ್ತು ಹಿಂದೂಗಳು ಕಷ್ಟಕರವಾದ ಸಮಯವನ್ನು ಅನುಭವಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ. #ಸಿಎಎ." ಎಂದು ಹ್ಯಾಶ್ಟ್ಯಾಗ್ ಬಳಸಿದ್ದಾರೆ.
ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಜೀವ ಭಯದಿಂದ, ಸಿಖ್ ಮತ್ತು ಹಿಂದೂ ಕುಟುಂಬಗಳು ದೇಶವನ್ನು ತೊರೆಯಲು ಮುಂದಾಗಿದ್ದಾರೆ ಎಂದು ಕಾಬೂಲ್ ಮೂಲದ ಸಿಖ್ ಉದ್ಯಮಿ ಮಂಗಳವಾರ ಹೇಳಿದ್ದಾರೆ. ಆದಾಗ್ಯೂ, ಕೆಲವು ತಾಲಿಬಾನ್ ನಾಯಕರು ಸಿಖ್ಖರು ಮತ್ತು ಹಿಂದೂಗಳಿಗೆ ತಮ್ಮ ಸುರಕ್ಷತೆಯ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
ತಾಲಿಬಾನ್ ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರ ಭಾರತದ ಅಧಿಕಾರಿಗಳು ಸಿಖ್ಖರ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅಫ್ಘಾನಿಸ್ತಾನದ ಕಾಬೂಲ್ ಬಳಿಯ ಗುರುದ್ವಾರದಲ್ಲಿ ಆಶ್ರಯ ಪಡೆಯುತ್ತಿರುವ ಅವರು ಹೇಳಿದರು, ಅವರನ್ನು ಆದಷ್ಟು ಬೇಗ ಭಾರತಕ್ಕೆ ಕರೆತರಲಾಗುವುದು ಎಂದು ಪುರಿ ಮಂಗಳವಾರ ಹೇಳಿದ್ದರು. ಸಿಖ್ಖರ ಸಹಾಯಕ್ಕಾಗಿ ಬಿಜೆಪಿ ಸಂಸದ ಹನ್ಸ್ ರಾಜ್ ಹನ್ಸ್ ಅವರನ್ನು ಸಂಪರ್ಕಿಸಿದ ಪುರಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೂ ಚರ್ಚಿಸಿದ್ದರು.
"ನಾವು ಸಿಖ್ ನಾಯಕರು ಮತ್ತು ಅಫ್ಘಾನಿಸ್ತಾನದಲ್ಲಿ ಸಂಪರ್ಕದಲ್ಲಿದ್ದೇವೆ. ಅವರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಕರೆತರಲಾಗುವುದು "ಎಂದು ಪುರಿ ಪಿಟಿಐಗೆ ತಿಳಿಸಿದರು. ಪಂಜಾಬ್ ಮೂಲದ ಹನ್ಸ್, ಭಾರತೀಯ ಮೂಲದ ಸುಮಾರು 250 ಸಿಖ್ಖರು ಕಾಬೂಲ್ ಸಮೀಪದ ಗುರುದ್ವಾರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಮತ್ತು ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.
ಅಫಘಾನ್ ಬಿಕ್ಕಟ್ಟಿನಿಂದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಮತ್ತೆ ಮುನ್ನೆಲೆಗೆ ತರಲಾಗಿದೆ, ಏಕೆಂದರೆ ಇದು ಡಿಸೆಂಬರ್ 31, 2014 ಕ್ಕಿಂತ ಮೊದಲು ಭಾರತಕ್ಕೆ ಬಂದ ಶೋಷಿತ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಕಾಯಿದೆಯ ಅಡಿಯಲ್ಲಿ ಬರುವ ನಿಯಮಗಳನ್ನು ಇನ್ನೂ ಸ್ಪಷ್ಟವಾಗಿ ಸೂಚಿಸಿಲ್ಲ. ಅಲ್ಲದೇ ಈ ಕಾಯ್ದೆಯಲ್ಲಿ ಮುಸ್ಲಿಂಮರಿಗೆ ಅವಕಾಶ ನೀಡಿಲ್ಲ ಎನ್ನುವ ಕಾರಣಕ್ಕೂ ವಿವಾದಕ್ಕೆ ಎಡೆ ಮಅಡಿಕೊಟ್ಟಿದೆ.
ಎಲ್ಲಾ ಭಾರತೀಯರು ಮತ್ತು ಅಫ್ಘಾನ್ ಸಿಖ್ಖರು ಮತ್ತು ಹಿಂದೂಗಳನ್ನು ತಮ್ಮ ತಾಯ್ನಾಡಿಗೆ ಕರೆದುಕೊಳ್ಳಲು ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿತು. ಗೃಹ ವ್ಯವಹಾರಗಳ ಸಚಿವಾಲಯವು ವೀಸಾ ನಿಬಂಧನೆಗಳನ್ನು ಮರುಮೌಲ್ಯಮಾಪನ ಮಾಡಿದ ನಂತರ, ಇದು ಅಫಘಾನ್ ಪ್ರಜೆಗಳಿಗೆ, ಪ್ರಾಥಮಿಕವಾಗಿ ಹಿಂದೂ ಅಥವಾ ಸಿಖ್ಖರಿಗೆ ಹೊಸ ಎಲೆಕ್ಟ್ರಾನಿಕ್ ವೀಸಾ ವರ್ಗವನ್ನು ಸೃಷ್ಟಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ