• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಜನಮನ ಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇಂದಿನ ಫಲಿತಾಂಶವೇ ತಾಜಾ ನಿದರ್ಶನ; ಎಚ್​.ಡಿ. ಕುಮಾರಸ್ವಾಮಿ

ಜನಮನ ಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇಂದಿನ ಫಲಿತಾಂಶವೇ ತಾಜಾ ನಿದರ್ಶನ; ಎಚ್​.ಡಿ. ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ.

ಹೆಚ್.ಡಿ. ಕುಮಾರಸ್ವಾಮಿ.

ಜೆಡಿಎಸ್‌ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂಬ ವಿಶ್ವಾಸದ ಮಾತುಗಳನ್ನು ಆಡಿದ್ದಾರೆ.

  • Share this:

ಬೆಂಗಳೂರು: ಬೆಳಗಾವಿ ಲೋಕಸಭೆ ಸೇರಿದಂತೆ ರಾಜ್ಯದ ಎರಡು ವಿಧಾನಸಭೆಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಮತ್ತು ಐದು ರಾಜ್ಯಗಳ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು, ಮತ್ತೆ ಅಧಿಕಾರ ಸ್ಥಾಪಿಸಿರುವ ವಿಷಯವಾಗಿ ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.


ಬಸವಕಲ್ಯಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣ ಬಲ ನಮ್ಮ ಗೆಲುವು ಕಸಿದಿರಬಹುದು. ಆದರೆ ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.







5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ರಾಜ್ಯದಲ್ಲಿ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ. ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿ ನಿಂತ‌ ದೀದಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‌ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲೂ ಮುಂದಡಿ ಇಡುತ್ತಲೇ ಮುಂದೆ ಸಾಗಿದ ಮಮತಾ ಬ್ಯಾನರ್ಜಿ ಅ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ. ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತು ಮಾಡಿದ್ದಾರೆ. ಅಧಿಕಾರ, ಹಣದ ದರ್ಪದಿಂದ ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿ ಹಾಕಲಾರವು. ಜನಮನ ಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ ಎಂದು ಹೇಳಿದ್ದಾರೆ.


ಇದನ್ನು ಓದಿ: Maski By Election Result: ಮಸ್ಕಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಪ್ರತಾಪಗೌಡ ಪಾಟೀಲರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದ ತುರ್ವಿಹಾಳ!








ಜೆಡಿಎಸ್‌ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂಬ ವಿಶ್ವಾಸದ ಮಾತುಗಳನ್ನು ಆಡಿದ್ದಾರೆ.

top videos
    First published: